ಬ್ರೇಕಿಂಗ್ ನ್ಯೂಸ್
22-03-23 12:28 pm HK News Desk ದೇಶ - ವಿದೇಶ
ನವದೆಹಲಿ, ಮಾ.22: ನವದೆಹಲಿಯಲ್ಲಿ ಮಂಗಳವಾರ ರಾತ್ರಿ 10.20ರ ಸುಮಾರಿಗೆ ಪ್ರಬಲ ಭೂಕಂಪನ ಸಂಭವಿಸಿದೆ. ಕಂಪನವು ಒಂದು ನಿಮಿಷಕ್ಕೂ ಹೆಚ್ಚು ಕಾಲ ನಡೆಯಿತು. ಜಮ್ಮು ಕಾಶ್ಮೀರ, ಪಂಜಾಬ್, ರಾಜಸ್ಥಾನ್, ಪಂಜಾಬ್ ಹಾಗೂ ಉತ್ತರ ಪ್ರದೇಶದಲ್ಲಿಯೂ ಜನರಿಗೆ ಭೂಕಂಪನ ಅನುಭವವಾಗಿದೆ.
ಅಫ್ಘಾನಿಸ್ತಾನದಲ್ಲಿ ಮಂಗಳವಾರ ಸಂಜೆ ಪ್ರಬಲ ಭೂಕಂಪ ಸಂಭವಿಸಿತ್ತು. ಸ್ವಲ್ಪ ಸಮಯದಲ್ಲೇ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಭೂಮಿ ಕಂಪಿಸಿದೆ. ವರದಿಗಳ ಪ್ರಕಾರ, ದೆಹಲಿಯಲ್ಲಿ 4.4ರ ತೀವ್ರತೆಯಲ್ಲಿ ಭೂಮಿ ಕಂಪಿಸಿದೆ ಎಂದು ರಿಕ್ಟರ್ ಮಾಪಕದಲ್ಲಿ ದಾಖಲಾಗಿದೆ. ತೀವ್ರತೆಯು 7.7ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಪಂಜಾಬ್‌ನ ಕೆಲ ಭಾಗ, ಜಮ್ಮು ಮತ್ತು ಕಾಶ್ಮೀರದಲ್ಲೂ ಭೂಮಿ ಕಂಪಿಸಿದೆ.
ಜತೆಗೆ ಏಷ್ಯಾ ರಾಷ್ಟ್ರಗಳಾದ ತುರ್ಕಮೆನಿಸ್ತಾನ್, ಭಾರತ, ಕಝಾಕಿಸ್ತಾನ್, ಪಾಕಿಸ್ತಾನ, ತಜಕಿಸ್ತಾನ್, ಉಜ್ಬೇಕಿಸ್ತಾನ್, ಚೀನಾ, ಅಫ್ಘಾನಿಸ್ತಾನ್ ಮತ್ತು ಕಿರ್ಗಿಸ್ತಾನ್ ಸೇರಿದಂತೆ ಹಲವು ದೇಶದಲ್ಲಿ ಭೂಕಂಪನ ವರದಿಯಾಗಿದೆ. ಆದರೆ, ಯಾವುದೇ ಸಾವು ನೋವು ಮಂಗಳವಾರ ತಡರಾತ್ರಿವರೆಗೂ ವರದಿಯಾಗಿಲ್ಲ.
ದೆಹಲಿಯ ಹಲವೆಡೆ ಭೂಕಂಪನ ಮಂಗಳವಾರ ರಾತ್ರಿ 10.20 ಸುಮಾರಿಗೆ ನವ ದೆಹಲಿ, ನೋಯ್ಡಾ, ಗುರುಗಾಂವ್ ಸೇರಿದಂತೆ ರಾಜಧಾನಿಯ ಹಲವು ಪ್ರದೇಶಗಳಲ್ಲಿ ಭೂಕಂಪ ಅನುಭವ ಜನರಿಗಾಗಿದೆ. ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದವರೂ ಹೊರಗೆ ಬಂದಿದ್ದಾರೆ. ಈ ಕುರಿತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹಲವರು ದೆಹಲಿ ಪ್ರಬಲ ಭೂಕಂಪ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೊಂಡಿದ್ದಾರೆ. ಭೂಕಂಪನದಿಂದ ಮನೆಗಳಲ್ಲಿದ್ದ ವಸ್ತುಗಳು ಬಿದ್ದಿರುವುದಾಗಿ ತಿಳಿಸಿದ್ದಾರೆ. ಒಂದು ನಿಮಿಷಕ್ಕೂ ಅಧಿಕ ಕಾಲ ದೆಹಲಿ ಹಾಗೂ ಎನ್‌ಸಿಆರ್ ವ್ಯಾಪ್ತಿ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ ಎಂದಿದ್ದಾರೆ. ವೀಡಿಯೋದಲ್ಲಿ ಜನ ಬೀದಿಗಳಲ್ಲಿ ಜಮಾಯಿಸಿರುವುದನ್ನು ದೃಶ್ಯಗಳು ವೈರಲ್ ಆಗಿವೆ.
ಉತ್ತರ ಭಾರತದ ಬಹುತೇಕ ರಾಜ್ಯದಲ್ಲಿ ಜನ ಆತಂಕ;
ಜಮ್ಮು ಕಾಶ್ಮೀರ, ದೆಹಲಿ, ಪಂಜಾಬ್ ಹಾಗೂ ಉತ್ತರ ಪ್ರದೇಶದಲ್ಲಿ ಭೂಕಂಪನವಾಗಿದೆ. ಇನ್ನು ಉತ್ತರ ಭಾರತದ ಹಲವು ರಾಜ್ಯಗಳಲ್ಲಿಯೂ ಸಂಭವಿಸಬಹುದು ಎನ್ನಲಾಗುತ್ತಿದೆ. ಈ ಆತಂಕದಿಂದ ಜನ ಮನೆ, ಕಚೇರಿ ಸೇರಿದಂತೆ ಕಟ್ಟಡಗಳಿಂದ ದೂರ ಬಂದು ತೆರೆದ ಪ್ರದೇಶಗಳಲ್ಲಿ ನಿಂತಿದ್ದಾರೆ. ಈ ವಿಡಿಯೋಗಳು ಟ್ವೀಟ್‌ನಲ್ಲಿ ವೈರಲ್ ಆಗಿವೆ.
ಪಾಕ್, ಅಫ್ಘಾನಿಸ್ತಾನದಲ್ಲಿ 9 ಮಂದಿ ಬಲಿ ;
ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಕಲಾಫ್ಗಾನ್ನಿಂದ 90 ಕಿ.ಮೀ ದೂರದಲ್ಲಿತ್ತು. ಪಾಕಿಸ್ತಾನದಲ್ಲಿ 6.8 ತೀವ್ರತೆಯ ಭೂಕಂಪಕ್ಕೆ ಇಬ್ಬರು ಮತ್ತು ಅಫ್ಘಾನಿಸ್ತಾನದಲ್ಲಿ 6.6 ರಷ್ಟು ತೀವ್ರತೆಯ ಭೂಕಂಪಕ್ಕೆ 7 ಮಂದಿ ಸೇರಿ ಭೂಕಂಪಕ್ಕೆ 9 ಮಂದಿ ಸಾವನ್ನಪ್ಪಿದ್ದಾರೆ. ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಸ್ವಾತ್ ಕಣಿವೆ ಪ್ರದೇಶದಲ್ಲಿ 150 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪಾಕಿಸ್ತಾನದ ತುರ್ತು ಸೇವೆಗಳ ವಕ್ತಾರ ಬಿಲಾಲ್ ಫೈಜಿ ತಿಳಿಸಿದ್ದಾರೆ.
Strong tremors jolted parts of north India, including Delhi-NCR, on Tuesday night as an earthquake of magnitude 6.6 struck the Hindukush region in Afghanistan. Panic-stricken people rushed out of buildings as the earthquake struck around 10.20 pm and was also felt in Jammu and Kashmir, Haryana, Punjab and Rajasthan.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm