ಬ್ರೇಕಿಂಗ್ ನ್ಯೂಸ್
30-10-20 11:24 am Headline Karnataka News Network ದೇಶ - ವಿದೇಶ
ಶ್ರೀನಗರ, ಅ.30: ಜಿಲ್ಲಾ ಬಿಜೆಪಿ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಭಾರತೀಯ ಜನತಾ ಪಕ್ಷದ ಮೂರು ಮಂದಿ ಕಾರ್ಯಕರ್ತರನ್ನು ಶಂಕಿತ ಉಗ್ರರು ದಕ್ಷಿಣ ಕಾಶ್ಮೀರದ ಕುಲುಗಾಂನಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಮೃತರಲ್ಲಿ ಕುಲುಗಾಂ ಬಿಜೆಪಿ ಯುವ ಘಟಕದ ಪದಾಧಿಕಾರಿ ಫಿದಾ ಹುಸೈನ್ ಯಾತೂ ಮತ್ತು ಸಹ ಕಾರ್ಯಕರ್ತರಾದ ಉಮರ್ ರಶೀದ್ ಬೇಗ್ ಹಾಗೂ ಉಮರ್ ರಮ್ಝಾನ್ ಹಜಮ್ ಸೇರಿದ್ದಾರೆ. ರಾತ್ರಿ 8:20ರ ವೇಳೆಗೆ ಖಾಝಿಗುಂಡ್ ಗ್ರಾಮದ ವೈ.ಕೆ.ಪುರದಲ್ಲಿ ಈ ದಾಳಿ ನಡೆದಿದೆ ಎಂದು ಕಾಶ್ಮೀರ ವಲಯ ಐಜಿಪಿ ವಿಜಯ್ ಕುಮಾರ್ ಪ್ರಕಟಿಸಿದ್ದಾರೆ. ಮೂವರೂ ಖಾಝಿಗುಂಡ್ ತುರ್ತು ಆಸ್ಪತ್ರೆಗೆ ಮೃತ ಸ್ಥಿತಿಯಲ್ಲಿ ತರಲಾಗಿದೆ ಎಂದು ವೈದ್ಯಕೀಯ ಅಧೀಕ್ಷಕ ಡಾ.ಅಸೀಮಾ ನಝೀರ್ ಹೇಳಿದ್ದಾರೆ.

ಬಂಡೀಪುರ ಜಿಲ್ಲಾ ಬಿಜೆಪಿ ಅಧ್ಯಕ್ಷ ಶೇಕ್ ವಸೀಮ್ ಬಾರಿ ಅವರ ತಂದೆ ಮತ್ತು ಸಹೋದರನನ್ನು ಜುಲೈನಲ್ಲಿ ಹತ್ಯೆ ಮಾಡಿದಾಗಿನಿಂದ ಈ ವರ್ಷ ಇದುವರೆಗೆ ಒಂಬತ್ತು ಮಂದಿ ಬಿಜೆಪಿ ಸದಸ್ಯರನ್ನು ಹತ್ಯೆ ಮಾಡಲಾಗಿದೆ. ಯಾವುದೇ ಉಗ್ರ ಸಂಘಟನೆ ಈ ಹತ್ಯೆಯ ಹೊಣೆ ಹೊತ್ತಿಲ್ಲ. ಕಳೆದ ಜೂನ್‌ನಿಂದೀಚೆಗೆ ಉಗ್ರ ಸಂಘಟನೆಗಳು ವಿವಿಧ ಪಕ್ಷಗಳ ತಳಮಟ್ಟದ ಕಾರ್ಯಕರ್ತರನ್ನು ಗುರಿಯಾಗಿಸಿವೆ.
ಜೂನ್ 8ರಂದು ಕಾಂಗ್ರೆಸ್ ಸರಪಂಚ ಅಜಯ್ ಪಂಡಿತ ಅವರನ್ನು ಅನಂತ್‌ನಾಗ್‌ನಲ್ಲಿ ಹತ್ಯೆ ಮಾಡಿದ ಬಳಿಕ ಬಿಜೆಪಿಗೂ ಉಗ್ರದಾಳಿ ತಟ್ಟಿದೆ. ಜೆಇಎಂ ಮತ್ತು ಎಲ್‌ಇಟಿ ದಾಳಿಯ ಭೀತಿ ಬಗ್ಗೆ ಗುಪ್ತಚರ ಇಲಾಖೆ ವರದಿ ನೀಡಿದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಆಗಸ್ಟ್‌ನಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಸರಪಂಚರನ್ನು ಮತ್ತು ಕಾರ್ಯಕರ್ತರನ್ನು ದಕ್ಷಿಣ ಕಾಶ್ಮೀರದಲ್ಲಿ ಸುರಕ್ಷಿತ ಮನೆಗಳಿಗೆ ಸ್ಥಳಾಂತರಿಸಿದ್ದರು.
Suspected terrorists on Thursday shot dead three Bharatiya Janata Party (BJP) workers in South Kashmir’s Kulgam district, police officials said.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm