ಬ್ರೇಕಿಂಗ್ ನ್ಯೂಸ್
10-07-23 06:57 pm HK News Desk ದೇಶ - ವಿದೇಶ
ಲಕ್ನೋ, ಜುಲೈ 10: ಉತ್ತರ ಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 34 ಜನರು ಸಾವನ್ನಪ್ಪಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಹತ್ತು ಸಾವುಗಳು ವರದಿಯಾಗಿವೆ. ಸರ್ಕಾರದ ಅಂಕಿ- ಅಂಶಗಳ ಪ್ರಕಾರ, 34 ರಲ್ಲಿ 17 ಮಂದಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. 12 ಮಂದಿ ನೀರಿನಲ್ಲಿ ಮುಳುಗಿದ್ದಾರೆ ಮತ್ತು ಐವರು ಭಾರಿ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತದಲ್ಲಿ ಸಾವನ್ನಪ್ಪಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದರು ಮತ್ತು ವಿವಿಧ ಪ್ರಕೃತಿ ವಿಕೋಪಗಳಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವ ಭರವಸೆ ನೀಡಿದರು. ಈ ಮಾನ್ಸೂನ್ ಋತುವಿನಲ್ಲಿ ಉತ್ತರ ಪ್ರದೇಶವು ಈಗಾಗಲೇ 11 ಪ್ರತಿಶತ ಅಧಿಕ ಮಳೆಯನ್ನು ಪಡೆದಿದೆ. ಇದು ನದಿ ನೀರಿನ ಮಟ್ಟದಲ್ಲಿ ಏರಿಕೆಗೆ ಕಾರಣವಾಗಿದೆ. ಮತ್ತು ತಗ್ಗು ಪ್ರದೇಶಗಳನ್ನು ಜಲಾವೃತಗೊಳಿಸಿದೆ. ಭಾರತೀಯ ಮಾಪನಶಾಸ್ತ್ರ ಇಲಾಖೆ (ಐಎಂಡಿ) ಅಂಕಿಅಂಶಗಳ ಪ್ರಕಾರ ರಾಜ್ಯದ 75 ಜಿಲ್ಲೆಗಳ ಪೈಕಿ ಸುಮಾರು 68 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಭಾರೀ ಮಳೆಯಿಂದಾಗಿ ಗಂಗಾ, ರಾಮಗಂಗಾ, ಯಮುನಾ, ರಾಪ್ತಿ ಸೇರಿದಂತೆ ರಾಜ್ಯದಾದ್ಯಂತ ಹರಿಯುವ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.
ಕಳೆದ 50 ವರ್ಷಗಳಲ್ಲಿ ಹಿಮಾಚಲ ಪ್ರದೇಶವು ಈ ರೀತಿಯ ವ್ಯಾಪಕ ಮಳೆಯನ್ನು ಕಂಡಿಲ್ಲ ;
ಕಳೆದ 50 ವರ್ಷಗಳಲ್ಲಿ ಹಿಮಾಚಲ ಪ್ರದೇಶವು ಈ ರೀತಿಯ ವ್ಯಾಪಕ ಮಳೆಯನ್ನು ಕಂಡಿಲ್ಲ ಎಂದು ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಹೇಳಿದ್ದಾರೆ. ಮುಂಗಾರು ಮಳೆಯಿಂದ ಈವರೆಗೆ ರಾಜ್ಯದಲ್ಲಿ ₹3,000 ಕೋಟಿಯಷ್ಟು ನಷ್ಟ ಸಂಭವಿಸಿದೆ ಎಂದು ತಿಳಿಸಿದ್ದಾರೆ.
ಕಳೆದ ಎರಡು ದಿನಗಳಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ 17 ಮಂದಿ ಮೃತಪಟ್ಟಿದ್ದು, ಚಂದರ್ತಾಲ್, ಲಾಹೌಲ್ ಮತ್ತು ಸ್ಪಿತಿ ಸೇರಿ ವಿವಿಧೆಡೆ ಸಿಲುಕಿರುವ 400 ಮಂದಿ ಸ್ಥಳೀಯರು ಮತ್ತು ಪ್ರವಾಸಿಗರ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಅಧ್ಯಕ್ಷರು ನನ್ನ ಸಂಪರ್ಕದಲ್ಲಿದ್ದು, ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಅವರು ಹಮೀರ್ಪುರದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಬಡ್ಡಿ, ಕುಲು ಮತ್ತು ಉನಾದಲ್ಲಿ ಸೇತುವೆಗಳು ಮುರಿದು ಬಿದ್ದಿವೆ. ಕುಲುವಿನ ಲಾರ್ಗಿ ವಿದ್ಯುತ್ ತಯಾರಿಕಾ ಘಟಕ ನೀರಿನಲ್ಲಿ ಮುಳುಗಿದೆ ಎಂದು ಸುಖು ಹೇಳಿದರು.
ಭಾನುವಾರ ಸಂಜೆ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಮಳೆ ಹಾನಿಯ ಬಗ್ಗೆ ಅವಲೋಕಿಸಿದರು. ಸಂತ್ರಸ್ತರಿಗೆ ತಕ್ಷಣದ ಪರಿಹಾರವನ್ನು ಒದಗಿಸಲು ಅಗತ್ಯ ಸೂಚನೆಗಳನ್ನು ನೀಡಿದರು ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಾತ್ರಿಯಿಡೀ ಜನರನ್ನು ಸ್ಥಳಾಂತರಿಸುವ ರಕ್ಷಣಾ ಕಾರ್ಯಾಚರಣೆಯನ್ನು ಸಿಎಂ ಮೇಲ್ವಿಚಾರಣೆ ನಡೆಸಿದರು ಎಂದೂ ಹೇಳಿಕೆ ತಿಳಿಸಿದೆ.
ಕಳೆದ ರಾತ್ರಿಯಿಂದ ಮನಾಲಿಯ ಆಲೂಗಡ್ಡೆ ತೋಟದಲ್ಲಿ ಸಿಲುಕಿದ್ದ 29 ಜನರನ್ನು ಮತ್ತು ಮಂಡಿಯ ನಾಗವಾಯ್ನ್ ಗ್ರಾಮದಲ್ಲಿ ಆರು ಜನರನ್ನು ರಾಷ್ಟ್ರೀಯ ವಿಪತ್ತು ಪರಿಹಾರ ಪಡೆ (ಎನ್ಡಿಆರ್ಎಫ್) ಮತ್ತು ಪೊಲೀಸ್ ತಂಡಗಳು ರಕ್ಷಿಸಿವೆ ಎಂದು ಸುಖು ಹೇಳಿದರು.
ಚಂದ್ರತಾಲ್ ಸರೋವರದ ಬಳಿ ಸಿಲುಕಿರುವ ಪ್ರವಾಸಿಗರಿಗೆ ಸಾಕಷ್ಟು ಆಹಾರ, ಔಷಧಿಗಳು ಮತ್ತು ಇತರ ಅಗತ್ಯ ವಸ್ತುಗಳನ್ನು ಒದಗಿಸಲು ಹಾಗೂ ಸಮಯಕ್ಕೆ ಸರಿಯಾಗಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುವಂತೆ ನೋಡಿಕೊಳ್ಳಲು ಲಾಹೌಲ್ ಮತ್ತು ಸ್ಪಿತಿ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಸೂಚಿಸಿದರು.
ಅನಗತ್ಯವಾಗಿ ಪ್ರಯಾಣಿಸುವುದನ್ನು ತಪ್ಪಿಸಿ ಮತ್ತು ಹೊಳೆಗಳು ಹಾಗೂ ನದಿಗಳ ಬಳಿ ಹೋಗದಂತೆ ನಾನು ಜನರಲ್ಲಿ ಮನವಿ ಮಾಡುತ್ತೇನೆ ಎಂದು ಸುಖು ಹೇಳಿದರು.
At least 34 people died in Uttar Pradesh due to lightning and other rain-related incidents within 24 hours as the state experienced heavy rainfall on Saturday and Sunday.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 07:31 pm
HK News Desk
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm