ಬ್ರೇಕಿಂಗ್ ನ್ಯೂಸ್
28-05-23 01:36 pm HK News Desk ದೇಶ - ವಿದೇಶ
ನವದೆಹಲಿ, ಮೇ 28: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ತಲೆಯೆತ್ತಿ ನಿಂತಿರುವ ಪ್ರಜಾಪ್ರಭುತ್ವದ ನೂತನ ದೇಗುಲ 'ಸಂಸತ್ ಭವನ'ವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಲೋಕಾರ್ಪಣೆಗೊಳಿಸಿದರು.
ಇಂದು ಬೆಳಗ್ಗೆ 7.15 ಕ್ಕೆ ಸಾಂಪ್ರದಾಯಿಕ ಬಿಳಿ ಉಡುಗೆಯಲ್ಲಿ ಪ್ರಧಾನಿ ಮೋದಿ ಅವರು ಗೇಟ್ ನಂ.1 ರಿಂದ ಸಂಸತ್ ಆವರಣಕ್ಕೆ ಆಗಮಿಸಿದರು. ಅವರನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸ್ವಾಗತಿಸಿದರು. ಮಹಾತ್ಮ ಗಾಂಧಿ ಪ್ರತಿಮೆ ಪಕ್ಕದಲ್ಲಿ ಆಯೋಜಿಸಿದ್ದ ಪೂಜಾ ವಿಧಾನಗಳಲ್ಲಿ ಇಬ್ಬರೂ ಭಾಗಿಯಾದರು. ಕರ್ನಾಟಕದ ಶೃಂಗೇರಿ ಮಠದ ಪುರೋಹಿತರು ವೇದ ಘೋಷಗಳನ್ನು ಪಠಿಸಿದರು. ಹೊಸ ಸಂಸತ್ ಭವನದ ಉದ್ಘಾಟನಾ ಸಮಾರಂಭ ಸಾಂಘವಾಗಿ ನಡೆಯಲು "ಗಣಪತಿ ಹೋಮ" ನಡೆಸಲಾಯಿತು.
ಪೂಜಾ ವಿಧಾನಗಳು ಮುಗಿದ ಬಳಿಕ ಬಹುಚರ್ಚಿತ ರಾಜದಂಡವಾದ 'ಸೆಂಗೋಲ್' ಅನ್ನು ತಮಿಳುನಾಡಿನ ವಿವಿಧ ಅಧೀನಂಗಳಿಂದ ಪ್ರಧಾನಿ ಮೋದಿ ಅವರಿಗೆ ಹಸ್ತಾಂತರ ಮಾಡಲಾಯಿತು. ಪೂಜ್ಯರ ಆಶೀರ್ವಾದ ಪಡೆದ ಪ್ರಧಾನಿಗಳು, ಅದರ ಮುಂದೆ ಸಾಷ್ಟಾಂಗ ನಮಸ್ಕಾರ ಮಾಡಿದರು.
ಬಳಿಕ ಪವಿತ್ರ ರಾಜದಂಡದೊಂದಿಗೆ ಮೋದಿ ಅವರು ನಾದಸ್ವರ ಮತ್ತು ವೇದ ಮಂತ್ರಗಳ ಪಠಣಗಳ ನಡುವೆ ಮೆರವಣಿಗೆಯಲ್ಲಿ ಹೊಸ ಸಂಸತ್ ಭವನಕ್ಕೆ ಸೆಂಗೋಲ್ ಅನ್ನು ಕೊಂಡೊಯ್ದರು.
ಲೋಕಸಭೆಯ ಸಭಾಂಗಣದಲ್ಲಿ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ನಿಗದಿಪಡಿಸಲಾಗಿದ್ದ ವಿಶೇಷ ಆವರಣದಲ್ಲಿ ರಾಜದಂಡವನ್ನು ಸ್ಪೀಕರ್ ಓಂ ಬಿರ್ಲಾ ಅವರ ಸಮೇತ ತೆರಳಿ ಅಲ್ಲಿ ಪ್ರತಿಷ್ಠಾಪಿಸಿದರು. ಅಲ್ಲಿ ಇಡಲಾಗಿದ್ದ ಜ್ಯೋತಿಯನ್ನ ಬೆಳಗಿಸುವ ಮೂಲಕ ನೂತನ ಸಂಸತ್ ಭವನದ ಉದ್ಘಾಟನೆಗೆ ಅಧಿಕೃತ ಚಾಲನೆ ನೀಡಿದರು.
ಸೆಂಗೋಲ್ ಸ್ಥಾಪನೆಯ ಬಳಿಕ ಅಲ್ಲಿಂದ ಹೊರಬಂದ ಪ್ರಧಾನಿ ಮೋದಿ ಅವರು, ನೂತನ ಸಂಸತ್ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡಿದ್ದ ಕೆಲ ಕಾರ್ಮಿಕರಿಗೆ ಗೌರವ ಸಲ್ಲಿಸಿದರು. ಶಾಲು ಮತ್ತು ಸ್ಮರಣಿಗೆ ನೀಡಿ ಅವರನ್ನು ಸನ್ಮಾನಿಸಿದರು. ಬಳಿಕ ನೂತನ ಸಂಸತ್ ಭವನದ ಉದ್ಘಾಟನೆಯನ್ನು ಗುರುತಿಸಲು ಫಲಕವೊಂದನ್ನು ಮೋದಿಯವರು ಅನಾವರಣಗೊಳಿಸಿದರು.
ಇದಾದ ಬಳಿಕ ಸಂಸತ್ನ ಲಾಬಿಯಲ್ಲಿ ಏರ್ಪಡಿಸಲಾಗಿದ್ದ ಸರ್ವಧರ್ಮ ಸಮ್ಮಿಲನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಿದರು.
ಹಿಂದೂ, ಮುಸ್ಲಿಂ, ಜೈನ, ಬೌದ್ಧ, ಕ್ರೈಸ್ತ ಧರ್ಮ ಸೇರಿದಂತೆ ಎಲ್ಲ ಧರ್ಮಗಳ ಮುಖಂಡರು ಪ್ರಾರ್ಥನೆ ಸಲ್ಲಿಸಿದರು. ನೂತನ ಸಂಸತ್ ಕಟ್ಟಡವು ಐತಿಹಾಸಿಕ ರಾಜಕೀಯ ವಿದ್ಯಮಾನಗಳಿಗೆ ಸಾಕ್ಷಿಯಾಗಲಿ ಎಂದು ಹರಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ಎಸ್ ಜೈಶಂಕರ್ ಮತ್ತು ಜಿತೇಂದ್ರ ಸಿಂಗ್, ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಸೌಹಾರ್ದತೆಯ ಸಂದೇಶ ಸಾರಿದ ಕಾರ್ಯಕ್ರಮ ;
ಹೊಸ ಸಂಸತ್ ಭವನ ಉದ್ಘಟನಾ ಕಾರ್ಯಕ್ರಮ ಬೆಳಗ್ಗೆ 7.30 ರಿಂದ ಆರಂಭವಾಯಿತು. ಐತಿಹಾಸಿ ಸೆಂಗೋಲ್ ಅನ್ನು ಪ್ರಧಾನಿ ಮೋದಿ ಅವರು ಲೋಕಸಭಾ ಸ್ಪೀಕರ್ ಸ್ಥಾನದ ಸಮೀಪದಲ್ಲಿ ಪ್ರತಿಷ್ಠಾಪಿಸಿದ್ದಾರೆ. ಪೂಜಾ-ವಿಧಿವಿಧಾನಗಳು ನಡೆಯುತ್ತಿದ್ದು, ವಿವಿಧ ಧರ್ಮದ ಮುಖಂಡರು ಪ್ರಾರ್ಥನೆ ಸಲ್ಲಿಸುವ ಮೂಲಕ ಸೌಹಾರ್ದತೆಯ ಸಂದೇಶವನ್ನು ಸಾರಿದರು.
ನೂತನ ಕಟ್ಟಡದ ವೈಶಿಷ್ಟ್ಯಗಳು ;
Prime Minister Narendra Modi today inaugurated the new parliament building and installed a historic sceptre ‘Sengol' near the Lok Sabha Speaker's chair. A puja and a multi-faith prayer were held on the occasion. He also unveiled a commemorative plaque for the new building. Lok Sabha Speaker Om Birla and Adheenam seers were present at the event. The seers handed over the ‘Sengol' to PM Modi who walked into the new Parliament building and installed it.
22-07-25 11:10 pm
Bangalore Correspondent
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
22-07-25 11:13 pm
Mangalore Correspondent
ಧರ್ಮಸ್ಥಳ ಕೇಸ್ ; ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ...
22-07-25 10:57 pm
Mangalore Yathicorp AI: ಯತಿಕಾರ್ಪ್ ಸಂಸ್ಥೆಯಿಂದ...
22-07-25 09:42 pm
Mangalore Hotel Kodakkene Owner Suicide: ಹೊಟೇ...
22-07-25 01:27 pm
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
22-07-25 09:45 pm
Mangalore Correspondent
Kalaburagi Jewellery Robbery, Arrest: ಕಲಬುರಗಿ...
22-07-25 12:38 pm
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm