ಮಿಜೋರಾಂ ; ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿದು 17 ಮಂದಿ ಕಾರ್ಮಿಕರ ಸಾವು, ಪ್ರಧಾನಿ ಸಂತಾಪ, ತಲಾ 2 ಲಕ್ಷ ರೂ. ಪರಿಹಾರ 

23-08-23 02:06 pm       HK News Desk   ದೇಶ - ವಿದೇಶ

ಮಿಜೋರಾಂನ ಸೈರಾಂಗ್ ಪ್ರದೇಶದ ಬಳಿ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿದು ಕನಿಷ್ಠ 17 ಕಾರ್ಮಿಕರು ಬುಧವಾರ ಸಾವನ್ನಪ್ಪಿರುವ ಭೀಕರ ಘಟನೆ ನಡೆದಿದೆ.

ಮಿಜೋರಾಂ, ಆಗಸ್ಟ್ 23: ಮಿಜೋರಾಂನ ಸೈರಾಂಗ್ ಪ್ರದೇಶದ ಬಳಿ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿದು ಕನಿಷ್ಠ 17 ಕಾರ್ಮಿಕರು ಬುಧವಾರ ಸಾವನ್ನಪ್ಪಿರುವ ಭೀಕರ ಘಟನೆ ನಡೆದಿದೆ. ರಾಜಧಾನಿ ಐಜ್ವಾಲ್‌ನಿಂದ ಸುಮಾರು 21 ಕಿಮೀ ದೂರದಲ್ಲಿರುವ ಸೈರಾಂಗ್​ನಲ್ಲಿ ಬೆಳಗ್ಗೆ 10 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ.

ಘಟನೆಯ ವೇಳೆ 35-40 ಕಾರ್ಮಿಕರು ಸ್ಥಳದಲ್ಲಿ ಕಾರ್ಯನಿರತರಾಗಿದ್ದರು. ಏಕಾಏಕಿ ನಿರ್ಮಾಣ ಹಂತದ ಸೇತುವೆ ಕುಸಿದು ಬಿದ್ದಿದೆ. ಅದರಡಿ ಕಾರ್ಮಿಕರು ಸಿಲುಕಿದ್ದು, ಸದ್ಯಕ್ಎ 17 ಮಂದಿ ಸಾವನ್ನಪ್ಪಿದ ಬಗ್ಗೆ ಮಾಹಿತಿ ಸಿಕ್ಕಿದೆ. ಅವಶೇಷಗಳಡಿ ಇನ್ನಷ್ಟು ಜನರು ಸಿಲುಕಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

Mizoram: 17 killed after under-construction railway bridge collapses

Mizoram railway bridge collapse claims 17 lives

 

ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಈಶಾನ್ಯ ಫ್ರಾಂಟಿಯರ್ ರೈಲ್ವೆ ಹಿರಿಯ ಅಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಎನ್‌ಎಫ್ ರೈಲ್ವೇಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಕುರುಂಗ್ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾಗುತ್ತಿದ್ದ ಸೇತುವೆಯು ಬೈರಾಬಿಯಿಂದ ಸೈರಾಂಗ್​ಗೆ ಸಂಪರ್ಕ ಕಲ್ಪಿಸುತ್ತದೆ. ನಿತ್ಯದಂತೆ ಇಂದು ಕೆಲಸ ನಡೆಯುತ್ತಿದ್ದಾಗ ಸೇತುವೆ ಅತಿಯಾದ ಭಾರದಿಂದ ಕುಸಿದಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Who is Zoramthanga, the newly elected CM of Mizoram - The Hindu

ಸಿಎಂ ತೀವ್ರ ಸಂತಾಪ;

ದುರಂತದ ಬಗ್ಗೆ ಮಾಹಿತಿ ಪಡೆದ ಮಿಜೋರಾಂ ಮುಖ್ಯಮಂತ್ರಿ ಝೋರಮ್​ತಂಗಾ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಐಜ್ವಾಲ್ ಬಳಿಯ ಸೈರಾಂಗ್​ನಲ್ಲಿ ನಿರ್ಮಾಣ ಹಂತದ ರೈಲ್ವೆ ಮೇಲ್ಸೇತುವೆ ಕುಸಿದಿದ್ದು, 17 ಕಾರ್ಮಿಕರು ಸಾವನ್ನಪ್ಪಿದ್ದು, ತೀವ್ರ ದುಃಖ ತಂದಿದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಈ ದುರಂತದಿಂದ ನಾನು ತೀವ್ರವಾಗಿ ದುಃಖಿತನಾಗಿದ್ದೇನೆ. ಕಾರ್ಮಿಕರನ್ನು ಕಳೆದುಕೊಂಡ ಎಲ್ಲಾ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ಬಂದ ಸ್ಥಳೀಯರಿಗೂ ಕೃತಜ್ಞತೆಗಳು ಎಂದು ಎಕ್ಸ್​ನಲ್ಲಿ (ಹಿಂದಿನ ಟ್ವಿಟರ್​) ಹಂಚಿಕೊಂಡಿದ್ದಾರೆ.

PM Modi has a new name for opposition INDIA bloc. It is. . . | Mint

ಪರಿಹಾರ ಘೋಷಿಸಿದ ಪ್ರಧಾನಿ ;

ಈ ನಡುವೆ ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ದುರಂತದಲ್ಲಿ ಮೃತಪಟ್ಟ ಕುಟುಂಬದವರಿಗೆ ತಲಾ 2 ಲಕ್ಷ ರೂ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಘಟನೆಯ ದುರದೃಷ್ಟಕರ. ಮಡಿದವರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಚೇತರಿಸಿಕೊಳ್ಳಲಿ ಎಂದು ಅವರು ಎಕ್ಸ್​ನಲ್ಲಿ ಕೋರಿದ್ದಾರೆ.

There were 40 construction workers on the bridge at the time of the incident. “Seventeen bodies have been recovered from the debris so far...many others are still missing,” a police officer said, according to PTI. The Sairang branch of Young Mizo Association is currently carrying out rescue operations.