ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ; ಭೂಮಿ ಪೂಜೆ ಕಾರ್ಯಕ್ರಮಕ್ಕೆ ಕ್ಷಣಗಣನೆ

05-08-20 06:22 am       Headline Karnataka News Network   ದೇಶ - ವಿದೇಶ

ರಾಮ ಜನ್ಮಭೂಮಿ ನಿರ್ಮಾಣಕ್ಕೆ ಅಡಿಗಲ್ಲು ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ಅಯೋಧ್ಯೆಗೆ ಆಗಮಿಸಿದ್ದಾರೆ. ವಿಶೇಷ ವಿಮಾನದ ಮೂಲಕ ಲಖನೌಗೆ ಆಗಮಿಸಿದ ಪ್ರಧಾನಿ ಮೋದಿ ಅಲ್ಲಿಂದ ಹೆಲಿಕಾಪ್ಟರ್​ ಮೂಲಕ ಅಯೋಧ್ಯೆಗೆ ತೆರಳಿದರು. 

ಅಯೋಧ್ಯೆ (ಜು.5): ರಾಮ ಜನ್ಮಭೂಮಿ ನಿರ್ಮಾಣಕ್ಕೆ ಅಡಿಗಲ್ಲು ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ಅಯೋಧ್ಯೆಗೆ ಆಗಮಿಸಿದ್ದಾರೆ. ವಿಶೇಷ ವಿಮಾನದ ಮೂಲಕ ಲಖನೌಗೆ ಆಗಮಿಸಿದ ಪ್ರಧಾನಿ ಮೋದಿ ಅಲ್ಲಿಂದ ಹೆಲಿಕಾಪ್ಟರ್​ ಮೂಲಕ ಅಯೋಧ್ಯೆಗೆ ತೆರಳಿದರು. 

ಬೆಳಗ್ಗೆ 10:30ಕ್ಕೆ ಲಖನೌ ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಿದರು. ಮೋದಿಯನ್ನು ಸ್ವಾಗತಿಸಲು ಆಗಮಿಸಿದ್ದ ಹಿರಿಯ ನಾಯಕರು ಜೈ ಶ್ರೀರಾಮ್​ ಎನ್ನುವ ಘೋಷಣೆ ಕೂಗಿದರು. ನಂತರ ಹೆಲಿಕಾಪ್ಟರ್​ ಮೂಲಕ ಪ್ರಧಾನಿ ಮೋದಿ ಅಯೋಧ್ಯೆಯ ಸಾಕೇತ್​ ಕಾಲನಿಗೆ ತೆರಳಿದರು. ಅಯೋಧ್ಯೆಗೆ ಕಾಲಿಡುತ್ತಿದ್ದಂತೆ ಜೈ ಶ್ರೀರಾಮ್​ ಎನ್ನುವ ಘೋಷಣೆಗಳು ಮೊಳಗಿದವು.

ಕಾರ್ಯಕ್ರಮಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​, ಸಚಿವೆ ಸ್ಮೃತಿ ಇರಾನಿ  ಸೇರಿ ಸಾಕಷ್ಟು ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.

ಮೋದಿ ಕಾರ್ಯಕ್ರಮ ಪಟ್ಟಿ

  • 10.30ಕ್ಕೆ ಲಖನೌ ವಿಮಾನ ನಿಲ್ದಾಣ ತಲುಪಿದ ಮೋದಿ
  • 11.30ಕ್ಕೆ ಅಯೋಧ್ಯೆಯ ಸಾಕೇತ್ ಕಾಲನಿಗೆ ಆಗಮನ
  • 11.45ಕ್ಕೆ ಹನುಮಾನ್​ಗಡಿಯಲ್ಲಿ ಪ್ರಾರ್ಥನೆ
  • ಹನುಮಾನ್ ಪೂಜೆ ಬಳಿಕ ಸರಯೂ ನದಿಗೆ ಪೂಜೆ
  • ಮಧ್ಯಾಹ್ನ 12 ಗಂಟೆಗೆ ರಾಮಜನ್ಮಭೂಮಿಗೆ ಆಗಮನ
  • 12.30ಕ್ಕೆ ಭೂಮಿಪೂಜೆ ಕಾರ್ಯಕ್ರಮದಲ್ಲಿ ಭಾಗಿ
  • 12.40ಕ್ಕೆ ರಾಮಮಂದಿರಕ್ಕೆ ಅಡಿಗಲ್ಲು ಹಾಕಲಿರುವ ಮೋದಿ
  • ಶಿಲಾನ್ಯಾಸದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿ
  • 1.10ಕ್ಕೆ ರಾಮಜನ್ಮಭೂಮಿ ಸಂಕೀರ್ಣ ವೀಕ್ಷಿಸಲಿರುವ ಮೋದಿ
  • ಶ್ರೀರಾಮ ಮಂದಿರ ತೀರ್ಥ ಕ್ಷೇತ್ರ ‌ಟ್ರಸ್ಟ್ ಅಧ್ಯಕ್ಷ ನೃತ್ಯ ಗೋಪಾಲದಾಸ್ ಮತ್ತಿತರ ಜೊತೆ ಸಮಾಲೋಚನೆ
  • ಮಧ್ಯಾಹ್ನ 02:05ಕ್ಕೆ ಅಯೋಧ್ಯೆಯಿಂದ ಹೆಲಿಕಾಪ್ಟರ್ ಮೂಲಕ ಲಕ್ನೋಗೆ ಪ್ರಯಾಣ