ಬ್ರೇಕಿಂಗ್ ನ್ಯೂಸ್
19-08-23 09:52 pm HK News Desk ದೇಶ - ವಿದೇಶ
ರಾಯ್ಪುರ, ಆಗಸ್ಟ್ 19: ಛತ್ತೀಸ್ಗಢದಲ್ಲಿ ನೆಲೆ ಕಂಡುಕೊಳ್ಳಲು ಪ್ರಯತ್ನಿಸುತ್ತಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್, ವಿಧಾನಸಭೆ ಚುನಾವಣೆಗೆ ತಯಾರಿ ನಡೆಸಿದ್ದಾರೆ. ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಅಧಿಕಾರ ಪಡೆಯುವುದಕ್ಕಾಗಿ ಉಚಿತ ವಿದ್ಯುತ್, ಮಹಿಳೆಯರಿಗೆ ಮಾಸಿಕ 'ಸಮ್ಮಾನ್ ರಾಶಿ' ಮತ್ತು ನಿರುದ್ಯೋಗಿಗಳಿಗೆ ಮಾಸಿಕ 3,000 ರೂಪಾಯಿ ಸೇರಿದಂತೆ 10 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ.
ಶನಿವಾರ ರಾಯ್ಪುರದಲ್ಲಿ ಪಕ್ಷದ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಿದ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್, ದೆಹಲಿ ಮತ್ತು ಪಂಜಾಬ್ನಲ್ಲಿ ತಮ್ಮ ಪಕ್ಷದ ಸರ್ಕಾರಗಳು ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಿವೆ. ಛತ್ತೀಸ್ಗಢದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ನೀಡಿದ ಭರವಸೆಗಳನ್ನು ಈಡೇರಿಸಲಾಗುವುದು ಎಂದರು. ನಾನು ನಿಮಗೆ 10 ಭರವಸೆಗಳನ್ನು ನೀಡುತ್ತಿದ್ದೇನೆ. ಇದು ನಕಲಿ ಪ್ರಣಾಳಿಕೆ ಅಥವಾ 'ಸಂಕಲ್ಪ ಪತ್ರ'ದಂತಲ್ಲ. ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಕೇಜ್ರಿವಾಲ್ ಹೇಳಿದರು.
ಅಧಿಕಾರಕ್ಕೆ ಬಂದರೆ, 24 ಗಂಟೆಗಳ ನಿರಂತರ ವಿದ್ಯುತ್ ಜೊತೆಗೆ ಪ್ರತಿ ಮನೆಗೆ 300 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಿದ್ದೇವೆ. ನವೆಂಬರ್ 2023ರ ವರೆಗೆ ಬಾಕಿ ಉಳಿದಿರುವ ವಿದ್ಯುತ್ ಬಿಲ್ ಮನ್ನಾ, 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಮಹಿಳೆಯರಿಗೆ ಮಾಸಿಕ 1,000 'ಸಮ್ಮಾನ್ ರಾಶಿ'(ಗೌರವಧನ) ಮತ್ತು ಶಾಲಾ ಮಕ್ಕಳಿಗೆ ಉಚಿತ ಗುಣಮಟ್ಟದ ಶಿಕ್ಷಣ ನೀಡುತ್ತೇವೆ ಎಂದು ಕೇಜ್ರಿವಾಲ್ ಭರವಸೆ ನೀಡಿದ್ದಾರೆ.
ದೆಹಲಿಯಲ್ಲಿರುವಂತೆ, AAP ಸರ್ಕಾರವು ಛತ್ತೀಸ್ಗಢದ ಪ್ರತಿಯೊಬ್ಬ ನಾಗರಿಕರಿಗೆ ಉಚಿತ ಮತ್ತು ಉತ್ತಮ ಚಿಕಿತ್ಸೆಯನ್ನು ಒದಗಿಸಲಿದೆ, ಪ್ರತಿ ಹಳ್ಳಿ ಮತ್ತು ನಗರಗಳಲ್ಲಿನ ವಾರ್ಡ್ಗಳಲ್ಲಿ ಮೊಹಲ್ಲಾ ಕ್ಲಿನಿಕ್ ಸೇರಿ ಉದ್ಯೋಗ ನೀಡುತ್ತೇವೆ ಮತ್ತು ನಿರುದ್ಯೋಗಿಗಳಿಗೆ ತಿಂಗಳಿಗೆ 3,000 ರೂ. ಭತ್ಯೆ, ಹಿರಿಯ ನಾಗರಿಕರಿಗೆ ಉಚಿತ ತೀರ್ಥಯಾತ್ರೆ, ಛತ್ತೀಸ್ಗಢವನ್ನು ಭ್ರಷ್ಟಾಚಾರ ಮುಕ್ತಗೊಳಿಸಿ, ಗುತ್ತಿಗೆ ನೌಕರರನ್ನು ಕಾಯಂಗೊಳಿಸುವುದಾಗಿ ಕೇಜ್ರಿವಾಲ್ ಹೇಳಿದ್ದಾರೆ.
Arvind Kejriwal on Saturday announced 300 units of free electricity with 24x7 power supply to cities and villages across Chhattisgarh if his party wins in the upcoming state Assembly elections set for this year."We will provide up to 300 units of free electricity every month in Chhattisgarh," AAP national convenor announced in a public event in Raipur.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 11:07 pm
Mangalore Correspondent
Jail Attack, Suhas Shetty, Mangalore, Chotte...
19-05-25 10:14 pm
Konaje Suicide, Mangalore, Hair loss: ಕೂದಲು ಉ...
19-05-25 09:41 pm
Mangalore Job Scam, Police, Lawrence Dsouza,...
19-05-25 05:22 pm
Akanksha Suicide, Dharmasthala, Mangalore: ಏರ...
19-05-25 12:31 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm