ಬ್ರೇಕಿಂಗ್ ನ್ಯೂಸ್
05-07-23 10:25 pm HK News Desk ದೇಶ - ವಿದೇಶ
ಭೋಪಾಲ್, ಜುಲೈ 5: ಬುಡಕಟ್ಟು ಸಮುದಾಯಕ್ಕೆ ಸೇರಿದ ಯುವಕನ ಮೇಲೆ ಮೇಲ್ಚರ್ಗದ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಆಕ್ರೋಶ ಬಿಜೆಪಿ ಸರ್ಕಾರದ ವಿರುದ್ಧ ತಿರುಗುತ್ತಲೇ ಮಧ್ಯಪ್ರದೇಶ ಸರ್ಕಾರ ಆರೋಪಿಗೆ ಸೇರಿದ ಅಕ್ರಮ ಕಟ್ಟಡವನ್ನು ಬುಲ್ಡೋಜರ್ ಬಳಸಿ ಧ್ವಂಸ ಮಾಡಿದೆ.
ಮಧ್ಯಪ್ರದೇಶ ರಾಜ್ಯದ ಸಿಧಿ ಜಿಲ್ಲೆಯಲ್ಲಿ ಘಟನೆ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಿಜೆಪಿಗೆ ಸೇರಿದವನು ಎಂದು ಹೇಳಿದ್ದ ಕಾಂಗ್ರೆಸ್ ಪಕ್ಷ ಒಟ್ಟು ಪ್ರಕರಣವನ್ನು ರಾಜಕೀಯಕ್ಕೆ ಎಳೆದು ತಂದಿತ್ತು. ಅಲ್ಲದೆ, ಆರೋಪಿಗೆ ಸೇರಿದ ಕಟ್ಟಡಗಳನ್ನು ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲು ಆಗ್ರಹಿಸಿತ್ತು.
ಪ್ರಕರಣ ಸಂಬಂಧ ಮಧ್ಯಪ್ರದೇಶದ ಬಿಜೆಪಿ ಸರ್ಕಾರ ಸಮಗ್ರ ತನಿಖೆಗೆ ಆದೇಶ ಮಾಡಿದೆ. ಅಲ್ಲದೆ, ರಾಜ್ಯ ಘಟಕವು ನಾಲ್ವರು ಸದಸ್ಯರ ಸಮಿತಿ ರಚಿಸಿದ್ದು, ಘಟನೆ ಕುರಿತಾಗಿ ವರದಿ ನೀಡುವಂತೆ ಸೂಚಿಸಿದೆ. ಪ್ರಕರಣ ದಾಖಲಿಸಿಕೊಂಡಿದ್ದ ಮಧ್ಯಪ್ರದೇಶ ಪೊಲೀಸರು, ಆರೋಪಿಯನ್ನು ಬಂಧಿಸಿದ್ದರು. ಬಂಧಿತ ಆರೋಪಿಯ ಹೆಸರು ಪ್ರವೇಶ್ ಶುಕ್ಲಾ ಎಂದು ತಿಳಿದು ಬಂದಿದೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ಕೆಲವು ತಿಂಗಳ ಹಿಂದೆ ನಡೆದ ಕೃತ್ಯ ಎಂದು ಮಧ್ಯ ಪ್ರದೇಶ ರಾಜ್ಯ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷ ಕಾಂತಿಲಾಲ್ ಭೂರಿಯಾ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷವು ಈ ಕೃತ್ಯ ಎಸಗಿದ ಆರೋಪಿಗೆ ಬಿಜೆಪಿ ಜೊತೆ ನಂಟು ಇದೆ ಎಂದು ಆಪಾದಿಸಿತ್ತು. ಆದ್ರೆ, ಬಿಜೆಪಿ ಈ ಆರೋಪವನ್ನು ಸ್ಪಷ್ಟವಾಗಿ ನಿರಾಕರಿಸಿದ್ದು ಆರೋಪಿ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಹೇಳಿದೆ. ಮಧ್ಯ ಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಕೃತ್ಯವನ್ನು ಅಮಾನವೀಯ ಎಂದು ಖಂಡಿಸಿದ್ಧಾರೆ. ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಕೂಡ ಕೃತ್ಯವನ್ನು ಖಂಡಿಸಿದ್ದು, ಆರೋಪಿಯ ಆಸ್ತಿಗಳನ್ನು ಮುಟ್ಟುಗೋಲು ಹಾಕುವಂತೆ ಆಗ್ರಹ ಮಾಡಿದ್ದರು.
The Madhya Pradesh government will initiate bulldozer action to demolish the illegal properties of Pravesh Shukla, who was arrested after a purported video showing him urinating on a tribal man went viral on social media, state Home Minister Narottam Mishra said on Wednesday.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 05:22 pm
Mangalore Correspondent
Akanksha Suicide, Dharmasthala, Mangalore: ಏರ...
19-05-25 12:31 pm
Akanksha Death, Punjab, Dharmasthala, Mangalo...
18-05-25 12:42 pm
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
19-05-25 03:35 pm
HK News Desk
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm