ಅಂತಾರಾಷ್ಟ್ರೀಯ ಯೋಗ ದಿನ ; ಭಾರತದ ಕರೆಗೆ 180ಕ್ಕೂ ಹೆಚ್ಚು ದೇಶಗಳು ಒಗ್ಗೂಡಿರುವುದು ‘ಐತಿಹಾಸಿಕ’, ಅಮೆರಿಕದಿಂದ ಮೋದಿ ವಿಡಿಯೋ ಸಂದೇಶ

21-06-23 11:46 am       HK News Desk   ದೇಶ - ವಿದೇಶ

ಅಂತಾರಾಷ್ಟ್ರೀಯ ಯೋಗ ದಿನದ ಮೂಲಕ ಯೋಗವು ಇಂದು ಜಾಗತಿಕ ಚಳುವಳಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.

ನ್ಯೂಯಾರ್ಕ್, ಜೂನ್ 21​: ಅಂತಾರಾಷ್ಟ್ರೀಯ ಯೋಗ ದಿನದ ಮೂಲಕ ಯೋಗವು ಇಂದು ಜಾಗತಿಕ ಚಳುವಳಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.

ನಾಲ್ಕು ದಿನಗಳ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಇಂದು ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆಯಲ್ಲಿ ದೇಶದ ಜನತೆಗೆ ವಿಡಿಯೋ ಸಂದೇಶವನ್ನು ರವಾನಿಸಿದ್ದಾರೆ.

ವಸುದೈವ ಕುಟುಂಬಕಂ (ವಿಶ್ವವೇ ಒಂದು ಕುಟುಂಬ) ಎಂಬ ಧ್ಯೇಯ ವಾಕ್ಯದೊಂದಿಗೆ ವಿಶ್ವದಾದ್ಯಂತ ಕೋಟ್ಯಂತರ ಜನರು ಇಂದು ಯೋಗಾಭ್ಯಾಸ ಮಾಡುವ ಮೂಲಕ ಅಂತಾರಾಷ್ಟ್ರೀಯ ಯೋಗ ದಿನದ ಆಚರಣೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿದರು.

Narendra Modi | Prime Minister Narendra Modi to lead unique yoga session at  the United Nations Headquarters - Telegraph India

PM Modi to lead Yoga Day 2023 celebrations with people from over 180  nations at UN HQ - India Today

ಅಂದಹಾಗೆ ಪ್ರಧಾನಿ ಮೋದಿ ಅವರು ಇಂದು ಸಂಜೆ 5.30ಕ್ಕೆ ನ್ಯೂಯಾರ್ಕ್​ನಲ್ಲಿರುವ ವಿಶ್ವಸಂಸ್ಥೆಯ ಮುಖ್ಯ ಕಚೇರಿಯ ಮುಂದೆ ನಡೆಯಲಿರುವ ಅಂತಾರಾಷ್ಟ್ರೀಯ ಯೋಗದ ದಿನದ ಆಚರಣೆಯ ನೇತೃತ್ವ ವಹಿಸಲಿದ್ದಾರೆ.

ಭಾರತದ ಕರೆಗೆ 180ಕ್ಕೂ ಹೆಚ್ಚು ದೇಶಗಳು ಒಗ್ಗೂಡಿರುವುದು ‘ಐತಿಹಾಸಿಕ’ ಎಂದು ಪ್ರತಿಪಾದಿಸಿದ ಪ್ರಧಾನಿ ಮೋದಿ, 2014 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಗೆ ಯೋಗ ದಿನದ ಪ್ರಸ್ತಾಪ ಬಂದಾಗ, ಅದನ್ನು ದಾಖಲೆ ಸಂಖ್ಯೆಯ ದೇಶಗಳು ಬೆಂಬಲಿಸಿದವು ಎಂದರು ಹೇಳಿದರು.

ವಿಶ್ವಸಂಸ್ಥೆಯು ಜುಲೈ 21 ಅನ್ನು ಅಂತಾರಾಷ್ಟ್ರೀಯ ಯೋಗ ದಿನವೆಂದು ಗುರುತಿಸಿದ ನಂತರ, ಯೋಗವು ಜಾಗತಿಕ ಚಳುವಳಿ ಮತ್ತು ಜಾಗತಿಕ ಚೈತನ್ಯವಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.

ಪ್ರಧಾನಿ ಮೋದಿ ಅವರ ಮನವಿಯಿಂದಾಗಿ 2015ರಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಾರಂಭವಾಯಿತು. ಪ್ರತಿ ವರ್ಷ ಜೂನ್​ 21ರಂದು ನಡೆಯುವ ವಾರ್ಷಿಕ ಕಾರ್ಯಕ್ರಮವನ್ನು ಆಯುಷ್​ ಸಚಿವಾಲಯದ ಅಡಿಯಲ್ಲಿ ನಡೆಯುತ್ತದೆ.

" Yoga has become global movement through International Day of Yoga," PM Modi said in a video message today. PM Modi is in New York on the first leg of his first state visit to the US at the invitation of President Joe Biden and First Lady Jill Biden.