ಬ್ರೇಕಿಂಗ್ ನ್ಯೂಸ್
06-11-20 12:17 pm Headline Karnataka News Network ದೇಶ - ವಿದೇಶ
ಭೋಪಾಲ್, ನವೆಂಬರ್ 06: ದೇಶಾದ್ಯಂತ ಚೀನಾ ವಿರೋಧಿ ಅಭಿಯಾನ ಮುಂದುವರಿದಿದ್ದು, ದೀಪಾವಳಿ ಹತ್ತಿರ ಬರುತ್ತಿದ್ದಂತೆ ಚೀನಾ ನಿರ್ಮಿತ ಪಟಾಕಿಗಳ ನಿಷೇಧಕ್ಕೆ ಒತ್ತಾಯ ಕೇಳಿಬಂದಿದೆ. ಮಧ್ಯಪ್ರದೇಶ ಸರಕಾರ ಈ ವಿಚಾರದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿದ್ದು ಚೀನಾ ಪಟಾಕಿ ನಿಷೇಧದ ಜೊತೆ ಯಾರೇ ಆದ್ರೂ ಬಳಕೆ ಮಾಡಿದ್ದು ಕಂಡುಬಂದರೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ.
ಚೀನ ನಿರ್ಮಿತ ಪಟಾಕಿ ಮಾರಾಟ ಮತ್ತು ಖರೀದಿ ಮಾಡುವುದು ಸ್ಫೋಟಕಗಳ ಕಾನೂನು ಅಡಿಯಲ್ಲಿ ಅಪರಾಧ ಎಂದು ಪರಿಗಣಿಸಿದ್ದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಎಚ್ಚರಿಕೆ ನೀಡಿದ್ದಾರೆ. ಗೃಹ ಸಚಿವ ನರೋತ್ತಮ್ ಮಿಶ್ರಾ ಅಧ್ಯಕ್ಷತೆಯಲ್ಲಿ ನಡೆದ ಕಾನೂನು ಮತ್ತು ಸುವ್ಯವಸ್ಥೆಗಳ ಕುರಿತ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಕ್ರಮ ಸುಡುಮದ್ದುಗಳ ಸಂಗ್ರಹ, ಮಾರಾಟ, ವಿತರಣೆ ಮಾಡುವುದು ಶಿಕ್ಷಾರ್ಹ ಅಪರಾಧ. ಅದೇ ನೀತಿ ಚೀನಾ ನಿರ್ಮಿತ ಪಟಾಕಿಗಳಿಗೂ ಅನ್ವಯವಾಗುತ್ತದೆ ಎಂದು ಚೌಹಾಣ್ ತಿಳಿಸಿದ್ದಾರೆ.
ಗೃಹ ಇಲಾಖೆಯಿಂದ ಈ ಕುರಿತು ಮಧ್ಯಪ್ರದೇಶದ ಎಲ್ಲಾ ಜಿಲ್ಲಾಡಳಿತಗಳಿಗೂ ಸುತ್ತೋಲೆ ಕಳಿಸಲಾಗಿದೆ. ಅಲ್ಲದೆ, ಚೀನಾ ಸೇರಿದಂತೆ ಇತರ ಯಾವುದೇ ದೇಶಗಳಿಂದ ಪಟಾಕಿ ಆಮದು ಮಾಡಿ ಮಾರಾಟ ಮಾಡುವುದು ಶಿಕ್ಷಾರ್ಹವಾಗುತ್ತದೆ.ದೀಪಾವಳಿ ಸಂದರ್ಭದಲ್ಲಿ ಪಟಾಕಿ ಪ್ಯಾಕೆಟ್ ಮೇಲೆ ದೇವರ ಚಿತ್ರಗಳಿರುವುದನ್ನು ನಿಷೇಧಿಸಲಾಗಿದ್ದು ಇಂಥ ಅಕ್ರಮ ಕಂಡುಬಂದರೆ ರಡು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತಂದಿದೆ.
Chief Minister Shivraj Singh Chouhan on Wednesday warned that sale and use of Chinese-made crackers would lead to prosecution under Explosives Act, and two years in jail.
30-08-25 04:51 pm
Bangalore Correspondent
Kalaburagi ACP, Arrest: ರಿಯಲ್ ಎಸ್ಟೇಟ್ ಉದ್ಯಮಿಗ...
29-08-25 10:51 pm
ನಮ್ಮದು ನೆಲ ಜಲ, ಕಲ್ಲು ಮಣ್ಣನ್ನು ದೇವರಂತೆ ಕಾಣೋದು...
29-08-25 10:20 pm
ಚಿಂತಾಮಣಿಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ; 100...
29-08-25 05:59 pm
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
30-08-25 06:44 pm
HK News Desk
Siddaramaiah, 1991 Election: 1991ರ ಚುನಾವಣೆಯಲ್...
29-08-25 05:20 pm
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
30-08-25 11:08 pm
Mangalore Correspondent
2002ರ ಉಳ್ಳಾಲದ ಚಾರಿತ್ರಿಕ ನಾಗಮಂಡಲದ ರೂವಾರಿ, ಧಾರ್...
30-08-25 11:01 pm
Mangalore, Ganesh Chaturthi, Catholic: ಸಂಘನಿಕ...
30-08-25 10:10 pm
ಕೊಲ್ಲೂರು ; ನದಿಯಲ್ಲಿ ಕೊಚ್ಚಿ ಹೋಗಿದ್ದ ಬೆಂಗಳೂರಿನ...
30-08-25 09:16 pm
Talapady Accident, Mangalore, Ksrtc Bus: ತಲಪಾ...
30-08-25 04:23 pm
30-08-25 03:22 pm
Mangalore Correspondent
Santosh Shetty Murder, Karkala, Pune: ಹಣಕ್ಕಾಗ...
27-08-25 10:23 pm
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm