ಬ್ರೇಕಿಂಗ್ ನ್ಯೂಸ್
04-09-23 01:58 pm HK News Desk ದೇಶ - ವಿದೇಶ
ಚೆನ್ನೈ, ಸೆ.4: ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎಂಬ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ತಮಿಳುನಾಡು ಸಚಿವ ಉದಯನಿದಿ ಸ್ಟಾಲಿನ್, ನಾನು ನನ್ನ ಹೇಳಿಕೆ ಬದ್ಧನಾಗಿದ್ದು, ನನ್ನ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿದರೂ ಅದನ್ನು ಎದುರಿಸಲು ನಾನು ಸಿದ್ಧ ಎಂದು ಸವಾಲು ಹಾಕಿದ್ದಾರೆ.
ಸನಾತನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನ ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು ಎಂದು ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಬಿಜೆಪಿ ನಾಯಕರಿಗೆ ಮತ್ತೊಂದು ಸವಾಲ್ ಹಾಕಿದ್ದಾರೆ.

ಉದಯನಿಧಿ ಸ್ಟಾಲಿನ್ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡ್ತಿದ್ದಂತೆ ಬಿಜೆಪಿ ನಾಯಕರು ತಿರುಗಿಬಿದ್ದಿದ್ದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಉದಯನಿಧಿ ಹೇಳಿಕೆಯನ್ನ ತೀವ್ರವಾಗಿ ಖಂಡಿಸಿದ್ದರು. ಈ ಬೆನ್ನಲ್ಲೇ ಉದಯನಿಧಿ ನನ್ನ ವಿರುದ್ಧ ಬಿಜೆಪಿ ಯಾವುದೇ ಕೇಸ್ ಹಾಕಿದ್ರೂ ಫೇಸ್ ಮಾಡೋಕೆ ನಾನ್ ರೆಡಿ ಎಂದು ಸವಾಲೆಸೆದಿದ್ದಾರೆ.
ನಾನು ಸನಾತನ ಧರ್ಮವನ್ನ ಮಾತ್ರ ಟೀಕಿಸಿದ್ದೇನೆ. ಸನಾತನ ಧರ್ಮವನ್ನ ನಿರ್ಮೂಲನೆ ಮಾಡಬೇಕು ಎಂದು ಮತ್ತೆ ಹೇಳುತ್ತಿದ್ದೇನೆ. ಇದನ್ನು ನಿರಂತರವಾಗಿ ಹೇಳುತ್ತೇನೆ. ಆದರೆ ನಾನು ನರಮೇಧಕ್ಕೆ ಆಹ್ವಾನ ನೀಡಿದ್ದೇನೆ ಎಂದು ಕೆಲವರು ಬಾಲಿಶವಾಗಿ ಮಾತನಾಡುತ್ತಿದ್ದಾರೆ. ಇನ್ನೂ ಕೆಲವರು ದ್ರಾವಿಡಂ (ದ್ರಾವಿಡರು) ನಿರ್ಮೂಲನೆಯಾಗಬೇಕು ಎಂದು ಹೇಳುತ್ತಿದ್ದಾರೆ. ಹಾಗಾದರೆ ಡಿಎಂಕೆ ಪಕ್ಷದವರನ್ನ ಕೊಲ್ಲಬೇಕೇ? ಈ ಹಿಂದೆ ಪ್ರಧಾನಿ ಮೋದಿ ಅವರು ಕಾಂಗ್ರೆಸ್ ಮುಕ್ತ ಭಾರತ ಮಾಡಬೇಕು ಅಂತಾ ಕರೆ ಕೊಟ್ಟಿದ್ದರು. ಹಾಗೆಂದ ಮಾತ್ರಕ್ಕೆ ಕಾಂಗ್ರೆಸ್ಸಿಗರನ್ನು ಕೊಲ್ಲಬೇಕು ಎಂದು ಅರ್ಥವೇ ಎಂದು ಪ್ರಶ್ನಿಸಿದ್ದಾರೆ.
ನನ್ನ ಹೇಳಿಕೆ ಬಿಜೆಪಿ ತಿರುಚಿದೆ ;
ಬಿಜೆಪಿ ನನ್ನ ಹೇಳಿಕೆಯನ್ನ ತಿರುಚಿ ಸುಳ್ಳು ಸುದ್ದಿ ಹಬ್ಬಿಸುತ್ತಿದೆ. ಬಿಜೆಪಿಗೆ INDIA ಒಕ್ಕೂಟವನ್ನ ಕಂಡರೆ ಭಯ. ಐಎನ್‌ಡಿಐಎ ಮೈತ್ರಿಗೆ ಹೆದರಿ ಹೀಗೆಲ್ಲಾ ಹೇಳುತ್ತಿದೆ. ನಾನು ನರಮೇಧಕ್ಕೆ ಕರೆ ಕೊಟ್ಟಿಲ್ಲ. ಬಿಜೆಪಿಯವರು ನನ್ನ ವಿರುದ್ಧ ಯಾವುದೇ ಕೇಸ್ ಹಾಕಿದ್ರೂ ಫೇಸ್ ಮಾಡೋಕೆ ಸಿದ್ಧ ಎಂದು ಹೇಳಿದ್ದಾರೆ.
Facing criticism from the Bharatiya Janata Party (BJP) over his remarks against Sanatan Dharma, Tamil Nadu Chief Minister M K Stalin’s son and minister Udhayanidhi Sunday said he was ready to face “whatever cases they file” against him.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm