ಬ್ರೇಕಿಂಗ್ ನ್ಯೂಸ್
22-07-23 09:37 pm HK News Desk ದೇಶ - ವಿದೇಶ
ಇಂಫಾಲ್, ಜು.22: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣದಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಅಮಾನವೀಯ ಘಟನೆ ನಡೆದ ದಿನವೇ ಮತ್ತಿಬ್ಬರು ಯುವತಿಯರ ಹತ್ಯೆ ಮಾಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ತಮ್ಮ ಮಕ್ಕಳು ಪತ್ತೆಯಾಗದಿರುವ ಬಗ್ಗೆ ದೂರು ನೀಡಿರುವ ಪೋಷಕರು, ಅತ್ಯಾಚಾರ ಮತ್ತು ಕೊಲೆ ಆರೋಪ ಮಾಡಿದ್ದಾರೆ. ಇದು ಮಣಿಪುರದ ಪರಿಸ್ಥಿತಿಯನ್ನು ಮತ್ತಷ್ಟು ಉದ್ವಿಗ್ನಗೊಳಿಸಿದೆ.
ರಾಜ್ಯದ ಕಾಂಗ್ಪೋಕ್ಪಿ ಜಿಲ್ಲೆಯ ಇಬ್ಬರು ಬುಡಕಟ್ಟು ಯುವತಿಯರ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. ಯುವತಿಯರು 21 ಮತ್ತು 24 ವರ್ಷ ವಯಸ್ಸಿನವರಾಗಿದ್ದು, ಕಾರ್ ವಾಶ್ ಗ್ಯಾರೇಜ್ನಲ್ಲಿ ಕೆಲಸ ಮಾಡುತ್ತಿದ್ದರು. ಮೇ 4 ರಂದು ಹತ್ಯೆಗೀಡಾಗಿದ್ದಾರೆ ಎಂದು ಹೇಳಲಾಗಿದೆ.
ಅಂದು ಕಾರ್ ವಾಶ್ ಗ್ಯಾರೆಜ್ನಲ್ಲಿ ಯುವತಿಯರು ಕೆಲಸ ಮಾಡುತ್ತಿದ್ದ ವೇಳೆ ಪುರುಷರ ದೊಡ್ಡ ಗುಂಪೊಂದು ಅವರ ಮೇಲೆ ಹಲ್ಲೆ ನಡೆಸಿದೆ. ನಂತರ ಗ್ಯಾರೇಜ್ ಕೊಠಡಿಯೊಳಗೆ ಎಳೆದೊಯ್ದು ಬಾಯಿಗೆ ಬಟ್ಟೆ ತುರಕಿ, ಸುಮಾರು ಒಂದೂವರೆ ಗಂಟೆಗಳ ಕಾಲ ಅತ್ಯಾಚಾರ ಎಸಗಿದ್ದಾರೆ. ನಂತರ ಇಬ್ಬರನ್ನೂ ಹತ್ಯೆಗೈದು ಸಮೀಪದ ಕಾರ್ಖಾನೆಯೊಂದರ ಪಕ್ಕದಲ್ಲಿ ಶವಗಳನ್ನ ಎಸೆದುಹೋಗಿದ್ದಾರೆ ಎಂದು ವ್ಯಕ್ತಿಯೊಬ್ಬ ದೂರಿದ್ದಾರೆ.
ಆರಂಭದಲ್ಲಿ ಯುವತಿಯರ ಗುರುತು ಪತ್ತೆ ಮಾಡುವುದು ಕಷ್ಟವಾಗಿತ್ತು. ಕೊನೆಗೆ ಸಂತ್ರಸ್ತರ ತಾಯಿಯೊಬ್ಬರು ಮೇ 16ರಂದು ಸಾಯಿಕುಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ ಪ್ರಕರಣ ದಾಖಲಿಸಲಾಗಿತ್ತು. ಸದ್ಯ ಸಂತ್ರಸ್ತರ ಮೃತದೇಹಗಳು ಪತ್ತೆಯಾಗಿಲ್ಲ. ಆದ್ರೆ ಸುಮಾರು 100 ರಿಂದ 200 ಪುರುಷರ ಗುಂಪು ಯುವತಿಯರ ಮೇಲೆ ದಾಳಿ ನಡೆಸಿತ್ತು ಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆಗೆ ಬೆಳಕಿಗೆ ಬರುತ್ತಿದ್ದಂತೆ ಮಣಿಪುರದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ.
ಸುಮಾರು ಎರಡೂವರೆ ತಿಂಗಳಿನಿಂದ ಎರಡು ಪ್ರಮುಖ ಸಮುದಾಯಗಳ ನಡುವೆ ನಡೆಯುತ್ತಿರೋ ಸಂಘರ್ಷದ ಕಾರಣದಿಂದ ಮಣಿಪುರ ಎಂಬ ಪುಟ್ಟ ರಾಜ್ಯ ಹೊತ್ತಿ ಉರಿಯುತ್ತಿದೆ. ಈವರೆಗೂ ನೂರಾರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ.
Two days after three women were disrobed and paraded naked, one of whom was raped, in Manipur’s Thoubal district, a 45-year-old woman was stripped and set ablaze in Imphal East on May 6. A photo of the charred body of the woman has now surfaced on social media. The incidents are among a series of crimes committed against women since ethnic violence erupted in the State on May 3.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 11:07 pm
Mangalore Correspondent
Jail Attack, Suhas Shetty, Mangalore, Chotte...
19-05-25 10:14 pm
Konaje Suicide, Mangalore, Hair loss: ಕೂದಲು ಉ...
19-05-25 09:41 pm
Mangalore Job Scam, Police, Lawrence Dsouza,...
19-05-25 05:22 pm
Akanksha Suicide, Dharmasthala, Mangalore: ಏರ...
19-05-25 12:31 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm