ಬ್ರೇಕಿಂಗ್ ನ್ಯೂಸ್
20-08-23 12:11 pm HK News Desk ದೇಶ - ವಿದೇಶ
ಶ್ರೀನಗರ, ಆಗಸ್ಟ್ 20: ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನಲ್ಲಿ ಸೇನಾ ವಾಹನವು ಆಳವಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಒಂಬತ್ತು ಜನ ಸೈನಿಕರು ಮೃತಪಟ್ಟಿದ್ದಾರೆ. ಲೇಹ್ ಜಿಲ್ಲೆಯ ಕಯಾರಿ ಪಟ್ಟಣದಿಂದ 7 ಕಿ.ಮೀ ದೂರದಲ್ಲಿ ಶನಿವಾರ ಈ ದುರ್ಘಟನೆ ನಡೆದಿದೆ.
ಶನಿವಾರ ಸಂಜೆ ಹತ್ತು ಜನ ಭದ್ರತಾ ಸಿಬ್ಬಂದಿ ಇದ್ದ ಸೇನಾ ವಾಹನವು ಲೇಹ್‌ನಿಂದ ನ್ಯೋಮಾಗೆ ತೆರಳಿತ್ತು. ಈ ವೇಳೆ ಸಂಜೆ 4.45ರ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ವಾಹನವು ಕಮರಿಗೆ ಉರುಳಿ ಬಿದ್ದಿದೆ. ಪರಿಣಾಮ ಇದರಲ್ಲಿ ಒಂಬತ್ತು ಜನ ಯೋಧರು ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೇ, ಮತ್ತೊಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಲೇಹ್‌ನ ಹಿರಿಯ ಪೊಲೀಸ್ ಅಧೀಕ್ಷಕಿ ಪಿಡಿ ನಿತ್ಯಾ ಮಾಹಿತಿ ನೀಡಿ, ''ಸೇನಾ ವಾಹನವು ಕಮರಿಗೆ ಬಿದ್ದ ಮಾಹಿತಿ ಅರಿತು ಪೊಲೀಸ್ ತಂಡ ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿತು. ಗಾಯಗೊಂಡ ಎಲ್ಲ ಸೈನಿಕರನ್ನು ಸಮೀಪದ ಸೇನಾ ಆಸ್ಪತ್ರೆಗೆ ರವಾನಿಸಲಾಯಿತು. ಅಷ್ಟರಲ್ಲೇ ಎಂಟು ಯೋಧಕರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು'' ಎಂದು ಹೇಳಿದ್ದಾರೆ
ಮುಂದುವರೆದು ಮಾತನಾಡಿದ ಅವರು, ''ಇದಾದ ನಂತರ ಮತ್ತೊಬ್ಬ ಯೋಧ ಕೂಡ ಕೊನೆಯುಸಿರೆಳೆದಿದ್ದಾರೆ. ಮತ್ತೋರ್ವ ಸೈನಿಕನಿಗೆ ಚಿಕಿತ್ಸೆ ಮುಂದುವರೆದಿದೆ. ಆತನ ಸ್ಥಿತಿ ಚಿಂತಾಜನಕವಾಗಿದೆ'' ಎಂದು ಮಾಹಿತಿ ನೀಡಿದ್ದಾರೆ. ಮತ್ತೊಂದೆಡೆ, ಈ ಘಟನೆ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿ, ಮೃತ ಯೋಧರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
ಲಡಾಖ್‌ನ ಲೇಹ್ ಬಳಿ ಅಪಘಾತದಲ್ಲಿ ಭಾರತೀಯ ಸೇನೆಯ ಸಿಬ್ಬಂದಿಯನ್ನು ಕಳೆದುಕೊಂಡಿರುವುದು ದುಃಖವಾಗಿದೆ. ನಮ್ಮ ರಾಷ್ಟ್ರಕ್ಕೆ ಅವರು ಸಲ್ಲಿಸಿದ ಆದರ್ಶ ಸೇವೆಯನ್ನು ನಾವು ಎಂದಿಗೂ ಮರೆಯುವುದಿಲ್ಲ. ದುಃಖತಪ್ತ ಕುಟುಂಬಸ್ಥರಿಗೆ ನನ್ನ ಸಂತಾಪಗಳು. ಗಾಯಗೊಂಡ ಸಿಬ್ಬಂದಿಯನ್ನು ಫೀಲ್ಡ್ ಆಸ್ಪತ್ರೆಗೆ ರವಾನಿಸಲಾಗಿದೆ. ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ'' ಎಂದು ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿ ತಿಳಿಸಿದ್ದಾರೆ.
ಮೋದಿ ಸಂತಾಪ ;
ಪ್ರಧಾನಮಂತ್ರಿ ಕಾರ್ಯಾಲಯವು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ, "ಲೇಹ್ ಬಳಿ ಸಂಭವಿಸಿದ ದುರ್ಘಟನೆಯಿಂದ ನಾವು ಭಾರತೀಯ ಸೇನೆಯ ಸಿಬ್ಬಂದಿಯನ್ನು ಕಳೆದುಕೊಂಡಿದ್ದೇವೆ. ದೇಶಕ್ಕೆ ಅವರು ನೀಡಿದ ಸೇವೆಯನ್ನು ಯಾವಾಗಲೂ ಸ್ಮರಿಸಲಾಗುವುದು. ರಾಷ್ಟ್ರಕ್ಕೆ ಯೋಧರ ಉತ್ಕೃಷ್ಟ ಸೇವೆ ಸದಾ ಸ್ಮರಣೀಯ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ" ಎಂದು ತಿಳಿಸಿದೆ.
ಖರ್ಗೆ ಸಂತಾಪ ;
ಲೇಹ್‌ನಲ್ಲಿ ಸೇನಾ ಟ್ರಕ್ ಅಪಘಾತದಲ್ಲಿ 9 ಯೋಧರು ಹುತಾತ್ಮರಾದ ಸುದ್ದಿ ತಿಳಿದು ತುಂಬಾ ದುಃಖ ಉಂಟಾಗಿದೆ. ನಮ್ಮ ವೀರ ಯೋಧರಿಗೆ ನಾವು ಸದಾ ಋಣಿಯಾಗಿದ್ದೇವೆ" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ದುರಂತಕ್ಕೆ ಸಂತಾಪ ಸೂಚಿಸಿದ್ದಾರೆ. "ಲಡಾಖ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ನಮ್ಮ ಅನೇಕ ಸೈನಿಕರು ಹುತಾತ್ಮರಾದ ಸುದ್ದಿ ತುಂಬಾ ದುಃಖಕರ. ಎಲ್ಲಾ ಹುತಾತ್ಮರಿಗೆ ವಿನಯಪೂರಕ ಶ್ರದ್ಧಾಂಜಲಿಗಳನ್ನು ಅರ್ಪಿಸುತ್ತೇನೆ. ಯೋಧರನ್ನು ಕಳೆದುಕೊಂಡು ದುಃಖದಲ್ಲಿರುವ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ" ಎಂದು ಎಕ್ಸ್ ಆ್ಯಪ್ನಲ್ಲಿ ಬರೆದಿದ್ದಾರೆ.
Nine soldiers were killed after their truck skidded off the road and plunged into a deep gorge in Leh district of Ladakh on Saturday, ANI quoted defence officials as saying. One more official was injured, they said.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 11:07 pm
Mangalore Correspondent
Jail Attack, Suhas Shetty, Mangalore, Chotte...
19-05-25 10:14 pm
Konaje Suicide, Mangalore, Hair loss: ಕೂದಲು ಉ...
19-05-25 09:41 pm
Mangalore Job Scam, Police, Lawrence Dsouza,...
19-05-25 05:22 pm
Akanksha Suicide, Dharmasthala, Mangalore: ಏರ...
19-05-25 12:31 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm