Republic Tv ಮುಖ್ಯಸ್ಥ ಅರ್ನಬ್ ಬಂಧನ ; 14 ದಿನಗಳ ನ್ಯಾಯಾಂಗ ಕಸ್ಟಡಿ

05-11-20 10:17 am       Headline Karnataka News Network   ದೇಶ - ವಿದೇಶ

ಅರ್ನಬ್ ಗೋಸ್ವಾಮಿಗೆ ಅಲಿಗಢ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ಜಾಮೀನು ನೀಡಲು ನಿರಾಕರಿಸಿದ್ದು, 14 ದಿನಗಳ ಕಾಲ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿದರು.

ಮುಂಬೈ:  ರಿಪಬ್ಲಿಕ್ ಟಿವಿಯ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿಗೆ ಅಲಿಗಢ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ಜಾಮೀನು ನೀಡಲು ನಿರಾಕರಿಸಿದ್ದು, 14 ದಿನಗಳ ಕಾಲ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿದರು.

ಅರ್ನಬ್ ರನ್ನು 14 ದಿನಗಳ ಕಾಲ ಕಸ್ಟಡಿಗೆ ಒಪ್ಪಿಸುವಂತೆ ಪೊಲೀಸರು ನ್ಯಾಯಾಲಯವನ್ನು ಕೋರಿದರು. ಗೋಸ್ವಾಮಿ ಪ್ರಭಾವಿ ವ್ಯಕ್ತಿಯಾಗಿದ್ದು, ಪ್ರಕರಣದ ಪುರಾವೆಯನ್ನು ತಿರುಚಬಲ್ಲರು ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದರು.

ಬಂಧನದ ವೇಳೆ ಅರ್ನಬ್ ಗೋಸ್ವಾಮಿ ಅವರ ಮೇಲೆ ಹಲ್ಲೆ ಮಾಡಿ, ಬಲವಂತವಾಗಿ ಮನೆಯಿಂದ ಎಳೆದುಕೊಂಡು ಹೋಗಲಾಗಿದೆ ಎಂದು ರಿಪಬ್ಲಿಕ್ ಟಿವಿ ವರದಿ ಮಾಡಿದೆ. ಈ ವೇಳೆ ಅರ್ನಬ್ ಗೋಸ್ವಾಮಿ ಅವರ ಹೆಂಡತಿ, ಮಗ, ಅತ್ತೆ, ಮಾವನ ಮೇಲೂ ದೈಹಿಕವಾಗಿ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. 2018ರ ಮೇ ತಿಂಗಳಲ್ಲಿ 53 ವರ್ಷದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು.

A court in Alibaug rejected the police's demand for 14-day custody but also dismissed Arnab Goswami's charge that he had been physically assaulted while being arrested, an allegation he made several times in the day.