ಬ್ರೇಕಿಂಗ್ ನ್ಯೂಸ್
27-02-23 03:20 pm HK News Desk ದೇಶ - ವಿದೇಶ
ಹೈದರಾಬಾದ್, ಫೆ.27: ರಾಗಿಂಗ್ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಿಸದೆ ಸಾವನಪ್ಪಿದ ಘಟನೆ ವಾರಂಗಲ್ ಜಿಲ್ಲೆಯಲ್ಲಿ ನಡೆದಿದೆ.
ಕಾಕತೀಯ ವೈದ್ಯಕೀಯ ಕಾಲೇಜಿನ(ಕೆಎಂಸಿ) ಅನಸ್ತೇಶಿಯಾ ವಿಭಾಗದಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಅಧ್ಯಯನ ಮಾಡುತ್ತಿದ್ದ ಪ್ರೀತಿ ಎಂಬಾಕೆ ಸಾವನ್ನಪ್ಪಿದ ವಿದ್ಯಾರ್ಥಿನಿ. ಈಕೆಗೆ ಎರಡನೇ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿ ಮೊಹಮ್ಮದ್ ಆಲಿ ಸೈಫ್ ಎಂಬಾತ ಹಲವು ಸಮಯದಿಂದ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತು ನಾಲ್ಕು ದಿನಗಳ ಹಿಂದೆ ಯುವತಿ ಇಂಜೆಕ್ಷನ್ ತೆಗೆದುಕೊಂಡಿದ್ದು ಬಳಿಕ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಬಳಿಕ ಆಕೆಯನ್ನು ಹೈದರಾಬಾದ್ ಎಂಜಿಎಂ ಆಸ್ಪತ್ರೆಗೆ ಕರೆತರಲಾಗಿತ್ತು. ಭಾನುವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಪ್ರೀತಿ ಬುಡಕಟ್ಟು ಜನಾಂಗಕ್ಕೆ ಸೇರಿದ ವಿದ್ಯಾರ್ಥಿನಿಯಾಗಿದ್ದು ಕುಟುಂಬಸ್ಥರು, ಬುಡಕಟ್ಟು ಜನಾಂಗದ ಸಂಘಟನೆಗಳ ಕಾರ್ಯಕರ್ತರು ಕಾಕತೀಯ ಮೆಡಿಕಲ್ ಕಾಲೇಜು ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಆರೋಪಿ ಸೈಫ್ ವಿರುದ್ಧ ರಾಗಿಂಗ್, ಆತ್ಮಹತ್ಯೆಗೆ ಪ್ರಚೋದನೆ ಮತ್ತು ಎಸ್ಟಿ ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇದೇ ವೇಳೆ, ಪ್ರೀತಿ ತಂದೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು ಆರೋಪಿ ವಿರುದ್ಧ ಈ ಹಿಂದೆಯೇ ಆಸ್ಪತ್ರೆ ಆಡಳಿತಕ್ಕೆ ದೂರು ನೀಡಲಾಗಿತ್ತು. ಆದರೆ ಏಕ್ಷನ್ ತೆಗೆದುಕೊಂಡಿರಲಿಲ್ಲ ಎಂದಿದ್ದಾರೆ.
ಭಾನುವಾರ ಸಂಜೆಯೇ ಹಲವಾರು ಸಂಘಟನೆಗಳು ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜು ಮುಂದೆ ಪ್ರತಿಭಟನೆ ನಡೆಸಿದ್ದು ನ್ಯಾಯಕ್ಕಾಗಿ ಆಗ್ರಹ ಮಾಡಿವೆ.
A first-year postgraduate medical student died in Hyderabad on Sunday night, four days after she allegedly attempted suicide. 26-year-old D Preethi attempted suicide allegedly by a self-administered injections after being harassed by her senior at Kakatiya Medical College, police said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm