ಬ್ರೇಕಿಂಗ್ ನ್ಯೂಸ್
08-02-23 11:06 pm HK News Desk ದೇಶ - ವಿದೇಶ
ಕೋಜಿಕ್ಕೋಡ್, ಫೆ.8 : ಕೇರಳದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಲಿಂಗತ್ವ ಅಲ್ಪಸಂಖ್ಯಾತರೊಬ್ಬರು ಬುಧವಾರ ಮಗುವಿಗೆ ಜನ್ಮ ನೀಡಿದ್ದು, ಇದು ದೇಶದ ಮೊದಲ ಪ್ರಕರಣ ಎನ್ನಲಾಗಿದೆ. ಬುಧವಾರ ಬೆಳಗ್ಗೆ 9.30ರ ವೇಳೆಗೆ ಸಿಸೇರಿಯನ್ ಶಸ್ತ್ರಚಿಕಿತ್ಸೆಯ ಮೂಲಕ ಸಹದ್ ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಜಹಾದ್ ಅವರ ಸಂಗಾತಿ ಜಿಯಾ ಪಾವಲ್ ತಿಳಿಸಿದ್ದಾರೆ.
‘ಮಗು ಮತ್ತು ಸಹಾದ್ ಇಬ್ಬರೂ ಆರೋಗ್ಯವಾಗಿದ್ದಾರೆ’ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಜಿಯಾ, ನವಜಾತ ಶಿಶುವಿನ ಲಿಂಗವನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ.
![]()
ಇತ್ತೀಚೆಗಷ್ಟೇ ಜಿಯಾ ತಮ್ಮ ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ಸಹಾದ್ ಅವರೀಗ ಎಂಟು ತಿಂಗಳ ಗರ್ಭಿಣಿ ಎಂದು ಘೋಷಿಸಿದ್ದರು. ‘ನಾನು ತಾಯಿಯಾಗುವ ಮತ್ತು ಅವನು ತಂದೆಯಾಗುವ ಕನಸನ್ನು ನನಸಾಗಿಸಿಕೊಳ್ಳಲಿದ್ದೇವೆ. ಎಂಟು ತಿಂಗಳ ಭ್ರೂಣವು ಈಗ ಸಹಾದ್ ಹೊಟ್ಟೆಯಲ್ಲಿ ಬೆಳೆಯುತ್ತಿದೆ. ನಮಗೆ ತಿಳಿದುಬಂದ ಮಾಹಿತಿ ಪ್ರಕಾರ, ಭಾರತದಲ್ಲಿ ಲಿಂಗಪರಿವರ್ತಿತ ಪುರುಷ (ಟ್ರಾನ್ಸ್‌ಮ್ಯಾನ್) ಗರ್ಭಧಾರಣೆ ಮಾಡಿರುವುದು ಇದೇ ಮೊದಲು’ ಎಂದೂ ಜಿಯಾ ತಮ್ಮ ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ತಿಳಿಸಿದ್ದರು.
ನಾನು ಗರ್ಭಿಣಿಯಾಗುವ ಬಗ್ಗೆ ಎಂದಿಗೂ ಯೋಚಿಸಿರಲಿಲ್ಲ. ಒಂದು ವೇಳೆ ಹಾಗೆ ಮೊದಲೇ ಯೋಚಿಸಿದ್ದರೆ ಶಸ್ತ್ರಚಿಕಿತ್ಸೆಯ ಮೂಲಕ ನನ್ನ ಸ್ತನಗಳನ್ನು ತೆಗೆಸಿಕೊಳ್ಳುತ್ತಿರಲಿಲ್ಲ’ ಎಂದೂ ಸಹಾದ್ ತಿಳಿಸಿದ್ದರು.
ಹುಟ್ಟಿನಿಂದ ಹೆಣ್ಣಾಗಿದ್ದ ಸಹಾದ್, ಲಿಂಗಪರಿವರ್ತಿತ ಪುರುಷನಾಗಿದ್ದು, ಹಾರ್ಮೋನ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಮಗು ಹೊಂದಬೇಕೆಂಬ ಆಸೆಯಿಂದ ಹಾರ್ಮೋನ್ ಚಿಕಿತ್ಸೆಯನ್ನು ನಿಲ್ಲಿಸಿದ್ದರು. ಸಹಾದ್ ಅವರ ಸಂಗಾತಿ ಜಿಯಾ ಪಾವಲ್ ಹುಟ್ಟಿನಿಂದ ಗಂಡಾಗಿದ್ದು, ಲಿಂಗಪರಿವರ್ತನೆಯ ಮೂಲಕ ಹೆಣ್ಣಾಗಿದ್ದಾರೆ. ಈಗ ಸಹಾದ್ ಮಗುವಿಗೆ ಜನ್ಮ ನೀಡಿದ್ದು ಹೊಸ ದಾಖಲೆ ಸೇರಿದ್ದಾರೆ.
A Keralite transgender couple, who recently announced pregnancy, was blessed with a baby at a state-run hospital in Kozhikode on Wednesday, considered to be the first such case in the country. "The baby was born by around 9.30 am through a Cesarean Section at the Government Medical College Hospital," Ziya Paval, one of the trans partners, told PTI. Both the baby and Zahhad, her partner who delivered the child, are doing well, Ms Paval added.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm