ಕೇರಳದಲ್ಲಿ ಕ್ಷುಲ್ಲಕ ಕಾರಣಕ್ಕೆ ರೈಲಿಗೆ ಬೆಂಕಿ, ಮೂವರ ಬಲಿ ; ಆರೋಪಿ ಪೊಲೀಸರ ಬಲೆಗೆ  

05-04-23 12:47 pm       HK News Desk   ದೇಶ - ವಿದೇಶ

ಕ್ಷುಲ್ಲಕ ಕಾರಣಕ್ಕೆ ರೈಲಿನಲ್ಲಿ ಮೂವರು ಸಹ ಪ್ರಯಾಣಿಕರಿಗೆ ಬೆಂಕಿ ಹಚ್ಚಿ ಸಜೀವವಾಗಿ ದಹಿಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೋಯಿಕ್ಕೋಡ, ಎ.5: ಕ್ಷುಲ್ಲಕ ಕಾರಣಕ್ಕೆ ರೈಲಿನಲ್ಲಿ ಮೂವರು ಸಹ ಪ್ರಯಾಣಿಕರಿಗೆ ಬೆಂಕಿ ಹಚ್ಚಿ ಸಜೀವವಾಗಿ ದಹಿಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೇಂದ್ರ ಗುಪ್ತಚರ ಮತ್ತು ಭಯೋತ್ಪಾದನಾ ನಿಗ್ರಹ ಅಧಿಕಾರಿಗಳ ಜಂಟಿ ತಂಡವು ಶಾರುಖ್ ಎಂಬುವವನನ್ನು ಮಹಾರಾಷ್ಟ್ರದ ರತ್ನಗಿರಿಯಲ್ಲಿ ಬಂಧಿಸಿದೆ.

ದಾಳಿಯ ಹಿಂದಿನ ಉದ್ದೇಶವು ಇನ್ನೂ ಸ್ಪಷ್ಟವಾಗಿಲ್ಲ, ಆದರೆ ಕೋಳಿಕ್ಕೋಡ್ ಜಿಲ್ಲೆಯ ಎಲತ್ತೂರ್ ಬಳಿ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲಿನಲ್ಲಿ ನಡೆದ ವಾದದ ನಂತರ ಪ್ರಯಾಣಿಕರಿಗೆ ಬೆಂಕಿ ಹಚ್ಚಿರುವುದಾಗಿ ಶಂಕಿತನು ಒಪ್ಪಿಕೊಂಡಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಭಾನುವಾರ ರಾತ್ರಿ 9:30ರ ಸುಮಾರಿಗೆ ರೈಲಿನ ಡಿ1 ಕಂಪಾರ್ಟ್‌ಮೆಂಟ್‌ನೊಳಗೆ ಪ್ರಯಾಣಿಕರೊಬ್ಬರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಇದರಿಂದ ಪ್ರಯಾಣಿಕರು ಭಯಭೀತರಾಗಿದ್ದರು. ಬೆಂಕಿ ಬಹುಬೇಗನೆ ಆಸನಗಳು ಮತ್ತು ಲಗೇಜ್‌ಗಳಿಗೆ ಹರಡಿತು, ಕೋಚ್‌ಗೆ ಬೆಂಕಿ ಆವರಿಸಿತ್ತು. ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರಿಗೆ ಸುಟ್ಟ ಗಾಯಗಳಾಗಿವೆ. ಇವರಲ್ಲಿ ಐವರನ್ನು ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿಗೆ ಮತ್ತು ಮೂವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಕನಿಷ್ಠ ಮೂವರು ಮಹಿಳೆಯರಿದ್ದಾರೆ.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಕಣ್ಣೂರು ನಿಲ್ದಾಣದಲ್ಲಿ ರೈಲು ಕೋಚ್‌ಗಳನ್ನು ಪರೀಕ್ಷಿಸಿ ವಿಧಿವಿಜ್ಞಾನ ಸಾಕ್ಷ್ಯಗಳನ್ನು ಸಂಗ್ರಹಿಸಿದೆ.

ಪ್ರಕರಣದ ತನಿಖೆಗಾಗಿ ಕೇರಳ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದರು ಮತ್ತು ಶಂಕಿತನ ಬಗ್ಗೆ ಸುಳಿವು ನೀಡಿದವರಿಗೆ 2 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದರು.

Shahrukh Saify, the man who allegedly set a co-passenger on fire inside an express train in Kerala’s Kozhikode, has been arrested from Maharashtra, sources said on Wednesday. The accused was held by a joint team of Central Intelligence and Maharashtra ATS from Ratnagiri district. "The suspected accused has been taken into custody. He will be brought back to Kerala. After a detailed interrogation of the accused, we will be able to know more details," said Kerala DGP.