ಬ್ರೇಕಿಂಗ್ ನ್ಯೂಸ್
11-07-23 01:17 pm HK News Desk ದೇಶ - ವಿದೇಶ
ಲಕ್ನೋ, ಜುಲೈ 11: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಇಂದು ಶಾಲಾ ಬಸ್ - ಕಾರಿನ ನಡುವೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ.
ಇಂದು ಮುಂಜಾನೆ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಕಾರಿಗೆ ಶಾಲಾ ಬಸ್ ಮುಖಾಮುಖಿಯಾಗಿದೆ. ಅದೃಷ್ಟವಶಾತ್ ಬಸ್‌ನಲ್ಲಿ ಯಾವುದೇ ಪ್ರಯಾಣಿಕರಿರಲಿಲ್ಲ. ಅಪಘಾತದಲ್ಲಿ ಸಾವನ್ನಪ್ಪಿದ ಎಲ್ಲಾ ಆರು ಜನರು ಕಾರಿನಲ್ಲಿದ್ದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಹೆಚ್ಚುವರಿ ಡಿಸಿಪಿ (ಟ್ರಾಫಿಕ್) ರಮಾನಂದ್ ಕುಶ್ವಾಹ ಅವರು, ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಶಾಲಾ ಬಸ್‌ಗೆ ಕಾರು ಡಿಕ್ಕಿ ಹೊಡೆದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಚಾಲಕ ದೆಹಲಿಯ ಗಾಜಿಪುರದಿಂದ ಸಿಎನ್‌ಜಿ ಪಡೆದು ತಪ್ಪು ದಿಕ್ಕಿನಿಂದ ಬರುತ್ತಿದ್ದ . ಕಾರು ಮೀರತ್‌ನಿಂದ ಗುರ್ಗಾಂವ್‌ಗೆ ಹೋಗುತ್ತಿತ್ತು ಆಗ ಈ ಭೀಕರ ಅಪಘಾತ ಸಂಭವಿಸಿದೆ. ಬಸ್‌ನಲ್ಲಿ ಯಾವುದೇ ವಿದ್ಯಾರ್ಥಿ ಇರಲಿಲ್ಲ' ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಸ್ತೆ ಅಪಘಾತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪವನ್ನೂ ವ್ಯಕ್ತಪಡಿಸಿದ್ದಾರೆ. ' ಅಗಲಿದ ಆತ್ಮಗಳಿಗೆ ಶಾಂತಿ ಸಿಗಲಿ ಮತ್ತು ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚಿಸಿದ್ದಾರೆ' ಎಂದು ಸಿಎಂ ಕಚೇರಿ ಟ್ವಿಟರ್ ನಲ್ಲಿ ಬರೆದುಕೊಂಡಿದೆ.
CCTV footage of the SUV-bus accident on Delhi-Meerut Expressway in Ghaziabad. pic.twitter.com/ZeIilkh3cQ
— Press Trust of India (@PTI_News) July 11, 2023
Six people were killed and two others critically injured after a school bus driving on the wrong side of the road rammed into an SUV on the Delhi-Meerut Expressway near Crossing Republik in Ghaziabad on Tuesday, police said.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 05:22 pm
Mangalore Correspondent
Akanksha Suicide, Dharmasthala, Mangalore: ಏರ...
19-05-25 12:31 pm
Akanksha Death, Punjab, Dharmasthala, Mangalo...
18-05-25 12:42 pm
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
19-05-25 03:35 pm
HK News Desk
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm