ಬ್ರೇಕಿಂಗ್ ನ್ಯೂಸ್
29-05-23 12:01 pm HK News Desk ದೇಶ - ವಿದೇಶ
ಗುವಾಹಟಿ, ಮೇ 29: ಅಸ್ಸಾಂ ರಾಜ್ಯದ ಗುವಾಹಟಿ ಜಲುಕ್ಬರಿ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಟ 7 ವಿದ್ಯಾರ್ಥಿಗಳು ಸಾವನ್ನಪ್ಪಿ, ಹಲವರಿಗೆ ಗಾಯಗಳಾಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ಅಜಾರಾ ಪ್ರದೇಶದಿಂದ ವೇಗವಾಗಿ ಬರುತ್ತಿದ್ದ ಕಾರು ಡಿವೈಡರ್ ದಾಟಿ ಎದುರಿನ ಲೇನ್‌ನಲ್ಲಿ ಸಾಗುತ್ತಿದ್ದ ಸರಕು ಸಾಗಣೆ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 7 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಸರಕು ಸಾಗಣೆ ಟ್ರಕ್ ನಲ್ಲಿದ್ದ 6 ಮಂದಿ ಘಟನೆಯಲ್ಲಿ ಗಾಯಗೊಂಡಿದ್ದಾರೆ.

ಮೃತರು 7 ಮಂದಿ ಅಸ್ಸಾಂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಸಿದ್ದಾರೆ.


ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಅಸ್ಸಾಂ ರಾಜ್ಯದ ಮುಖ್ಯಮಂತ್ರಿ ಹಿಮಂತ್ ಅವರು, ಮೃತರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಜಲುಕ್ಬರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವ ಮತ್ತು ಅಮೂಲ್ಯ ಜೀವಗಳನ್ನು ಕಳೆದುಕೊಂಡಿರುವುದು ಅತೀವ್ರ ನೋವು ತಂದಿದೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಘಟನೆ ಸಂಬಂಧ ಅಧಿಕಾರಿಗಳೊಂದಿಗೆ ಮಾತನಾಡಿದ್ದು, ಗಾಯಗೊಂಡವರಿಗೆ ಸಾಧ್ಯವಿರುವ ಎಲ್ಲ ವೈದ್ಯಕೀಯ ನೆರವು ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
Seven students of Assam Engineering College were killed and six others injured in a road accident in Guwahati on Monday, police said. Ten third-year students left the college premises in a car early this morning, and their speeding vehicle hit a road divider and then collided with a pick-up van in Jalukbari area of the city, an officer said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm