ಬ್ರೇಕಿಂಗ್ ನ್ಯೂಸ್
03-06-23 09:04 pm HK News Desk ದೇಶ - ವಿದೇಶ
ನವದೆಹಲಿ, ಜೂ 03: ಒಡಿಶಾದ ಬಾಲಸೋರ್‌ನಲ್ಲಿ ರೈಲು ಅಪಘಾತ ನಡೆದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದರು. ಮೋದಿ ಕಟಕ್‌ನ ಆಸ್ಪತ್ರೆಗಳಲ್ಲಿ ಗಾಯಗೊಂಡವರನ್ನು ಭೇಟಿಯಾಗಲಿದ್ದಾರೆ ಎಂದು ಅವರ ಕಚೇರಿ ಟ್ವೀಟ್ ಮಾಡಿದೆ.ಕ್ಯಾಬಿನೆಟ್ ಸಹೋದ್ಯೋಗಿಗಳಾದ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಮೋದಿ ಅವರು ಸ್ಥಳವನ್ನು ಪರಿಶೀಲಿಸಿದರು.
ಭುವನೇಶ್ವರದಿಂದ ಉತ್ತರಕ್ಕೆ 170 ಕಿಮೀ ದೂರದಲ್ಲಿರುವ ಬಾಲಸೋರ್ ಜಿಲ್ಲೆಯ ಬಹನಾಗ ಬಜಾರ್ ನಿಲ್ದಾಣದಲ್ಲಿ ಘಟನೆ ನಡೆದ ಸ್ಥಳದ ಬಳಿ ಪ್ರಧಾನಿ ಮೋದಿ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಬಂದಿಳಿದರು. ಸ್ಥಳದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯನ್ನು ವಿಕ್ಷೀಸಿದರು. ಅಪಘಾತದಲ್ಲಿ ಗಾಯಗೊಂಡು ಬದುಕುಳಿದವರನ್ನು ಭೇಟಿ ಮಾಡಲು ಅವರು ಬಾಲಸೋರ್ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.
ನಿನ್ನೆ ರಾತ್ರಿ ನಡೆದ ದುರಂತರದಲ್ಲಿ ಈ ವರೆಗೂ 261 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಎಂದು ವರದಿಯಾಗಿದೆ. ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿಯನ್ನು ಪರಿಶೀಲಿಸಲು ಇಂದು ಮುಂಜಾನೆ ಪ್ರಧಾನಿ ಮೋದಿ ಸಭೆ ಕರೆದಿದ್ದರು.
ಶುಕ್ರವಾರ ಸಂಜೆ 7 ಗಂಟೆಗೆ ಬಾಲಸೋರ್‌ನಲ್ಲಿ ರೈಲಿನ ಒಂದು ಬೋಗಿ ಹಳಿತಪ್ಪಿದ ನಂತರ ಮೂರು ರೈಲುಗಳು ಡಿಕ್ಕಿ ಹೊಡೆದವು. ಅಪಘಾತದಲ್ಲಿ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಸೇರಿವೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ರಾಜ್ಯಕ್ಕೆ ಭೇಟಿ ನೀಡಿದ್ದು, ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಆಸ್ಪತ್ರೆಗಳಲ್ಲಿ ಗಾಯಗೊಂಡವರನ್ನು ಭೇಟಿಯಾಗಿದ್ದಾರೆ. ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರು ಇಂದು ಬೆಳಿಗ್ಗೆ ಬಾಲಸೋರ್‌ಗೆ ಭೇಟಿ ನೀಡಿದ್ದಾರೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.
ಭೀಕರ ರೈಲು ಅಪಘಾತದಲ್ಲಿ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ. ರೈಲು ಹಳಿಗಳನ್ನು ಮರು ಸ್ಥಾಪಿಸುವ ಕಾರ್ಯ ಪ್ರಾರಂಭವಾಗಿದೆ ಎಂದು ರೈಲ್ವೇ ವಕ್ತಾರ ಅಮಿತಾಭ್ ಶರ್ಮಾ ಇಂದು ಮಧ್ಯಾಹ್ನ ಹೇಳಿದ್ದಾರೆ. ಭೀಕರ ಅಪಘಾತ ನಡೆದ ಸುಮಾರು 18 ಗಂಟೆಗಳ ನಂತರ ಈ ಮಾಹಿತಿಯನ್ನು ತಿಳಿಸಿದ್ದಾರೆ.
ಅಪಘಾತ ಹೇಗೆ ಸಂಭವಿಸಿತು ಎಂಬುದರ ಕುರಿತು ಉನ್ನತ ಮಟ್ಟದ ತನಿಖೆಗೆ ರೈಲ್ವೆ ಸಚಿವಾಲಯ ಆದೇಶಿಸಿದೆ. ಮೃತರ ಕುಟುಂಬಕ್ಕೆ ₹ 10 ಲಕ್ಷ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ₹ 2 ಲಕ್ಷ ಪರಿಹಾರ ನೀಡುವುದಾಗಿ ಸಚಿವಾಲಯ ಘೋಷಿಸಿದೆ. ಪ್ರಧಾನಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಮೃತರ ಕುಟುಂಬಕ್ಕೆ ₹ 2 ಲಕ್ಷ ಮತ್ತು ಗಾಯಗೊಂಡವರಿಗೆ ₹ 50,000 ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.
Prime Minister Narendra Modi on Saturday, June 3, visited Odisha's Balasore, a day after a massive accident took place there. He visited the site of the accident and took stock of the ongoing relief operations going on. He also emphasised a 'Whole of Government' approach to mitigating the monumental tragedy.
26-09-23 08:57 pm
HK News Desk
Bengaluru Bandh, Cauvery water: ಕಾವೇರಿ ಹೋರಾಟ...
26-09-23 05:41 pm
Tumkur Car Accident: ತುಮಕೂರು ; ರಥೋತ್ಸವ ಕಾರ್ಯಕ...
26-09-23 12:37 pm
Hd Kumaraswamy, Bengaluru Bandh Cauvery: ಇದೇನ...
26-09-23 12:28 pm
Bengaluru, City police commissioner, Cauvery...
25-09-23 07:09 pm
26-09-23 07:44 pm
HK News Desk
Goa Deltin Royale Casino GST Notice, 17 thous...
26-09-23 06:32 pm
Kasaragod accident, five dead: ಬದಿಯಡ್ಕ ಬಳಿ ಭೀ...
25-09-23 11:06 pm
Delhi,AIADMK-BJP alliance: ತಮಿಳುನಾಡು ಬಿಜೆಪಿಗೆ...
25-09-23 09:32 pm
Jog falls drowning: ಜೋಗ್ ಫಾಲ್ಸ್ ಸಮೀಪ ದುರಂತ ;...
24-09-23 09:05 pm
26-09-23 02:24 pm
Mangalore Correspondent
Subramanya, illegal cattle Cow trafficking, M...
26-09-23 10:52 am
Mangalore Dinesh Gundu Rao, Janatha Darshana:...
25-09-23 09:38 pm
Mangalore Eid Milad 2023, Banner Fish Bunder:...
25-09-23 06:17 pm
Ullal Suicide, Train Mangalore; ರೈಲಿನಡಿಗೆ ಹಾರ...
25-09-23 05:22 pm
26-09-23 07:20 pm
HK News Desk
Udupi, OTP Fraud, Kapu: ಬ್ಯಾಂಕ್ ಅಧಿಕಾರಿ ಎಂದು...
24-09-23 10:27 pm
Mangalore Rowdy Sheeter Tallat arrested by CC...
20-09-23 11:43 am
ಸುಳ್ಯಕ್ಕೆ ಬಂದಿದ್ದ ಕೊಡಗಿನ ಯುವಕನಿಗೆ ಹಲ್ಲೆಗೈದು ದ...
19-09-23 09:31 pm
Bantwal Robbery: ಬಂಟ್ವಾಳ ; ಹಗಲು ವೇಳೆ ಮನೆಗೆ ನು...
18-09-23 10:59 pm