ಬ್ರೇಕಿಂಗ್ ನ್ಯೂಸ್
19-07-23 10:47 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 19: INDIA ಹೆಸರನ್ನು ಅಸಮರ್ಪಕವಾಗಿ ಬಳಸಿದ ಆರೋಪದ ಮೇಲೆ 26 ವಿರೋಧ ಪಕ್ಷಗಳ ವಿರುದ್ಧ ದೆಹಲಿಯ ಬರಾಖಂಬಾ ಪೊಲೀಸ್ ಠಾಣೆಯಲ್ಲಿ ಪೊಲೀಸ್ ದೂರು ದಾಖಲಾಗಿದೆ.
ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಮತ್ತು ಹೆಚ್ಚು ಗುರುತಿಸಿಕೊಳ್ಳುವುದಕ್ಕಾಗಿ ಈ ಹೆಸರನ್ನು ಬಳಸಲಾಗಿದೆ. ಹೀಗಾಗಿ ಮೈತ್ರಿ ಪಕ್ಷಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ದೂರುದಾರ ಡಾ.ಅವನೀಶ್ ಮಿಶ್ರಾ ಒತ್ತಾಯಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮಂಗಳವಾರ, ಬೆಂಗಳೂರಿನಲ್ಲಿ ನಡೆದ ಜಂಟಿ ಸಭೆಯ ನಂತರ 26 ವಿರೋಧ ಪಕ್ಷಗಳು ತಮ್ಮ ಮೈತ್ರಿಗೆ 'ಇಂಡಿಯಾ' (Indian National Developmental Inclusive Alliance) ಎಂಬ ಹೆಸರು ಘೋಷಿಸಿದ್ದವು.
ಮೈತ್ರಿಯ ಹೆಸರಿಗೆ ಆಕ್ಷೇಪ ವ್ಯಕ್ತಪಡಿಸಿದ ಡಾ.ಅವಿನೀಶ್ ಮಿಶ್ರಾ, ಚುನಾವಣೆಯಲ್ಲಿ ಅನಗತ್ಯವಾಗಿ 'ಇಂಡಿಯಾ' ಎಂಬ ಪದವನ್ನು ಬಳಸುತ್ತಿದ್ದು, ಜನರ ಭಾವನೆಗಳಿಗೆ ಧಕ್ಕೆ ತಂದಿರುವ ಕಾರಣ ಪಕ್ಷಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. 26 ರಾಜಕೀಯ ಪಕ್ಷಗಳು ದೇಶದ ಹೆಸರನ್ನು ದುರ್ಬಳಕೆ ಮಾಡಿಕೊಂಡಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಲಾಂಛನಗಳ ಕಾಯಿದೆಯ ಸೆಕ್ಷನ್ 2(ಸಿ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಲಾಂಛನಗಳ ಕಾಯಿದೆಯ ಸೆಕ್ಷನ್ 5, ಲಾಂಛನಗಳ ಕಾಯಿದೆಯ ಸೆಕ್ಷನ್ 3 ರ ನಿಬಂಧನೆಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ₹ 500 ದಂಡವನ್ನು ವಿಧಿಸಲು ಅವಕಾಶ ನೀಡುತ್ತದೆ ಎಂದು ಎಎನ್‌ಐ ವರದಿ ಉಲ್ಲೇಖಿಸಿದೆ.
ಮಹಾರಾಷ್ಟ್ರ ಬಿಜೆಪಿ ನಾಯಕ ಅಶುತೋಷ್ ದುಬೆ ಕೂಡ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, 'ಇಂಡಿಯಾ' ಹೆಸರನ್ನು ಪ್ರತಿಪಕ್ಷಗಳು ರಾಜಕೀಯ ಲಾಭಕ್ಕೆ ಬಳಸಿಕೊಂಡಿದ್ದು ಇದು ದೇಶದ ಘನತೆಗೆ ಅಗೌರವ ತಂದಿದೆ ಎಂದು ಹೇಳಿದ್ದಾರೆ. ಈ ವಿಷಯದಲ್ಲಿ ನಿಮ್ಮ ಮಧ್ಯಸ್ಥಿಕೆ ನಮ್ಮ ರಾಷ್ಟ್ರದ ಘನತೆಯನ್ನು ಕಾಪಾಡಿಕೊಳ್ಳಲು ಮತ್ತು ನಮ್ಮ ದೇಶ ನಿಂತಿರುವ ಪ್ರಜಾಪ್ರಭುತ್ವದ ತತ್ವಗಳನ್ನು ಕಾಪಾಡಲು ಸಹಾಯ ಮಾಡುತ್ತದೆ ಎಂದು ನಾನು ನಂಬುತ್ತೇನೆ ಎಂದು ಬಿಜೆಪಿ ನಾಯಕ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
A police complaint was registered against 26 Opposition parties at Barakhamba Police Station in Delhi for alleged improper use of the name of INDIA and use of the said name for the undue influence and personation at elections," news agency ANI reported.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 05:00 pm
HK News Staffer
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm