ಕರ್ನಾಟಕದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ;  ಪ್ರಧಾನಿ ಮೋದಿ ಅಭಿನಂದನೆ

13-05-23 07:18 pm       HK News Desk   ದೇಶ - ವಿದೇಶ

ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಭರ್ಜರಿ ಬಹುಮತ ಪಡೆದಿರುವ ಕಾಂಗ್ರೆಸ್‌ಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ನವದೆಹಲಿ, ಮೇ 13: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಭರ್ಜರಿ ಬಹುಮತ ಪಡೆದಿರುವ ಕಾಂಗ್ರೆಸ್‌ಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

"ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಜನರ ಆಶೋತ್ತರಗಳನ್ನು ಈಡೇರಿಸಲು ನನ್ನ ಶುಭಾಶಯಗಳು. ಕರ್ನಾಟಕ ಚುನಾವಣೆಯಲ್ಲಿ ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಬಿಜೆಪಿ ಕಾರ್ಯಕರ್ತರ ಶ್ರಮವನ್ನು ನಾನು ಪ್ರಶಂಸಿಸುತ್ತೇನೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಹುರುಪಿನಿಂದ ನಾವು ಕರ್ನಾಟಕದ ಸೇವೆ ಮಾಡುತ್ತೇವೆ’’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

224 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಪಡೆಯುವ ಮೂಲಕ ಭರ್ಜರಿ ಬಹುಮತದ ಪಡೆದಿದೆ. ಬಿಜೆಪಿ 65 ಸ್ಥಾನಗಳು ಹಾಗೂ ಜೆಡಿಎಸ್ 19 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಇತರರು ನಾಲ್ಕು ಕ್ಷೇತ್ರಗಳಲ್ಲಿ ಜಯ ಗಳಿಸಿದ್ದಾರೆ.

Prime Minister Narendra Modi on Saturday congratulated the Congress party as it is headed towards a big win in the Karnataka assembly elections. “My best wishes to them in fulfilling people’s aspirations,” he said. PM Modi also thanked those people who voted for the Bharatiya Janata Party (BJP) and appreciated the hard work of the party leaders.