ಬ್ರೇಕಿಂಗ್ ನ್ಯೂಸ್
09-02-23 07:05 pm HK News Desk ದೇಶ - ವಿದೇಶ
ನವದೆಹಲಿ, ಫೆ.9 : ಮೋದಿ ಸರ್ಕಾರದಿಂದ ದೇಶದಲ್ಲಿ ಮೂಲಸೌಕರ್ಯ, ಗ್ರಾಮೀಣಾಭಿವೃದ್ಧಿ, ಆರೋಗ್ಯ, ಶಿಕ್ಷಣ, ಸಾಮಾಜಿಕ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ನಾನಾ ಅಭಿವೃದ್ಧಿ ಯೋಜನೆಗಳು ನಡೆಯುತ್ತಿವೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಯೋಗ, ಆಯುರ್ವೇದ ಈಗ ಆಕರ್ಷಣೀಯವಾಗಿದೆ ಎಂದು ರಾಜ್ಯಸಭೆಯ ಸದಸ್ಯ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ ರಾಜ್ಯಸಭೆಯಲ್ಲಿ ಗುರುವಾರ ಮೆಚ್ಚುಗೆ ವ್ಯಕ್ತಪಡಿಸಿದರು.
ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾನಿರ್ಣಯದ ಚರ್ಚೆಯ ವೇಳೆ ರಾಜ್ಯಸಭೆಯಲ್ಲಿ ಮಾತನಾಡಿದ ವೀರೇಂದ್ರ ಹೆಗ್ಗಡೆ ಅವರು, ಭಾರತದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಯೋಜನೆಗಳು ಜನಪರವಾಗಿವೆ. ಅವರ ಜೀವನದ ಗುಣಮಟ್ಟ ವೃದ್ಧಿಗೆ ಸಹಕಾರಿಯಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸ್ವಾಮಿತ್ವ ಯೋಜನೆಯ ಅಡಿಯಲ್ಲಿ ಕಂದಾಯ ಇಲಾಖೆಯು ತಂತ್ರಜ್ಞಾನದ ಸಹಕಾರದಿಂದ ಕೃಷಿ ಮತ್ತು ಭೂಮಿಯ ಮ್ಯಾಪಿಂಗ್ ಮಾಡುತ್ತಿರುವುದರಿಂದ ಭೂ ದಾಖಲೆಯು ವ್ಯವಸ್ಥಿತವಾಗುತ್ತಿದೆ. ರೈತರಿಗೆ ಇದರಿಂದ ಅನುಕೂಲವಾಗುತ್ತಿದೆ ಎಂದರು.

ಪುಣ್ಯಕ್ಷೇತ್ರ ಕಾಶಿಗೆ ಮೊನ್ನೆ ಹೋಗಿದ್ದೆ. ಅಲ್ಲಿ ಆಗಿರುವ ಅಭಿವೃದ್ಧಿ ನೋಡಿ ನನಗೆ ವಿಸ್ಮಯವಾಯಿತು. ಮೋದಿಯವರ ಸರ್ಕಾರ ಅಭಿವೃದ್ಧಿ ಮಂತ್ರ ಪಠಿಸುತ್ತಿದೆ. ಭಾಷೆಗಳು ನಮ್ಮನ್ನು ಒಂದುಗೂಡಿಸುತ್ತಿವೆ ಹೊರತು ಬೇರೆ ಮಾಡಲ್ಲ. ಎಲ್ಲ ಪ್ರಾದೇಶಿಕ ಭಾಷೆಗಳ ಸಂರಕ್ಷಣೆಗೆ ಕೇಂದ್ರ ಸರ್ಕಾರ ಆದ್ಯತೆ ನೀಡಿದೆ. ಏಕ್ ಭಾರತ್ ಶ್ರೇಷ್ಠ ಭಾರತ್ ಕಲ್ಪನೆಯನ್ನು ಪ್ರಧಾನಿ ನಮಗೆ ಕಟ್ಟಿಕೊಟ್ಟಿದ್ದಾರೆ ಎಂದರು.
ಕೇಂದ್ರ ಸರ್ಕಾರದ ಕಾರ್ಯವೈಖರಿಗಳಲ್ಲಿ ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ಎರಡನ್ನೂ ಕಾಣಬಹುದು. ಹೀಗಾಗಿ ಭವಿಷ್ಯದಲ್ಲಿ ಭಾರತಕ್ಕೆ ಒಳ್ಳೆಯ ಭವಿಷ್ಯ ಇದೆ. ಸರ್ಕಾರದಿಂದ ಮತ್ತಷ್ಟು ಅಭಿವೃದ್ಧಿಪರ ಯೋಜನೆಗಳು ಆಗಲಿ ಎಂದು ದೇಶದ ಜನತೆ ಹಾರೈಸುತ್ತಿದ್ದಾರೆ ಎಂದು ಹೆಗ್ಗಡೆಯವರು ವಿವರಿಸಿದರು.
Prime Minister Narendra Modi will reply to the Motion of Thanks to the President's Address at 2 pm in Rajya Sabha on Thursday during the ongoing Budget Session of the Parliament. "Reply by the Prime Minister will be at 2 pm tomorrow," said Rajya Sabha Chairman Jagdeep Dhankhar after the last speaker spoke on the motion on Wednesday. The debate on the motion of thanks to the President's Address in Rajya Sabha concluded on Wednesday.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm