ಬ್ರೇಕಿಂಗ್ ನ್ಯೂಸ್
02-03-23 12:58 pm HK News Desk ದೇಶ - ವಿದೇಶ
ತೆಲಂಗಾಣ, ಮಾ.1 : ಸುಖನಿದ್ರೆಯಲ್ಲಿದ್ದ ಕಾರ್ಮಿಕರ ಮೇಲೆ ಜವರಾಯ ಲಾರಿಯ ರೂಪದಲ್ಲಿ ಬಂದೆರಗಿದ್ದಾನೆ. ಇಂದು ಮುಂಜಾವು 4 ಗಂಟೆಗೆ ನಡೆದ ಭೀಕರ ಅಪಘಾತದಲ್ಲಿ ಕರ್ನಾಟಕ ನಿವಾಸಿಗಳಾದ ಒಂದೇ ಕುಟುಂಬದ ಮೂವರು ದಾರುಣ ಸಾವನ್ನಪ್ಪಿದ್ದಾರೆ.
ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಹೊರವರ್ತುಲ ರಸ್ತೆಯಲ್ಲಿ ದುರಂತ ಘಟಿಸಿದೆ.
ಸಂಗಾರೆಡ್ಡಿ ಜಿಲ್ಲೆಯ ಹೊರವರ್ತುಲ ರಸ್ತೆಯ ಕೊಲ್ಲೂರಿನಲ್ಲಿ ಬೆಳಗಿನ ಜಾವ 4 ಗಂಟೆಗೆ ಗುಡಿಸಲಿನ ಮೇಲೆ ಲಾರಿ ಹರಿಯಿತು. ಇದರಿಂದ ನಿದ್ರೆಯಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದರು.
ಯಮನಂತೆ ಅಪ್ಪಳಿಸಿದ ಲಾರಿ ಪಟಾಣ್ ಚೆರು ಕಡೆಯಿಂದ ಗಚ್ಚಿಬೌಳಿ ಮಾರ್ಗವಾಗಿ ಹರಿಯಾಣದಿಂದ ಚಿತ್ತೂರಿಗೆ ತೆರಳುತ್ತಿತ್ತು.
ಹೊರ ವರ್ತುಲ ರಸ್ತೆಯುದ್ದಕ್ಕೂ ಇರುವ ಗಿಡಗಳಿಗೆ ನೀರುಣಿಸಲು ಕರ್ನಾಟಕದ ಮೂಲದ ಕೆಲವರು ಎಚ್ಎಂಡಿಎ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಕೊಲ್ಲೂರು ಜಂಕ್ಷನ್ ಬಳಿ ರಿಂಗ್ ರಸ್ತೆ ಮತ್ತು ಸವೀಸ್ ರಸ್ತೆ ಪಕ್ಕ ತಾತ್ಕಾಲಿಕ ಗುಡಿಸಲುಗಳಲ್ಲಿ ಇವರೆಲ್ಲರೂ ವಾಸಿಸುತ್ತಿದ್ದಾರೆ. ಲಾರಿ ರಿಂಗ್ ರಸ್ತೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಗುಡಿಸಲಿನ ಮೇಲೆ ಹರಿದಿದೆ. ಅಕ್ಕಪಕ್ಕ ಹತ್ತು ಗುಡಿಸಲುಗಳಿದ್ದು, ಅವುಗಳಿಗೂ ಡಿಕ್ಕಿ ಹೊಡೆದಿದ್ದರೆ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುತ್ತಿತ್ತು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬದುಕು ಅರಸಿ ಬಂದಿದ್ದ ಒಂದೇ ಕುಟುಂಬದ ಮೂವರು ಸಾವಿಗೀಡಾಗಿದ್ದರಿಂದ ಆಸ್ಪತ್ರೆಯಲ್ಲಿ ಸಂಬಂಧಿಕರು, ಕುಟುಂಬಸ್ಥರ ರೋದನ ಮುಗಿಲುಮುಟ್ಟಿತ್ತು.
A ghastly road accident took place in the Sangareddy district of Telangana where three people lost their lives in this terrible accident at Patancheru in Hyderabad after a lorry, which was going from Patancheru towards Shamshabad, lost control near Kollur Outer Ring Road of Sangareddy District fell from the ORR on the huts below. As a result, three people living in huts died on the spot. The tragic incident took place on Thursday morning near Exit Point-2 of the Outer Ring Road.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm