ಬ್ರೇಕಿಂಗ್ ನ್ಯೂಸ್
23-04-23 03:55 pm HK News Desk ದೇಶ - ವಿದೇಶ
ಚಂಡೀಗಢ, ಎ.23: ಕಾನೂನು ಬಾಹಿರ ಚಟುವಟಿಕೆ ಹಿನ್ನಲೆ, 'ವಾರಿಸ್ ಪಂಜಾಬ್ ದೇ' ಸಂಘಟನೆಯ ಮುಖ್ಯಸ್ಥ ಹಾಗೂ ಖಲಿಸ್ತಾನಿ ಬೆಂಬಲಿಗ ಅಮೃತಪಾಲ್ ಸಿಂಗ್ ನನ್ನು ಪಂಜಾಬ್ ಪೊಲೀಸರು ಮೊಗಾದಲ್ಲಿ ಬಂಧಿಸಿದ್ದಾರೆ.
ತಲೆಮರೆಸಿಕೊಂಡಿದ್ದ ಸ್ವಘೋಷಿತ ಮೂಲಭೂತವಾದಿ ಹಾಗೂ ಸಿಖ್ ಬೋಧಕ ಅಮೃತಪಾಲ್ ಸಿಂಗ್ ವಿರುದ್ಧ ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದರು. ಸಮಾಜದಲ್ಲಿ ಅಶಾಂತಿ ಎಬ್ಬಿಸಲು ಪ್ರಯತ್ನಿಸಿದ್ದ ಸಿಂಗ್ ಸಹಚರರನ್ನು ಬಂಧಿಸಿ, ಅಪಾರ ಪ್ರಮಾಣದಲ್ಲಿ ಶಸ್ತಾಸ್ತ್ರಗಳನ್ನು ವಶಪಡಿಕೊಳ್ಳಲಾಗಿತ್ತು.
ಪೋಲೀಸರ ಕಣ್ಣಿಗೆ ಮಣ್ಣೆರೆಚಿ ತಲೆ ಮರೆಸಿಕೊಂಡು ಓಡಾಡುತ್ತಿದ್ದ ಖಲಿಸ್ತಾನಿ ಬೆಂಬಲಿಗ ಅಮೃತ್‌ಪಾಲ್‌ಸಿಂಗ್ ಯೂಟ್ಯೂಬ್ ಲೈವ್ ಬಂದು ತಾನು ಪೊಲೀಸರಿಗೆ ಶರಣಾಗುತ್ತಿಲ್ಲ ಎಂದು ಹೇಳಿಕೊಂಡಿದ್ದ, ಕಳೆದ ಕೆಲವು ದಿನಗಳಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದ, ತೀವ್ರಗಾಮಿ ಅಮೃತ್‌ಪಾಲ್ ಸಿಂಗ್ ಎರಡು ಬಾರಿ ಯೂಟ್ಯೂಬ್ ವಿಡಿಯೋ ಬಿಡುಗಡೆ ಮಾಡಿದ್ದಾನೆ. ವೇಷ ಮರೆಸಿಕೊಂಡು ರಾಜ್ಯದಿಂದ ರಾಜ್ಯಕ್ಕೆ ಅಲೆದಾಡುತ್ತಿದ್ದ ಅಮೃತ್‌ಪಾಲ್ ಸಿಂಗ್, ಪಂಜಾಬ್‌ನ ಗೋಪ್ಯ ಸ್ಥಳದಲ್ಲಿ ಅಡಗಿರುವುದು ಗೊತ್ತಾಗಿತ್ತು. ಮೊದಲ ವಿಡಿಯೋದಲ್ಲಿ ಪಂಜಾಬ್‌ಗೆ ಮರಳಿರುವುದರ ಬಗ್ಗೆ ಮಾಹಿತಿ ನಿಡಿದ್ದ.
ಅಮೃತಪಾಲ್ ಸಿಂಗ್ ಮತ್ತು ಬೆಂಬಲಿಗರು, ಕತ್ತಿ ಮತ್ತು ಬಂದೂಕುಗಳನ್ನು ಝಳಪಿಸುತ್ತಾ. ಬ್ಯಾರಿಕೇಡ್ ಅನ್ನು ಭೇದಿಸಿ, ಫೆಬ್ರವರಿಯಲ್ಲಿ 24 ರಂದು ಅಮೃತಸರದ ಅಜ್ನಾಲಾ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿ, ಸಹಚರ ಹಾಗೂ ಅಪಹರಣ ಪ್ರಕರಣದ ಆರೋಪಿಯಾಗಿದ್ದ, ಲವ್‌ಪ್ರೀತ್ ಸಿಂಗ್ ಬಿಡುಗಡೆಗೆ ಒತ್ತಾಯಿಸಿದ್ದಾರೆ. ಕಿಡಿಗೇಡಿಗಳ ಅಟ್ಟಹಾಸಕ್ಕೆ ಈ ವೇಳೆ ಆರು ಜನ ಪೊಲೀಸರು ಗಾಯಗೊಂಡಿದ್ದರು.
ಘರ್ಷಣೆಯ ಬಳಿಕ ಪರಾರಿಯಾಗಿದ್ದ ಅಮೃತಪಾಲ್ ಸಿಂಗ್ ಬಂಧನಕ್ಕೆ ಬೆನ್ನತ್ತಿದ ಪೊಲೀಸರು, ಆತನ ಸಹಚರರನ್ನು ವಶಕ್ಕೆ ಪಡೆದಿದ್ದಾರೆ. ಇನ್ನೂ ಪತ್ನಿ ಕಿರಣ್‌ದೀಪ್ ಕೌರ್ ಲಂಡನ್‌ಗೆ ಪಲಾಯಾನ ಮಾಡಲು ಪ್ರಯತ್ನಿಸುತ್ತಿದ್ದಾಗ, ಗೌಪ್ಯ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆಕೆಯನ್ನು ಬಂಧಿಸಿ, ವಿಚಾರಣೆ ನಡೆಸಿದ್ದರು. ಜೊತೆಗೆ ಆರೋಪಿಯ ಪರಿಚಯಸ್ಥರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಅಮೃತಪಾಲ್ ಚಲನವಲದ ಮೇಲೆ ನಿಗಾ ಇಟ್ಟ ಪೊಲೀಸರು, ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಆತ ಎಲ್ಲೆಲ್ಲಿಗೆ ಪ್ರಯಾಣಿಸುತ್ತಿದ್ದ ಎಂಬುವುದನ್ನು ಕಲೆ ಹಾಕುತ್ತಿದ್ದರು. ಬಸ್, ಕಾರು, ಬೈಕ್ ಮೂಲಕ ಸ್ಥಳ ಬದಲಾಯಿಸುತ್ತಿದ್ದ.
ಯಾರು ಈ ಅಮೃತಪಾಲ ಸಿಂಗ್?
ಕೇಂದ್ರ ಸರ್ಕಾರ ಜಾರಿಗೆ ತಂದ ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟದಲ್ಲಿ ಅಮೃತಪಾಲ ಸಿಂಗ್ ಗುರುತಿಸಿಕೊಂಡಿದ್ದ, ಪಂಜಾಬ್‌ನ ಅಮೃತಸರದ ಮೂಲದವನಾದ ಈತ ಸುಮಾರು ಹತ್ತು ವರ್ಷಗಳಿಂದ ದುಬೈನಲ್ಲಿ ವಾಸವಿದ್ದ, 2021 ರಲ್ಲಿ ದೆಹಲಿಯ ಕೆಂಪುಕೋಟೆಯ ಮೇಲೆ ನಿಶಾನ ಸಾಹಿಬ್ ಧ್ವಜ ಹಾರಿಸುವ ಮೂಲಕ ಸುದ್ದಿಯಾಗಿದ್ದ, ದೀಪ್ ಸಿಧುವಿನ ಬೆಂಬಲಿಗನ್ನಾಗಿದ್ದ. ಸಿಧು ಕಾರು ಅಪಘಾತದಲ್ಲಿ ಮೃತಪಟ್ಟ ನಂತರ ಅಮೃತಪಾಲ ಸಿಂಗ್ 'ವಾರಿಸ್ ಪಂಜಾಬ್ ದೇ' ಸಂಘಟನೆಯ ಮುಖ್ಯಸ್ಥನಾಗಿ ಅಧಿಕಾರ ವಹಿಸಿಕೊಂಡಿದ್ದ. ಖಲಿಸ್ತಾನಿ ಬೆಂಬಲಿಗನ್ನಾಗಿದ್ದ ಅಮೃತಪಾಲ ಅಕ್ರಮಣಕಾರಿ ಭಾಷಣಗಳನ್ನು ಮಾಡುವ ಮೂಲಕ ಫೇಸ್‌ಬುಕ್ ಇತರೆ ಸಾಮಾಜಿ ಜಾಲತಾಣಗಳಲ್ಲಿ ಹೆಚ್ಚು ಗಮನ ಸೆಳೆದಿದ್ದ.
In a major breakthrough amid the continuing manhunt, 'Waris Punjab De' chief Amritpal Singh was arrested by Punjab Police from the Moga district of Punjab today (April 23). He will be shifted to Central Jail in Dibrugarh of Assam. Earlier on Saturday, Union Home Minister Amit Shah when asked about Amritpal Singh's arrest and that he has been absconding for a long, said, "It may happen sometime. Earlier he used to roam freely, but now he cannot carry on with his activities.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm