ಬ್ರೇಕಿಂಗ್ ನ್ಯೂಸ್
10-04-23 03:38 pm HK News Desk ದೇಶ - ವಿದೇಶ
ನವೆದಹಲಿ, ಎ.10: ಪ್ರಯಾಣಿಕರೊಬ್ಬರು ಕ್ಯಾಬಿನ್ ಸಿಬ್ಬಂದಿಗೆ ಹೊಡೆದ ಹಿನ್ನೆಲೆಯಲ್ಲಿ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಸೋಮವಾರ ವಾಪಸ್ ದೆಹಲಿಗೆ ಮರಳಿದೆ. ಬಳಿಕ ಸಿಬ್ಬಂದಿ ಜತೆಗೆ ಜಗಳವಾಡಿದ ಪ್ರಯಾಣಿಕನನ್ನು ಪೊಲೀಸರಿಗೆ ಒಪ್ಪಿಸಿ, ಆತನ ವಿರುದ್ಧ ದೂರು ಕೂಡ ದಾಖಲಿಸಿದೆ.
ಸೋಮವಾರ ಬೆಳಗ್ಗೆ 6.35ಕ್ಕೆ ಏರ್ ಇಂಡಿಯಾ ವಿಮಾನವು ದಿಲ್ಲಿಯಿಂದ ಲಂಡನ್ ನಗರದತ್ತ ಪ್ರಯಾಣ ಬೆಳೆಸಿತು. ಆದರೆ, ಸ್ವಲ್ಪ ಹೊತ್ತಿನಲ್ಲೇ ಮತ್ತೆ ವಿಮಾನ ವಾಪಸ್ ದಿಲ್ಲಿಗೆ ಮರಳಿತು.
ಸೋವಾರ ಬೆಳಗ್ಗೆ 6.35ಕ್ಕೆ ದಿಲ್ಲಿ ವಿಮಾನ ನಿಲ್ದಾಣದಿಂದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆ ಪ್ರಯಾಣಿಕರೊಬ್ಬರು ಸಿಬ್ಬಂದಿ ಜತೆಗೆ ಜಗಳವಾಡಲು ಆರಂಭಿಸಿದರು. ಆಗ ವಿಮಾನವು ಮತ್ತೆ ದಿಲ್ಲಿ ವಿಮಾನ ನಿಲ್ದಾಣಕ್ಕೆ ವಾಪಸ್ ಬಂದು, ಜಗಳವಾಡುತ್ತಿದ್ದ ಪ್ರಯಾಣಿಕನನ್ನು ಪೊಲೀಸರಿಗೆ ಒಪ್ಪಿಸಿ ಮತ್ತೆ ಲಂಡನ್ನತ್ತ ತನ್ನ ಪ್ರಯಾಣವನ್ನು ಬೆಳೆಸಿತು.
ಮೌಖಿಕ ಮತ್ತು ಲಿಖಿತ ಎಚ್ಚರಿಕೆಗಳಿಗೆ ಕಿವಿಗೊಡದೆ, ಪ್ರಯಾಣಿಕರು ಇಬ್ಬರು ಕ್ಯಾಬಿನ್ ಸಿಬ್ಬಂದಿಗೆ ದೈಹಿಕ ಹಲ್ಲೆ ಮಾಡುವುದು ಸೇರಿದಂತೆ ಅಶಿಸ್ತಿನ ವರ್ತನೆಯನ್ನು ಮುಂದುವರೆಸಿದರು.
ವಿಮಾನದಲ್ಲಿ ಸಿಬ್ಬಂದಿ ಜತೆ ಪ್ರಯಾಣಿಕರು ಅನುಚಿತವಾಗಿ ವರ್ತಿಸುವ, ಜಗಳವಾಡುತ್ತಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿವೆ. ಕಳೆದ ತಿಂಗಳು ಲಂಡನ್ನಿಂದ ಮುಂಬೈ ಏರ್ ಇಂಡಿಯಾ ವಿಮಾನದ ಪ್ರಯಾಣಿಕರೊಬ್ಬರು ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡುತ್ತಿದ್ದರು. ಅವರ ಈ ಅಶಿಸ್ತಿನ ವರ್ತನೆಗಾಗಿ ಪ್ರಕರಣ ದಾಖಲಾಗಿತ್ತು. ಈ ವರ್ಷದ ಆರಂಭದಲ್ಲಿ, ನವೆಂಬರ್ ಮೂತ್ರ ವಿಸರ್ಜನೆ ಪ್ರಕರಣದಲ್ಲಿ ನಿಯಮಗಳನ್ನು ಅನುಸರಿಸಲು ವಿಫಲವಾದ ಕಾರಣ ಏರ್ ಇಂಡಿಯಾಗೆ ಸಂಸ್ಥೆಗೆ 30 ಲಕ್ಷ ರೂ. ದಂಡ ವಿಧಿಸಲಾಯಿತು. ನವೆಂಬರ್ 26 ರಂದು ನ್ಯೂಯಾರ್ಕ್-ದಿಲ್ಲಿ ವಿಮಾನದಲ್ಲಿ ಶಂಕರ್ ಮಿಶ್ರಾ ಎಂಬ ಪ್ರಯಾಣಿಕರು ಕುಡಿದ ಅಮಲಿನಲ್ಲಿ ವಯಸ್ಸಾದ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದರು. ಈ ಪ್ರಕರಣ ಭಾರೀ ಸುದ್ದಿ ಮಾಡಿತ್ತು.
An Air India London bound flight was forced to return to Delhi after an unruly passenger had a brawl with crew members mid-air. The flight returned to Delhi shortly after the take-off due to an unruly passenger. The flight has been rescheduled the flight to depart for London this afternoon, Air India said in a statement.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm