ಬ್ರೇಕಿಂಗ್ ನ್ಯೂಸ್
07-07-23 06:15 pm HK News Desk ದೇಶ - ವಿದೇಶ
ತೆಲಂಗಾಣ, ಜುಲೈ 07: ಹೌರಾ-ಸಿಕಂದರಾಬಾದ್ ಫಲಕ್ನುಮಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡು 3 ಬೋಗಿಗಳು ಬೆಂಕಿಗಾಹುತಿಯಾಗಿರುವ ಘಟನೆ ತೆಲಂಗಾಣದ ಹೈದರಾಬಾದ್ ಸಮೀಪ ನಡೆದಿದೆ.
ತೆಲಂಗಾಣದ ಯಾದಾದ್ರಿ ಭುವನಗಿರಿ ಜಿಲ್ಲೆಯಲ್ಲಿ ಹೌರಾ-ಸಿಕಂದರಾಬಾದ್ ಫಲಕ್ನುಮಾ ಎಕ್ಸ್‌ಪ್ರೆಸ್‌ನಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಮೂರು ಬೋಗಿಗಳು ಸುಟ್ಟು ಕರಕಲಾಗಿದೆ.
ಲೋಕೋ ಪೈಲಟ್ ಎಚ್ಚರಿಕೆ ನೀಡಿದ ನಂತರ ಪಗಿಡಿಪಲ್ಲಿ ಮತ್ತು ಬೊಮ್ಮಾಯಪಲ್ಲಿ ನಡುವೆ ಬರುತ್ತಿದ್ದ ಈ ರೈಲನ್ನು ನಿಲ್ಲಿಸಲಾಯಿತು. ಎಲ್ಲ ಪ್ರಯಾಣಿಕರು ತಕ್ಷಣವೇ ರೈಲಿನಿಂದ ಇಳಿದರು. ಒಂದು ಕೋಚ್‌ನಿಂದ ಪ್ರಾರಂಭವಾದ ಬೆಂಕಿ ಇತರ ಮೂರು ಬೋಗಿಗಳಿಗೆ ವ್ಯಾಪಿಸಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. S4, S5, S6 ಎಂಬ ಮೂರು ಬೋಗಿಗಳಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ರೈಲ್ವೆ ಸಿಪಿಆರ್ಒ ಸಿಎಚ್ ರಾಕೇಶ್ ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಒಡಿಶಾದ ಬಾಲಾಸೋರ್ನಲ್ಲಿ ಸಂಭವಿಸಿದ್ದ ಭೀಕರ ರೈಲು ದುರಂತ ಇನ್ನೂ ನಮ್ಮ ಕಣ್ಣಮುಂದಿದೆ. ಜೂನ್ 2 ರಂದು ಒಡಿಶಾದ ಬಾಲಾಸೋರ್ನಲ್ಲಿ ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್, ಗೂಡ್ಸ್ ರೈಲು ಮತ್ತು ಯಶವಂತಪುರ-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲುಗಳ ನಡುವೆ ಅಪಘಾತ ಸಂಭವಿಸಿತ್ತು. ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಹಳಿ ತಪ್ಪಿದ ಕೋರಮಂಡಲ್ ಎಕ್ಸ್‌ಪ್ರೆಸ್‌ಗೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಯಶವಂತಪುರ-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದಿತ್ತು. ಈ ಭೀಕರ ರೈಲು ಅಪಘಾತದಲ್ಲಿ 288 ಜನರು ಬಲಿಯಾಗಿದ್ದು, 1000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ಮೃತರ ಪ್ರತಿ ಕುಟುಂಬಕ್ಕೆ ಕೇಂದ್ರ ರೈಲ್ವೆ ಸಚಿವಾಲಯ 10 ಲಕ್ಷ ರೂಪಾಯಿ, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು 5 ಲಕ್ಷ ರೂಪಾಯಿ ಮತ್ತು ಪ್ರಧಾನಿ ನರೇಂದ್ರ ಮೋದಿ 2 ಲಕ್ಷ ರೂಪಾಯಿ ಘೋಷಿಸಿದ್ದಾರೆ. ಒಟ್ಟು 17 ಲಕ್ಷ ಪರಿಹಾರ ಘೋಷಿಸಿದ್ದರು.
ಈ ಘಟನೆ ನಡೆದ 5 ದಿನಗಳ ಬೆನ್ನಲ್ಲೇ ಒಡಿಶಾದಲ್ಲಿ ಗೂಡ್ಸ್ ರೈಲಿಗೆ ಸಿಲುಕಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದರು. , ಅಪಘಾತದಲ್ಲಿ ಇನ್ನೂ ನಾಲ್ವರು ಗಾಯಗೊಂಡಿದ್ದರು. ಒಡಿಶಾದ ಜಾಜ್‌ಪುರ ರೈಲು ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್ ರೈಲಿನ ಬೋಗಿಗಳ ಕೆಳಗೆ ಕಾರ್ಮಿಕರು ವಿಶ್ರಾಂತಿ ಪಡೆಯುತ್ತಿದ್ದರು. ಹವಾಮಾನ ವೈಪರೀತ್ಯದಿಂದ ಜೋರಾಗಿ ಗಾಳಿ ಬೀಸಿದ್ದು, ರೈಲು ಚಲಿಸಿದ್ದರಿಂದ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿತ್ತು. ಮೃತರು ಹಾಗೂ ಗಾಯಾಳುಗಳು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು.
A fire broke out in the three coaches of Falaknuma Express between Bommaipally and Pagidipally in Telangana, following which it was stopped. All passengers deboarded the train and no injuries were reported.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 05:22 pm
Mangalore Correspondent
Akanksha Suicide, Dharmasthala, Mangalore: ಏರ...
19-05-25 12:31 pm
Akanksha Death, Punjab, Dharmasthala, Mangalo...
18-05-25 12:42 pm
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
19-05-25 03:35 pm
HK News Desk
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm