ಬ್ರೇಕಿಂಗ್ ನ್ಯೂಸ್
03-07-23 01:36 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 3: ಮಹಾರಾಷ್ಟ್ರದಲ್ಲಿ ಎನ್‌ಸಿಪಿ ನಾಯಕರ ಬಣ ಅಜಿತ್ ಪವಾರ್ ನೇತೃತ್ವದಲ್ಲಿ ಎನ್ ಡಿಎ ಮೈತ್ರಿಕೂಟ ಸೇರಿದ ಬೆನ್ನಲ್ಲೇ ಬಿಜೆಪಿ ಆಟ ಶುರುವಾಗಿದೆ. ಎನ್ ಸಿಪಿ ನಾಯಕ ಪ್ರಫುಲ್ ಪಟೇಲ್ ಕೇಂದ್ರ ಸಂಪುಟ ಸೇರಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ಸದಸ್ಯರೊಂದಿಗೆ ಮಹತ್ವದ ಸಭೆ ಕರೆದಿರುವುದು ಕುತೂಹಲ ಮೂಡಿಸಿದೆ.
ಕೇಂದ್ರ ಸಚಿವ ಸಂಪುಟ ಪುನಾರಚನೆ ಆಗಲಿದೆ ಎಂಬ ವದಂತಿ ನಡುವೆ ಈ ಸಭೆ ನಡೆಯುತ್ತಿದ್ದು, ಎನ್ ಸಿಪಿ ನಾಯಕ ಪ್ರಫುಲ್ ಪಟೇಲ್ ಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ನವದೆಹಲಿಯ ಪ್ರಗತಿ ಮೈದಾನದ ಕನ್ವೆನ್ಷನ್ ಸೆಂಟರ್ ನಲ್ಲಿ ಈ ಸಭೆ ನಡೆಯಲಿದೆ. ಮಹಾರಾಷ್ಟ್ರದಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಎನ್ ಸಿಪಿ ನಾಯಕ ಅಜಿತ್ ಪವಾರ್ ಬಿಜೆಪಿ-ಶಿವಸೇನೆ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದರು. ಈ ಬೆಳವಣಿಗೆ ರಾಷ್ಟ್ರ ರಾಜಕಾರಣದ ಮೇಲೆ ಪರಿಣಾಮ ಬೀರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಶರದ್ ಪವಾರ್ ಅವರ ಆಪ್ತರಾಗಿದ್ದ ಪ್ರಫುಲ್ ಪಟೇಲ್ ಸಹ ಬಿಜೆಪಿಗೆ ಬೆಂಬಲ ಘೋಷಿಸಿದ್ದು ಸಂಸದರಾಗಿರುವ ಅವರಿಗೆ ಈಗ ಕೇಂದ್ರ ಸಚಿವ ಸ್ಥಾನ ಒಲಿಯಲಿದೆ ಎಂದು ಹೇಳಲಾಗುತ್ತಿದೆ.
ಇದೇ ವೇಳೆ, ಕರ್ನಾಟಕದ ಮತ್ತೊಬ್ಬ ಸಂಸದನಿಗೆ ಸಚಿವ ಸ್ಥಾನ ಸಿಗಲಿದೆ ಎನ್ನಲಾಗುತ್ತಿದ್ದು ಯಡಿಯೂರಪ್ಪ ಪುತ್ರ ರಾಘವೇಂದ್ರ ಅವರಿಗೆ ಸಚಿವ ಸ್ಥಾನ ಒಲಿಯುತ್ತೆ ಅನ್ನುವ ಮಾತುಗಳು ಕೇಳಿಬರುತ್ತಿವೆ. ಯಡಿಯೂರಪ್ಪ ಅವರನ್ನು ಮನವೊಲಿಸುವ ಪ್ರಯತ್ನವಾಗಿ ಸಚಿವ ಸ್ಥಾನ ನೀಡಲಿದ್ದಾರೆ ಎನ್ನುವ ವದಂತಿ ಹರಡಿದೆ. ವಿಪಕ್ಷ ನಾಯಕನ ಸ್ಥಾನಕ್ಕೆ ಲಿಂಗಾಯತ ಹೊರತುಪಡಿಸಿ ಬೇರೊಬ್ಬ ವ್ಯಕ್ತಿಯ ನೇಮಕ ಮಾಡುವ ಸಲುವಾಗಿ ಯಡಿಯೂರಪ್ಪ ಪುತ್ರನಿಗೆ ಸಚಿವ ಸ್ಥಾನ ನೀಡಿ ಮನವೊಲಿಸುತ್ತಾರೆಯೇ ಎನ್ನುವ ವದಂತಿಗಳಿವೆ.
NCP chief Sharad Pawar has convened a meeting on July 5 in Mumbai — after Nationalist Congress Party (NCP) leader and former Leader of Opposition Ajit Pawar took an oath as the deputy chief minister of Maharashtra — to discuss the developments and the future course of action, its state unit chief Jayant Patil said.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 05:22 pm
Mangalore Correspondent
Akanksha Suicide, Dharmasthala, Mangalore: ಏರ...
19-05-25 12:31 pm
Akanksha Death, Punjab, Dharmasthala, Mangalo...
18-05-25 12:42 pm
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
19-05-25 03:35 pm
HK News Desk
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm