ಬ್ರೇಕಿಂಗ್ ನ್ಯೂಸ್
29-08-23 09:41 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 29: ನಾಲ್ಕು ರಾಜ್ಯಗಳ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕೇಂದ್ರ ಸರ್ಕಾರ ಗೃಹೋಪಯೋಗಿ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು 200 ರೂ.ನಷ್ಟು ಇಳಿಸಲು ನಿರ್ಧರಿಸಿದೆ. ಮಂಗಳವಾರ ಕೇಂದ್ರ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಆಗಿದ್ದು ಬುಧವಾರದಿಂದಲೇ ಹೊಸ ದರ ಅನ್ವಯವಾಗಲಿದೆ.
ಸದ್ಯ 14 ಕಿಲೋ ಎಲ್ಪಿಜಿ ಸಿಲಿಂಡರ್ ಬೆಲೆ 1,100 ರೂ. ಅಸುಪಾಸಿನಲ್ಲಿ ಇದೆ. 200 ರೂ. ಸಬ್ಸಿಡಿ ಘೋಷಿಸಿದ್ದು ಹೊಸ ಬೆಲೆಯ ಪ್ರಕಾರ, ಸಿಲಿಂಡರ್ ಬೆಲೆ 900 ರೂ.ಗೆ ಇಳಿಯಲಿದೆ. ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಸಿಲಿಂಡರ್ ದರ ಮತ್ತಷ್ಟು ಇಳಿಯಲಿದೆ. ಉಜ್ವಲ ಯೋಜನೆಯಡಿ ಈಗಾಗಲೇ 200 ರೂ. ಸಬ್ಸಿಡಿ ಇರುವುದರಿಂದ ಅವರಿಗೆ ಈಗ 400 ರೂ. ಒಟ್ಟು ಬೆಲೆಯಲ್ಲಿ ಇಳಿಕೆಯಾಗಲಿದ್ದು 700 ರೂ. ಅಂದಾಜಿಗೆ ಸಿಲಿಂಡರ್ ಸಿಗಲಿದೆ.
ಸಬ್ಸಿಡಿ ರಹಿತ 14 ಕಿಲೋ ಎಲ್ಪಿಜಿ ಸಿಲಿಂಡರ್ ದರ ಬೆಂಗಳೂರಿನಲ್ಲಿ 1,105.50 ರೂ ಇದೆ. ಕೋಲ್ಕತಾದಲ್ಲಿ 1,118.50 ರೂ ಇದೆ. ಚೆನ್ನೈನಲ್ಲಿ 1,102.50 ರೂ ಇದೆ. ದೆಹಲಿಯಲ್ಲಿ 1103 ರೂ. ಇದೆ. ಸಂಪುಟ ಸಭೆಯ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಅನುರಾಗ್ ಠಾಕೂರ್, ಇದು ಕೇಂದ್ರ ಸರ್ಕಾರ ನೀಡುತ್ತಿರುವ ಓಣಂ ಗಿಫ್ಟ್ ಎಂದು ಹೇಳಿ ಸಿಲಿಂಡರ್ ಬೆಲೆ ಇಳಿಕೆಯ ಮಾಹಿತಿ ನೀಡಿದ್ದಾರೆ. ಇದೇ ವೇಳೆ, ಪಿಎಂ ಉಜ್ವಲ ಯೋಜನೆಯಡಿ 75 ಲಕ್ಷ ಕುಟುಂಬಗಳಿಗೆ ಹೊಸತಾಗಿ ಗ್ಯಾಸ್ ಕನೆಕ್ಷನ್ ನೀಡಲಾಗುವುದು ಎಂದಿದ್ದಾರೆ.
ಮೇ ತಿಂಗಳ ನಂತರ ಐಒಸಿ, ಭಾರತ್ ಪೆಟ್ರೋಲಿಯಂ ಮೊದಲಾದ ತೈಲ ಮಾರುಕಟ್ಟೆ ಕಂಪನಿಗಳು ಮೂರು ಬಾರಿ ಎಲ್ಪಿಜಿ ದರಗಳನ್ನು ಏರಿಸಿವೆ. ಜುಲೈ ತಿಂಗಳಲ್ಲಿ 50 ರೂ. ಹೆಚ್ಚಳವಾಗಿತ್ತು. 2021ರ ಫೆಬ್ರವರಿಯಲ್ಲಿ ಸಿಲಿಂಡರ್ ದರ 694 ರೂ. ಇತ್ತು. ಆನಂತರ, ಎರಡು ವರ್ಷಗಳಲ್ಲಿ 13 ಬಾರಿ ದರ ಏರಿಸಿದ್ದು ಈವರೆಗಿನ ಗರಿಷ್ಠ ದರವಾಗಿ 1100 ರೂ. ಗಡಿ ದಾಟಿತ್ತು. ಈ ವರ್ಷಾಂತ್ಯದಲ್ಲಿ ನಾಲ್ಕು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
The government on Tuesday announced a Rs 200 per cylinder cut in prices of domestic cooking gas as it looked to counter the promise of cheaper LPG made by the Congress party in upcoming assembly elections in states like Madhya Pradesh. At present, a 14.2-kg LPG cylinder in the national capital costs Rs 1,103 - more than double the rate it came for in May 2020.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm