ಬ್ರೇಕಿಂಗ್ ನ್ಯೂಸ್
29-03-23 04:06 pm HK News Desk ದೇಶ - ವಿದೇಶ
ಮುಂಬೈ, ಮಾ.29: ಭೂಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ ಎಂಬಾತನನ್ನು ನಾಗಪುರ ಪೊಲೀಸರು ಬಂಧಿಸಿದ್ದು, ವಿಮಾನದ ಮೂಲಕ ನಾಗಪುರಕ್ಕೆ ಕೊಂಡೊಯ್ದಿದ್ದಾರೆ.
ಮಾ.21ರಂದು ನಾಗಪುರದ ನಿತಿನ್ ಗಡ್ಕರಿಯವರ ಕಚೇರಿಗೆ ಫೋನಾಯಿಸಿ ಹತ್ತು ಕೋಟಿ ರೂಪಾಯಿ ಬೇಡಿಕೆ ಇರಿಸಿದ್ದ. ಫೋನ್ ಮಾಡಿದ್ದ ವ್ಯಕ್ತಿ ತನ್ನನ್ನು ಜಯೇಶ್ ಪೂಜಾರಿ ಎಂದು ಹೇಳಿಕೊಂಡಿದ್ದ. ಈ ಬಗ್ಗೆ ಕಚೇರಿ ಉದ್ಯೋಗಿಯ ದೂರಿನಂತೆ ಎಫ್ಐಆರ್ ದಾಖಲಾಗಿತ್ತು.
ಕಳೆದ ಜನವರಿ 14ರಂದು ಇದೇ ರೀತಿ ಜಯೇಶ್ ಪೂಜಾರಿ ಹೆಸರಲ್ಲಿ ನೂರು ಕೋಟಿ ಬೇಡಿಕೆ ಇರಿಸಿ ನಾಗಪುರದ ಸಚಿವರ ಕಚೇರಿಗೆ ಫೋನ್ ಮಾಡಿ ಬೆದರಿಕೆ ಒಡ್ಡಲಾಗಿತ್ತು. ಆ ಸಂದರ್ಭದಲ್ಲಿ ಬೆಳಗಾವಿ ಜೈಲಿನಿಂದಲೇ ಫೋನ್ ಬಂದಿರುವುದನ್ನು ಪತ್ತೆ ಮಾಡಿ ಪೊಲೀಸರು ಜಯೇಶ್ ಪೂಜಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ತಾನು ಕರೆ ಮಾಡಿದ್ದಲ್ಲ ಎಂದು ಹೇಳಿಕೆ ನೀಡಿದ್ದರಿಂದ ಪೊಲೀಸರು ಬಿಟ್ಟು ಕಳುಹಿಸಿದ್ದರು.
ಆದರೆ ಇದೀಗ ಮತ್ತೆ ಅದೇ ರೀತಿಯ ಫೋನ್ ಕರೆ ಬಂದಿದ್ದು, ಹತ್ತು ಕೋಟಿ ನೀಡದಿದ್ದರೆ ಸಚಿವರ ಜೀವಕ್ಕೆ ಅಪಾಯ ಇದೆಯೆಂದು ಹೇಳಿದ್ದ. ನಾಗಪುರ ಪೊಲೀಸರು ಅಲರ್ಟ್ ಆಗಿದ್ದು, ಈ ಬಾರಿ ನೇರವಾಗಿ ಆರೋಪಿ ಜಯೇಶ್ ಪೂಜಾರಿಯನ್ನ ಹೊತ್ತೊಯ್ದಿದ್ದಾರೆ. ಜಯೇಶ್ ಪೂಜಾರಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದವನಾಗಿದ್ದು ಪ್ರಕರಣ ಒಂದರಲ್ಲಿ ಶಿಕ್ಷೆ ವಿಧಿಸಲ್ಪಟ್ಟು ಜೈಲು ಪಾಲಾಗಿದ್ದ.
Threat calls to Nitin Gadkari on Jayesh Pujari taken into custody from the Hindalga jail by nagpur police. Nagpur Police on Tuesday took into custody a murder case convict from a jail in Belagavi in Karnataka in connection with the threat calls made to the office of Union minister Nitin Gadkari on two occasions, an official said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm