ಬ್ರೇಕಿಂಗ್ ನ್ಯೂಸ್
08-02-23 06:12 pm HK News Desk ದೇಶ - ವಿದೇಶ
ನವದೆಹಲಿ, ಫೆ.8 : ಹಿಮಾಲಯದಲ್ಲಿ ಒಂದು ಸಾವಿರಕ್ಕೂ ಅಧಿಕ ಹಿಮ ಸರೋವರಗಳು ಕರಗುತ್ತಿದ್ದು, ಭಾರತದಲ್ಲಿ ಇದರಿಂದ ಸುಮಾರು 30 ಲಕ್ಷ ಜನರು ಭೀಕರ ಪ್ರವಾಹಕ್ಕೆ ತುತ್ತಾಗಲಿದ್ದಾರೆ ಎಂದು ಅಧ್ಯಯನ ವರದಿಯೊಂದು ಎಚ್ಚರಿಕೆ ನೀಡಿದೆ.
ಬ್ರಿಟನ್ ನ್ಯೂ ಕ್ಯಾಸಲ್ ವಿಶ್ವವಿದ್ಯಾನಿಲಯದ ವಿಜ್ಞಾನಿಗಳ ನೇತೃತ್ವದ ಅಂತರಾಷ್ಟ್ರೀಯ ತಂಡವು ಈ ಕುರಿತು ಅಧ್ಯಯನ ನಡೆಸಿದ್ದು, ಹೊಮ ಸರೋವರಗಳ ಪ್ರವಾಹದಿಂದ ಕೃತಕ ನದಿ, ಸರೋವರಗಳು ಸೃಷ್ಟಿಯಾಗಲಿವೆ ಎನ್ನಲಾಗುತ್ತಿದೆ. ಅಧ್ಯಯನದ ಪ್ರಕಾರ ಭಾರತದಲ್ಲಿ ಸುಮಾರು 30 ಲಕ್ಷ ಜನರು ಹಿಮನದಿಯ ಸರೋವರಗಳ ಪ್ರವಾಹದ ಅಪಾಯದಲ್ಲಿದ್ದಾರೆ, ಇದು ವಿಶ್ವದಲ್ಲೇ ಅತಿ ಹೆಚ್ಚು ಎಂದು ವರದಿ ಹೇಳಿದೆ.
ನೇಚರ್ ಕಮ್ಯುನಿಕೇಷನ್ಸ್ ಜರ್ನಲ್ ನಲ್ಲಿ ಈ ವರದಿ ಪ್ರಕಟಿಸಲಾಗಿದೆ. ಹಿಮನದಿಗಳ ಪ್ರವಾಹದಿಂದ ಪ್ರಪಂಚದಲ್ಲಿ 15 ಮಿಲಿಯನ್ ಜನರು ಅಪಾಯದಲ್ಲಿದೆ ಎಂದು ವರದಿ ಅಂದಾಜಿಸಿದೆ. ಆದ್ಯತೆಯ ಪ್ರದೇಶಗಳನ್ನು ಗುರುತಿಸಿದ ಸಂಶೋಧಕರು ಭಾರತ, ಪಾಕಿಸ್ತಾನ, ಪೆರು ಮತ್ತು ಚೀನಾದಲ್ಲೇ ಪ್ರವಾಹಕ್ಕೆ ಹೆಚ್ಚಿನ ಜನರು ತುತ್ತಾಗಲಿದ್ದಾರೆ ಎಂದು ಅಂದಾಜಿಸಿದ್ದಾರೆ.
![]()
ಹಿಮ ಸರೋವರಗಳಿಂದ ಕರಗಿದ ನೀರು ಹರಿಯುತ್ತಾ ಬಂದು ಒಂದು ಜಾಗದಲ್ಲಿ ಸಂಗ್ರಹಗೊಳ್ಳುತ್ತದೆ. ಬಳಿಕ ಆ ಜಾಗ ಸರೋವರವಾಗಿ ಮಾರ್ಪಾಡುಗೊಳ್ಳುತ್ತದೆ. ನೀರು ಸಂಗ್ರಹ ಹೆಚ್ಚಾದಂತೆ ಕಟ್ಟೆ ಒಡೆದು ಇಳಿದಾರಿಗೆ ಪ್ರವಾಹವಾಗಿ ಹರಿಯುತ್ತದೆ. ಇದು ಕೆಲವು ಸಂದರ್ಭಗಳಲ್ಲಿ 120 ಕಿಲೋಮೀಟರ್ ಗಳಿಗಿಂತ ಹೆಚ್ಚಿರಬಹುದು. ಇದು ಹೆಚ್ಚು ವಿನಾಶಕಾರಿಯಾಗಬಹುದು. ಆಸ್ತಿ, ಮೂಲಸೌಕರ್ಯ ಮತ್ತು ಕೃಷಿ ಭೂಮಿಯನ್ನು ಕಬಳಿಸಬಹುದು ಮತ್ತು ಭಾರೀ ಜೀವ ಹಾನಿಗೂ ಕಾರಣವಾಗಬಹುದು ಎಂದು ಅಧ್ಯಯನ ಹೇಳಿದೆ.
Three million people in India are at risk of flooding caused by glacial lakes, the highest number of those exposed in the world, according to new study. The study by an international team led by scientists at UK's Newcastle University, UK is the first global assessment of areas at greatest risk of Glacial Lake Outburst Floods (GLOF). Published in the journal Nature Communications on Tuesday, it estimates that 15 million people around the world are at risk from flooding caused by glacial lakes.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm