ಬ್ರೇಕಿಂಗ್ ನ್ಯೂಸ್
01-07-23 01:42 pm HK News Desk ದೇಶ - ವಿದೇಶ
ಮುಂಬೈ, ಜುಲೈ 1: ನಸುಕಿನಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ ಡಿವೈಡರ್ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿದ್ದು 26 ಮಂದಿ ಸಜೀವ ದಹನಗೊಂಡ ದುರಂತ ಘಟನೆ ಮುಂಬೈ-ನಾಗ್ಪುರ ಎಕ್ಸ್ಪ್ರೆಸ್ವೇಯಲ್ಲಿ ನಡೆದಿದೆ.
ಬುಲ್ಧಾನ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. 33 ಜನರು ಪ್ರಯಾಣಿಸುತ್ತಿದ್ದ ಬಸ್ ಯವತ್ಮಾಲ್ ನಿಂದ ಪುಣೆಗೆ ತೆರಳುತ್ತಿದ್ದ ವೇಳೆ ಎಕ್ಸ್ಪ್ರೆಸ್ವೇಯಲ್ಲಿ ಬಸ್ ಡಿವೈಡರ್ ಡಿಕ್ಕಿಯಾಗಿ ಟೈರ್ ಒಡೆದಿದೆ. ಕೂಡಲೇ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ನಡು ರಾತ್ರಿಯಾಗಿದ್ದರಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಮಲಗಿದ್ದರು. ಬಸ್ ಹೊತ್ತಿ ಉರಿದಿದ್ದು ಹೊರ ಬರಲಾಗದೇ 26 ಮಂದಿ ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಬಸ್ಸಿನ ಚಾಲಕ ಸುರಕ್ಷಿತವಾಗಿ ಪಾರಾಗಿದ್ದಾರೆ. 6-8 ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಬುಲ್ಧಾನ ಎಸ್ಪಿ ಸುನೀಲ್ ಕಡಸನೆ ಹೇಳಿದ್ದಾರೆ. ದುರ್ಘಟನೆಯಲ್ಲಿ ಪಾರಾದ ಪ್ರಯಾಣಿಕರೊಬ್ಬರು ಸಂದರ್ಭವನ್ನು ವಿವರಿಸಿದ್ದು ಹೀಗೆ. ಬಸ್ಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ನಾವು ಎರಡು- ಮೂರು ಜನ ಬಸ್ ಕಿಟಕಿ ಒಡೆದು, ಹೊರಗೆ ಹಾರಿದ್ದೇವೆ ಎಂದಿದ್ದಾರೆ. ಅಂದಹಾಗೇ, ಈ ಬಸ್ ನಾಗ್ಪುರದಿಂದ ಪುಣೆಗೆ ಹೋಗುತ್ತಿತ್ತು. 33 ಪ್ರಯಾಣಿಕರು ಇದ್ದರು ಎನ್ನಲಾಗುತ್ತಿದ್ದ ಮೂರ್ನಾಲ್ಕು ಮಂದಿ ಮಾತ್ರ ಬದುಕಿ ಉಳಿದಿದ್ದಾರೆ.
As many as 26 people died and several others were injured after a bus caught fire on the Samruddhi Mahamarg Expressway in Maharashtra. The bus was travelling from Yavatmal to Pune. The incident happened around 2 am on Saturday in Buldhana district of the state, news agency ANI reported.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm