ಬ್ರೇಕಿಂಗ್ ನ್ಯೂಸ್
20-10-20 01:22 pm Headline Karnataka News Network ದೇಶ - ವಿದೇಶ
ಬೆಂಗಳೂರು, ಅ.20: ಉಪಚುನಾವಣೆಯ ನಂತರ ಯಾವುದೇ ಸಂದರ್ಭದಲ್ಲಾದರೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನಾಯಕತ್ವ ಬದಲಾವಣೆಯಾಗಲಿದ್ದು, ಲಿಂಗಾಯಿತ ಸಮುದಾಯದವರೇ ರಾಜ್ಯದ ಸಾರಥ್ಯ ವಹಿಸಲಿದ್ದಾರೆ ಎಂದು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ಒಂದೆಡೆ ಯಡಿಯೂರಪ್ಪ ನಾಯಕತ್ವ ಬದಲಾವಣೆಯಾಗಲಿದೆ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿಬರುತ್ತಿರುವ ಬೆನ್ನಲ್ಲೇ ಯತ್ನಾಳ್ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಮಹತ್ವ ಪಡೆದುಕೊಂಡಿದೆ. ವಿಜಯಪುರ ನಗರದ ವಾರ್ಡ್ ಸಂಖ್ಯೆ 3ರಲ್ಲಿ ನಡೆದ ಹನುಮಂತ ದೇವಸ್ಥಾನದ ಕಾಂಪೌಂಡ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೆಚ್ಚು ದಿನ ಸಿಎಂ ಆಗಿ ಉಳಿಯುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ. ಏಕೆಂದರೆ ಮೇಲಿನವರಿಗೂ ಬಿಎಸ್‍ವೈ ಸಾಕಾಗಿದ್ದಾರೆ.

ಈ ಹಿನ್ನೆಲೆಯಲ್ಲಿಯೇ ಮೊನ್ನೆ ಉಮೇಶ ಕತ್ತಿಯವರು, ಇವರು ಶಿವಮೊಗ್ಗ ಮುಖ್ಯಮಂತ್ರಿಯೋ? ಕರ್ನಾಟಕದ ಮುಖ್ಯಮಂತ್ರಿಯೋ ಎಂದು ಹೇಳಿಕೆ ನೀಡಿದ್ದರು ಎಂದು ಯತ್ನಾಳ್ ತಮ್ಮ ಭಾಷಣದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗುತ್ತಾರೆ. ಉತ್ತರ ಕರ್ನಾಟಕದವರು 100 ಶಾಸಕರನ್ನು ಗೆಲ್ಲಿಸಿ ವಿಧಾನಸೌಧಕ್ಕೆ ಕಳುಹಿಸುತ್ತಾರೆ. ಆದರೆ ಉಳಿದ ಭಾಗದಲ್ಲಿ ಕೇವಲ 15 ಶಾಸಕರು ಬಿಜೆಪಿಯಿಂದ ಗೆದ್ದು ಅವರಲ್ಲೇ ಒಬ್ಬರು ಸಿಎಂ ಆಗುತ್ತಾರೆ. ಹೀಗಾಗಿ ಮುಂದಿನ ಬಾರಿ ಉತ್ತರ ಕರ್ನಾಟಕದವರೇ ಸಿಎಂ ಆಗೋದು ಪಕ್ಕಾ. ಜೊತೆಗೆ ಉತ್ತರ ಕರ್ನಾಟಕದವರನ್ನೇ ಸಿಎಂ ಮಾಡುವ ಭರವಸೆಯನ್ನು ಪ್ರಧಾನಿ ಮೋದಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮಾಜಿ ಕಾಪೆರ್ರೇಟರ್ ಉಮೇಶ ವಂದಾಲ ಅವರು ವಿಜಯಪುರಕ್ಕೆ ಬಂದಿದ್ದ ರೂ. 125 ಕೋಟಿ ಅನುದಾನವನ್ನು ಸರಕಾರ ವಾಪಸ್ ಪಡೆದಿದ್ದನ್ನು ಪ್ರಸ್ತಾಪಿಸಿದ್ದರು. ವಂದಾಲರ ಈ ಮಾತನ್ನು ಮತ್ತೊಮ್ಮೆ ಪ್ರಸ್ತಾಪಿಸಿದ ಯತ್ನಾಳ್, ವಿಜಯಪುರಕ್ಕೆ ಬಂದಿದ್ದ ರೂ. 125 ಕೋಟಿ ಅನುದಾನವನ್ನು ಸಿಎಂ ಹಿಂದಕ್ಕೆ ಪಡೆದಿದ್ದಾರೆ. ಸಿಎಂ ಅನುದಾನವನ್ನು ಬರೀ ಶಿವಮೊಗ್ಗಕ್ಕೆ ಒಯ್ಯುತ್ತಿದ್ದಾರೆ. ಇನ್ನೇನು ಅವರು ಬಹಳ ದಿವಸ ಅಧಿಕಾರದಲ್ಲಿ ಇರುವುದಿಲ್ಲ ಎಂದರು. ಈಗಾಗಲೇ ನನಗೂ ಹಾಗೂ ಸಿಎಂ ಯಡಿಯೂರಪ್ಪ ಅವರಿಗೂ ಜಗಳ ಶುರುವಾಗಿದೆ. ನನ್ನ ಮತಕ್ಷೇತ್ರದ 125 ಕೋಟಿ ಅನುದಾನವನ್ನು ಯಡಿಯೂರಪ್ಪ ಕಡಿತ ಮಾಡಿದ್ದರು. ಈ ವಿಚಾರದಲ್ಲಿ ಒಂದು ಬಾರಿ ಸಿಎಂ ವಿರುದ್ಧ ಜಗಳ ಆಗಿದೆ. ಇನ್ನೇನು ಬಿಎಸ್‍ವೈ ಬಹಳ ದಿನ ಅಧಿಕಾರದಲ್ಲಿ ಇರುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.
ವಿಜಯಪುರಕ್ಕೆ ನೀಡಿದ್ದ ಅನುದಾನ ವಾಪಸ್ ಪಡೆದಿದ್ದರೂ ನಾನು ಬಿಡಲ್ಲ. ಹೇಗೆ ತರಬೇಕೋ ತರ್ತಿನಿ. ಬೆಂಗಳೂರಿನವರು ಬಂದು ವಿಜಯಪುರದ ನಮ್ಮ ಮನೆಯ ಮುಂದೆ ನಿಲ್ಲಬೇಕು. ಈಗ ನಾವು ಅವರ ಮನೆಯ ಮುಂದೆ ಹೋಗಿ ನಿಲ್ಲುತ್ತಿದ್ದೇವೆ. ಉತ್ತರ ಕರ್ನಾಟಕದ ಶಾಸಕರಿಂದಲೇ ಬಿಜೆಪಿಯವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಮಂಡ್ಯ, ಚಾಮರಾಜನಗರ ಮತ್ತು ಕೋಲಾರದಲ್ಲಿ ಯಾರಾದರೂ ಬಿಜೆಪಿಗೆ ಓಟ್ ಹಾಕ್ತಾರಾ? ಎಂದು ಪ್ರಶ್ನಿಸಿದ ಅವರು, ಉತ್ತರ ಕರ್ನಾಟಕದವರೇ 100 ಶಾಸಕರನ್ನು ಆಯ್ಕೆ ಮಾಡಿ ಕಳುಹಿಸುತ್ತಾರೆ.
ಆ ಮೇಲೆ ಆ ಕಡೆ 10 ರಿಂದ 15 ಶಾಸಕರು ಆಯ್ಕೆಯಾಗಿರುತ್ತಾರೆ. ಹೀಗಾಗಿ ಮೇಲಿನವರಿಗೂ ಇದು ಗೊತ್ತಾಗಿದೆ. ಮುಂದಿನ ಉತ್ತರಾಧಿಕಾರಿ ಉತ್ತರ ಕರ್ನಾಟಕದವರೇ ಆಗುತ್ತಾರೆ. ಪ್ರಧಾನಿ ಮಂತ್ರಿಗಳ ಮನಸ್ಸಿನಲ್ಲಿ ಈ ವಿಚಾರ ಬಂದಿದೆ. ಯಡಿಯೂರಪ್ಪ ಬಳಿಕ ಉತ್ತರ ಕರ್ನಾಟಕವದವರಿಗೆ ಸಿಎಂ ಮಾಡೋಣ ಎಂದಿದ್ದಾರೆ. ಅದೂ ಕೂಡ ಬಹುತೇಕ ಫೈನಲ್ ಆಗಿದೆ ಎಂದು ಯತ್ನಾಳ ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ.

ಈ ಮುಂಚೆ ಸಿಎಂ ಯಡಿಯೂರಪ್ಪ ಆಪ್ತ ವಲಯದಲ್ಲಿದ್ದ ಯತ್ನಾಳ, ಸಿಎಂ ವರಸೆಗೆ ಬೇಸತ್ತು ಆಗಾಗ ವಾಗ್ದಾಳಿ ನಡೆಸುತ್ತಲೇ ಇದ್ದಾರೆ. ಸಿಎಂ ಯತ್ನಾಳ್ ಅವರಿಗೆ ಸಚಿವ ಸ್ಥಾನ ನೀಡದೇ ಸಿ. ಸಿ. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಿದಾಗಿನಿಂದ ಮತ್ತು ವಿಜಯಪುರ ನಗರಕ್ಕೆ ನೀಡಲಾಗಿದ್ದ ಅನುದಾನವನ್ನು ವಾಪಸ್ ಪಡೆದಿದ್ದರಿಂದ ಯತ್ನಾಳ ಅವರು ಯಡಿಯೂರಪ್ಪ ಮೇಲೆ ಗರಮ್ಮಾಗಿದ್ದಾರೆ.
ಹಿಂದೂ, ಲಿಂಗಾಯಿತ ಮತ್ತು ಹಿರಿಯ ನಾಯಕ ತಾವಾಗಿದ್ದರೂ ಸಿಎಂ ಯತ್ನಾಳ ಅವರಿಗೆ ಕಡಿವಾಣ ಹಾಕಲು ಯತ್ನಿಸುತ್ತಿದ್ದಾರೆ. ಅಲ್ಲದೇ, ಸಿಎಂ ತಮ್ಮ ಪುತ್ರ ವಿಜಯೇಂದ್ರ ಅವರನ್ನು ಬಳಸಿ ಯತ್ನಾಳ ಅವರನ್ನು ಮೂಲೆಗುಂಪು ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬುದೂ ಈಗ ಬಹುತೇಕ ಲಿಂಗಾಯಿತ ಶಾಸಕರಿಗೆ ಮನವರಿಕೆಯಾಗಿದೆ.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm