ಬ್ರೇಕಿಂಗ್ ನ್ಯೂಸ್
12-02-23 02:43 pm HK News Desk ದೇಶ - ವಿದೇಶ
ನವದೆಹಲಿ, ಫೆ.12: ಮಹತ್ವದ ಬೆಳವಣಿಗೆಯಲ್ಲಿ ಕಳೆದ ತಿಂಗಳು ನಿವೃತ್ತರಾಗಿದ್ದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರಾಗಿ ಕೇಂದ್ರ ಸರಕಾರ ನೇಮಕಗೊಳಿಸಿದೆ.
ಎಸ್.ಅಬ್ದುಲ್ ನಜೀರ್ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದ್ರೆ ಬಳಿಯ ಬೆಳುವಾಯಿ ನಿವಾಸಿ. ಐತಿಹಾಸಿಕ ಅಯೋಧ್ಯೆ ರಾಮಜನ್ಮ ಭೂಮಿ ವಿವಾದ ಕುರಿತು ತೀರ್ಪು ನೀಡಿದ ಸುಪ್ರೀಂ ಕೋರ್ಟ್ ಪೀಠದ ಸದಸ್ಯರಾಗಿದ್ದ ಅಬ್ದುಲ್ ನಜೀರ್ ಜನವರಿ 14ರಂದು ತಮ್ಮ ಹುದ್ದೆಯಿಂದ ನಿವೃತ್ತರಾಗಿದ್ದರು.
ಅಬ್ದುಲ್ ನಜೀರ್ ಅವರು 1958ರ ಜನವರಿ 5ರಂದು ಜನಿಸಿದ್ದು ಮಂಗಳೂರಿನಲ್ಲಿ ಕಾನೂನು ಪದವಿ ಗಳಿಸಿ ಫೆಬ್ರವರಿ 18, 1983 ರಂದು ವಕೀಲರಾಗಿ ವೃತ್ತಿ ಆರಂಭಿಸಿದ್ದರು. ಬಳಿಕ ಕರ್ನಾಟಕ ಹೈಕೋರ್ಟ್ನಲ್ಲಿ ಪ್ರಾಕ್ಟೀಸ್ ಮಾಡಿದ್ದ ಅವರು 2003ರ ಮೇ 12 ರಂದು ಹೈಕೋರ್ಟ್ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು.
ಇತ್ತೀಚೆಗೆ ಅವರನ್ನು ಬೀಳ್ಕೊಡುವ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್, ನಜೀರ್ ಅವರ ಸರಳತೆಯ ಬಗ್ಗೆ ಪ್ರಸ್ತಾಪಿಸಿ ಕೊಂಡಾಡಿದ್ದರು. ಜಸ್ಟಿಸ್ ನಜೀರ್ 2019ರ ವರೆಗೆ ಪಾಸ್ಪೋರ್ಟ್ ಸಹ ಹೊಂದಿರಲಿಲ್ಲ ಮತ್ತು ಕೆಲವು ವಾರಗಳ ಹಿಂದೆಯಷ್ಟೇ ಮೊದಲ ಬಾರಿಗೆ ವಿದೇಶ ಪ್ರಯಾಣ ಮಾಡಿದ್ದರು. ಇದು ಅವರ ಸರಳ ಜೀವನಕ್ಕೆ ಸಾಕ್ಷಿ ಎಂದು ಹೇಳಿದ್ದರು.
ಆಂಧ್ರಪ್ರದೇಶ ರಾಜ್ಯಪಾಲ ಬಿಸ್ವ ಭೂಷಣ ಹರಿಚಂದನ್ ಸೇರಿದಂತೆ 14 ಮಂದಿ ರಾಜ್ಯಪಾಲರನ್ನು ವರ್ಗಾವಣೆ ಮಾಡಲಾಗಿದೆ. ಬಿಸ್ವ ಭೂಷಣ್ ಅವರನ್ನು ಛತ್ತೀಸ್ಗಢದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಛತ್ತೀಸ್ಗಢದ ರಾಜ್ಯಪಾಲರಾಗಿದ್ದ ಅನುಸೂಯ ಅವರನ್ನು ಮಣಿಪುರ ರಾಜ್ಯಪಾಲರನ್ನಾಗಿ ಮಾಡಲಾಗಿದೆ.
President Droupadi Murmu today notified the appointment of the Supreme Court's retired judge Justice S Abdul Nazeer as the third Governor of Andhra Pradesh. Syed Abdul Nazeer is a former judge of the Supreme Court native of Mangalore and retired on January 4 this year.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm