ಕಚೇರಿ ಉದ್ಘಾಟನೆ ವೇಳೆ ಒಡಿಶಾ ಆರೋಗ್ಯ ಸಚಿವರ ಮೇಲೆ ಗುಂಡು ಹಾರಿಸಿದ ಪೊಲೀಸ್ ಸಿಬ್ಬಂದಿ ; ಸ್ಥಿತಿ ಗಂಭೀರ 

29-01-23 07:49 pm       HK News Desk   ದೇಶ - ವಿದೇಶ

ಒಡಿಶಾದ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಬ್ರಜರಾಜ ನಗರದ ಗಾಂಧಿ ಚೌಕ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಭುವನೇಶ್ವರ, ಜ.29: ಒಡಿಶಾದ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಬ್ರಜರಾಜ ನಗರದ ಗಾಂಧಿ ಚೌಕ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಝಾರ್ಸುಗುಡ ಜಿಲ್ಲೆಯ ಬ್ರಜರಾಜನಗರ ಬಳಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿವೆ.

ಸಚಿವ ನಬಾ ಕಿಶೋರ್ ದಾಸ್ ಅವರು ವಾಹನದಿಂದ ಕೆಳಗೆ ಇಳಿಯುತ್ತಿದ್ದಂತೆ ಅವರ ಮೇಲೆ ಗುಂಡು ಹಾರಿಸಲಾಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಆದರೆ, ದಾಳಿಯ ಹಿಂದಿನ ಉದ್ದೇಶಗಳು ಇನ್ನೂ ಸ್ಪಷ್ಟವಾಗಿಲ್ಲ.

Odisha Health Minister Naba Das shot at by cop, critical

Odisha minister Naba Das shot on chest, critical | India | Onmanorama

ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡು ರಕ್ತಸಿಕ್ತವಾಗಿದ್ದ ಅವರನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವ ದೃಶ್ಯಗಳು ಹೊರಬಂದಿವೆ.

"ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ಗೋಪಾಲ್ ದಾಸ್  ಸಚಿವರ ಮೇಲೆ ಗುಂಡು ಹಾರಿಸಿದ್ದಾನೆ ಎಂದು ತಿಳಿದುಬಂದಿದೆ . ಗಾಯಗೊಂಡ ಸಚಿವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ" ಎಂದು ಬ್ರಜರಾಜನಗರ ಉಪವಿಭಾಗದ ಪೊಲೀಸ್ ಅಧಿಕಾರಿ ಗುಪ್ತೇಶ್ವರ ಭೋಯ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ. 

Shocking Video Of Odisha Minister Naba Kishore Das Being Shot Released,  Stated To Be Critical

Odisha Health Minister Critically Injured After Being Shot At, Airlifted to  Bhubaneswar

ಸಾರ್ವಜನಿಕ ಕುಂದುಕೊರತೆಗಳ ಕಚೇರಿ ಉದ್ಘಾಟನೆಯಲ್ಲಿ ಸಚಿವ ನಬಾ ದಾಸ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅವರು ಕಾರಿನಿಂದ ಕೆಳಗೆ ಇಳಿಯುವಾಗ ಅವರನ್ನು ಸ್ವಾಗತಿಸಲು ಜನರು ಜಮಾಯಿಸಿದರು. ಇದ್ದಕ್ಕಿದ್ದಂತೆ ಗುಂಡಿನ ಸದ್ದು ಕೇಳಿಸಿತು. ಪೊಲೀಸ್ ಸಿಬ್ಬಂದಿಯೊಬ್ಬರು ಹತ್ತಿರದಿಂದ ಗುಂಡು ಹಾರಿಸಿ ಓಡಿಹೋಗುವುದನ್ನು ನಾವು ನೋಡಿದ್ದೇವೆ. ಸಚಿವರನ್ನು ವಿಮಾನದಲ್ಲಿ ಭುವನೇಶ್ವರಕ್ಕೆ ಕರೆದೊಯ್ಯಲಾಗುವುದು" ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

Odisha Health Minister Naba Das on Sunday sustained injuries after being shot at near Brajarajnagar in Jharsuguda district. An Assistant Sub-inspector of Police who fired at the minister was nabbed by local people and handed over to the police. "Assistant Sub-inspector of Police (ASI) Gopal Das opened fire at the minister, who sustained bullet injuries. The minister was then rushed to a hospital," Brajrajnagar SDPO Gupteswar Bhoi told reporters, as quoted by news agency PTI.