ಬ್ರೇಕಿಂಗ್ ನ್ಯೂಸ್
05-08-20 05:37 am Headline Karnataka News Network ದೇಶ - ವಿದೇಶ
ಬೈರುತ್, ಆಗಸ್ಟ್ 5: ಲೆಬನಾನ್ ರಾಜಧಾನಿ ಬೈರುತ್ ನಲ್ಲಿ ನಿನ್ನೆ ಸಂಭವಿಸಿದ ಭೀಕರ ಸ್ಫೋಟದಲ್ಲಿ 78 ಮಂದಿಯಷ್ಟು ಮೃತಪಟ್ಟಿದ್ದು, 4000ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಭೀಕರ ಸ್ಫೋಟದ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲೂ ವೈರಲ್ ಆಗುತ್ತಿದೆ.
ಕಳೆದ ಮೂರು ದಶಕಗಳಿಂದ ಲೆಬನಾನ್ ಯುದ್ಧಭೂಮಿಯಂತಾಗಿದ್ದು ಸ್ಪೋಟದ ಸದ್ದು , ಗುಂಡಿನ ಮೊರೆತ ಕಳೆದ ಕೆಲ ದಿನಗಳಿಂದ ತಗ್ಗಿದ್ದವು. ಆದರೆ ಈ ನಡುವೆ ಭೀಕರ ಸ್ಪೋಟ ಸಂಭವಿಸಿದೆ. ಬೈರುತ್ ನಗರದ ಬಂದರು ಪ್ರದೇಶದಲ್ಲಿ ಈ ಸ್ಪೋಟ ಸಂಭವಿಸಿದೆ. ಸ್ಪೋಟದ ಸದ್ದು 200 ಕಿಮೀ ದೂರದ ವರೆಗೆ ಅಪ್ಪಳಿಸಿದ್ದು ಸ್ಫೋಟದಿಂದಾಗಿ ಲೆಬನಾನ್ ನಗರದಲ್ಲಿ 3.7 ತೀವ್ರತೆಯ ಭೂಕಂಪ ಸಂಭವಿಸಿದೆ. ಸುಮಾರು 2 ಕಿ ಮೀ ನ ಸುತ್ತಳತೆಯಲ್ಲಿ ಕಟ್ಟಡಗಳಿಗೆ ಹಾನಿಯಾಗಿದೆ ಎನ್ನಲಾಗುತ್ತಿದೆ. ನ್ಯೂಕ್ಲಿಯರ್ ಬಾಂಬ್ ಸ್ಪೋಟದಂತೆ ಅಗಸದಲ್ಲಿ ಅಣಬೇ ಆಕೃತಿಯ ಹೊಗೆ ಸೃಷ್ಠಿಯಾಗಿತ್ತು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ಬಂದರು ಪ್ರದೇಶದ ರಾಸಾಯನಿಕ ಗೋದಾಮಿನಲ್ಲಿ ಸ್ಪೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಅಲ್ಲಿ 2750 ಟನ್ ಅಮೋನಿಯಂ ನೈಟ್ರೇಟ್ ಶೇಖರಣೆ ಮಾಡಲಾಗಿತ್ತು. ಅದಕ್ಕೆ ಬೆಂಕಿ ಹತ್ತಿಕೊಂಡು ಸ್ಫೋಟ ಆಗಿರುವ ಬಗ್ಗೆ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಆದರೆ ಲೆಬನಾನ್ ಸರಕಾರ ಇದನ್ನು ಖಚಿತ ಪಡಿಸಿಲ್ಲ. ಲೆಬನಾನ್ ಸರ್ಕಾರದ ಅಧಿಕಾರಿಗಳು ಅಂತಾರಾಷ್ಟ್ರೀಯ ಮಾಧ್ಯಮಗಳಿಗೆ ಸ್ಪೋಟದ ಬಗ್ಗೆ ಮಾಹಿತಿ ನೀಡಿದ್ದರೂ ಸ್ಪೋಟಕ್ಕೆ ಕಾರಣ ತಿಳಿಸಿಲ್ಲ.
ಸ್ಪೋಟದ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೃಶ್ಯದಲ್ಲಿ ಸ್ಪೋಟ ಸಂಭವಿಸಿದ ತಕ್ಷಣ ಕಿತ್ತಳೆ ಬಣ್ಣದಲ್ಲಿ ಗೋಪುರ ಆಕಾರದಲ್ಲಿ ಹೊಗೆ ಆಕಾಶದ ಎತ್ತರಕ್ಕೆ ಹಾರಿದೆ. ಅಲ್ಲದೆ, ಶಬ್ಧದ ತೀವ್ರತೆ ದೊಡ್ಡ ತರಂಗಗಳನ್ನು ಸೃಷ್ಟಿಸಿದೆ. ಪರಿಣಾಮ ಬಂದರು ಪ್ರದೇಶದಲ್ಲಿದ್ದ ಗೋದಾಮುಗಳು ಕಿಟಕಿ ಗಾಜುಗಳು ಮತ್ತು ಬಾಗಿಲುಗಳು ಹಾನಿಗೊಳಗಾಗಿವೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
09-09-26 12:16 pm
HK News Staffer
ಸೌದಿ ಅರೇಬಿಯಾದಲ್ಲಿ ಕುತ್ತಾರಿನ ಯುವಕ ದಿಢೀರ್ ಸಾವು...
08-09-26 09:19 pm
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm