ಬ್ರೇಕಿಂಗ್ ನ್ಯೂಸ್
09-05-23 10:35 pm HK News Desk ದೇಶ - ವಿದೇಶ
ಇಸ್ಲಾಮಾಬಾದ್, ಮೇ 9: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಬಂಧಿಸಿದ ನಂತರ ಅವರ ಪಕ್ಷ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಇಸ್ಲಾಮಾಬಾದ್‌ನಲ್ಲಿ ಪ್ರತಿಭಟನೆ ಮತ್ತು ಗದ್ದಲ ಸೃಷ್ಟಿಸಿದೆ. ಇದಾದ ಬಳಿಕ ಪಾಕಿಸ್ತಾನ ಪೊಲೀಸರು ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಪ್ರತಿಭಟನಾಕಾರರು ಲಾಹೋರ್‌ನಲ್ಲಿರುವ ಸೇನಾ ಕಮಾಂಡರ್‌ಗಳ ನಿವಾಸ ಮತ್ತು ರಾವಲ್ಪಿಂಡಿಯಲ್ಲಿರುವ ಸೇನಾ ಪ್ರಧಾನ ಕಚೇರಿಯ ಆವರಣವನ್ನು ಪ್ರವೇಶಿಸಿದರು. ಇದರಿಂದಾಗಿ ಅಲ್ಲಿ ಪರಿಸ್ಥಿತಿ ಕೈಮೀರಿ ಹೋಗುತ್ತಿದೆ.
ಪಾಕಿಸ್ತಾನ ಸೇನೆಯ ರಾವಲ್ಪಿಂಡಿ ಪ್ರಧಾನ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ. ಕಾರ್ಪ್ಸ್ ಕಮಾಂಡರ್ ಮನೆಗೆ ಇಮ್ರಾನ್ ಖಾನ್ ಬೆಂಬಲಿಗರು ಬೆಂಕಿ ಹಚ್ಚಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಅಲ್ಲದೆ ಪಾಕ್ ಸೇನೆಯು ಪ್ರತಿಭಟನಾಕಾರರಿಗೆ ಕಂಡಲ್ಲಿ ಗುಂಡಿಕ್ಕುವ ಆದೇಶವನ್ನು ನೀಡಿದೆ. ಇಮ್ರಾನ್ ಖಾನ್ ಬೆಂಬಲಿಗರು ಲಾಹೋರ್ ಕ್ಯಾಂಟ್‌ನಲ್ಲಿರುವ ಕಾರ್ಪ್ಸ್ ಕಮಾಂಡರ್ ಮನೆ ಮೇಲೆ ದಾಳಿ ನಡೆಸಿದರು. ಸರ್ಗೋಧಾ, ಪೇಶಾವರ, ಲಾಹೋರ್ ಮತ್ತು ಮರ್ದಾನ್‌ನಲ್ಲಿರುವ ಕಾರ್ಪ್ಸ್ ಕಮಾಂಡರ್ ಹೆಡ್‌ಕ್ವಾರ್ಟರ್ಸ್ ಮೇಲೆ ಪ್ರಮುಖ ದಾಳಿಗಳು ನಡೆದಿವೆ.
ಇಸ್ಲಾಮಾಬಾದ್ ಹೈಕೋರ್ಟ್ ಬಳಿ ಇಮ್ರಾನ್ ಖಾನ್ ಬಂಧನದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಮೀರ್ ಫಾರೂಕ್ ಅವರು ಈ ವಿಷಯದ ಬಗ್ಗೆ ಗಮನ ಹರಿಸಿದ್ದಾರೆ. ಅವರು 15 ನಿಮಿಷಗಳಲ್ಲಿ ಇಸ್ಲಾಮಾಬಾದ್ ಪೊಲೀಸ್ ಮುಖ್ಯಸ್ಥ ಮತ್ತು ಗೃಹ ಕಾರ್ಯದರ್ಶಿಯನ್ನು ಕರೆದರು. ಇಮ್ರಾನ್ ಖಾನ್ ಬಂಧನಕ್ಕೂ ಮುನ್ನ, ಮಂಗಳವಾರ, ಭಯೋತ್ಪಾದನಾ ನಿಗ್ರಹ ನ್ಯಾಯಾಲಯವು ಹಲವಾರು ಪ್ರಕರಣಗಳಲ್ಲಿ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ಅನುಮೋದಿಸಿತ್ತು. ಖಾನ್ ಪ್ರಸ್ತುತ ದೇಶಾದ್ಯಂತ 121 ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಇದರಲ್ಲಿ ದೇಶದ್ರೋಹ, ಭಯೋತ್ಪಾದನೆ, ಧರ್ಮನಿಂದನೆ ಮತ್ತು ಹಿಂಸಾಚಾರವನ್ನು ಪ್ರಚೋದಿಸುವ ಆರೋಪಗಳು ಸೇರಿವೆ.
ಹೆಚ್ಚುವರಿ ಅಟಾರ್ನಿ ಜನರಲ್‌ಗೆ 15 ನಿಮಿಷಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಧೀಶರು ಸೂಚಿಸಿದರು. ಇಸ್ಲಾಮಾಬಾದ್‌ನ ಪೊಲೀಸ್ ಮುಖ್ಯಸ್ಥರು ನ್ಯಾಯಾಲಯಕ್ಕೆ ಹಾಜರಾಗದಿದ್ದರೆ ಪಾಕಿಸ್ತಾನದ ಪ್ರಧಾನಿಗೆ ಸಮನ್ಸ್ ನೀಡುವುದಾಗಿ ಅವರು ಹೇಳಿದರು. ನ್ಯಾಯಾಲಯದ ಆವರಣದಲ್ಲೇ ಬಂಧನದ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ ಅವರು, ಯಾವ ಪ್ರಕರಣದಲ್ಲಿ ಬಂಧನವಾಗಿದೆ ಎಂಬುದನ್ನು ನೀವೇ ಹೇಳಿ ಎಂದರು. 15 ನಿಮಿಷಗಳ ಬದಲು 45 ನಿಮಿಷಗಳ ನಂತರ ಅಟಾರ್ನಿ ಜನರಲ್ ನ್ಯಾಯಾಲಯವನ್ನು ತಲುಪಿದರು. ವಿಚಾರಣೆ ಪುನರಾರಂಭವಾದ ನಂತರ ಮುಖ್ಯ ನ್ಯಾಯಮೂರ್ತಿಗಳು ಆಕ್ರೋಶ ವ್ಯಕ್ತಪಡಿಸಿದರು.
ಇಸ್ಲಾಮಾಬಾದ್ ಐಜಿ, ಇಮ್ರಾನ್ ಬಂಧನದ ಬಗ್ಗೆ ಮಾಧ್ಯಮಗಳಿಂದ ತಿಳಿದು ಬಂದಿದೆ ಎಂದು ಉತ್ತರಿಸಿದರು. ಇಮ್ರಾನ್ ಖಾನ್ ಅವರ ಬಂಧನ ವಾರಂಟ್ ಅನ್ನು ನ್ಯಾಯಾಲಯದಲ್ಲಿ ಪ್ರಸ್ತುತಪಡಿಸಿದ ಅವರು, ಭ್ರಷ್ಟಾಚಾರ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ನ್ಯಾಯಾಧೀಶರಿಗೆ ತಿಳಿಸಿದರು. ಒಂದು ವೇಳೆ ಬಂಧಿಸಿರುವುದು ಕಾನೂನು ಉಲ್ಲಂಘನೆಯಾಗಿದ್ದರೆ ಸೂಕ್ತ ಆದೇಶ ನೀಡುತ್ತೇನೆ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.
Chaos prevailed in Pakistan after former Prime Minister Imran Khan was arrested by paramilitary rangers on Tuesday while he was present at the Islamabad High Court for the hearing of a corruption case. Workers of Imran Khan's party, Pakistan Tehreek-e-Insaf (PTI), took to streets after his arrest and even reached Pakistan Army's headquarters in Rawalpindi, resulting in the imposition of Section 144 across the country. Stay on this page for latest updates and developments.
21-07-25 10:38 pm
Bangalore Correspondent
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
21-07-25 11:23 pm
HK News Desk
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ವಾಯುಪಡೆ ತರಬೇತಿ ವಿಮಾ...
21-07-25 09:56 pm
ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಎಎಸ್ಐ ಯು...
20-07-25 04:47 pm
21-07-25 06:42 pm
Mangalore Correspondent
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
21-07-25 11:01 pm
HK News Desk
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm