ಬ್ರೇಕಿಂಗ್ ನ್ಯೂಸ್
05-09-23 05:45 pm HK News Desk ದೇಶ - ವಿದೇಶ
ನವದೆಹಲಿ, ಸೆ.05: ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಹೆಸರನ್ನು ಇಂಡಿಯಾ ಬದಲು 'ರಿಪಬ್ಲಿಕ್ ಆಫ್ ಭಾರತʼ ಎಂದು ಮರು ನಾಮಕರಣ ಮಾಡಲು ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಹೊಸ ವಿಧೇಯಕ ಜಾರಿಗೆ ತರಲು ಮುಂದಾಗಿದೆ. ಈ ರೀತಿಯ ಪ್ರಸ್ತಾಪ ಚರ್ಚೆಯ ಮುನ್ನೆಲೆಗೆ ಬರುತ್ತಲೇ ಪ್ರತಿಪಕ್ಷಗಳು ಟೀಕಾಸ್ತ್ರ ಪ್ರಯೋಗಿಸಿದೆ.
ಪ್ರತಿಪಕ್ಷಗಳ ಒಕ್ಕೂಟ ʼINDIA’ ಗೆ ಠಕ್ಕರ್ ಎನ್ನುವಂತೆ ಮೋದಿ ಸರ್ಕಾರ ಇಂಡಿಯಾ ಅಲ್ಲ, ನಮ್ಮ ದೇಶ ಭಾರತ ಎಂದು ಪ್ರತ್ಯಸ್ತ್ರ ಮೊಳಗಿಸುತ್ತಿದೆ. ಇತ್ತೀಚೆಗೆ ರಾಷ್ಟ್ರಪತಿ ಭವನದಿಂದ ಸೆಪ್ಟೆಂಬರ್ 9ರಂದು ನಡೆಯುವ ಜಿ20 ದೇಶಗಳ ನಾಯಕರ ಔತಣಕೂಟಕ್ಕೆ ಪ್ರತಿಪಕ್ಷಗಳಿಗೆ ಆಹ್ವಾನ ಹೋಗಿದ್ದು, ಅದರಲ್ಲಿ ʼPresident of India’ ಬದಲಿಗೆ ʼPresident of Bharatʼ ಎಂದು ಉಲ್ಲೇಖಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಕೇಂದ್ರದ ವಿರುದ್ಧ ಟೀಕೆ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಮೋದಿ ಸರ್ಕಾರ ಇಂಡಿಯಾವನ್ನು ಭಾರತ ಮಾಡಲು ಮುಂದಾಗಿದೆ ಎನ್ನುವ ಚರ್ಚೆ ಮುನ್ನೆಲೆಗೆ ಬಂದಿದೆ.
ಚರ್ಚೆಗೀಡಾಗಿರುವ ಸುದ್ದಿ ನಿಜವಾಗಿದೆ. ರಾಷ್ಟ್ರಪತಿ ಭವನವು ಸೆಪ್ಟೆಂಬರ್ 9ರಂದು ಸಾಮಾನ್ಯವಾಗಿರುತ್ತಿದ್ದ ʼPresident of India’ ಬದಲಿಗೆ ʼPresident of Bharatʼ ಎಂದು ಜಿ20 ಔತಣಕೂಟಕ್ಕೆ ಆಹ್ವಾನವನ್ನು ಕಳುಹಿಸಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಬಿಜೆಪಿ ನಾಯಕ ಹಿಮಂತ ಬಿಸ್ವಾಸ್ ಶರ್ಮಾ ಕೂಡ ಈ ಕುರಿತು ಟ್ವೀಟ್ ಮಾಡಿದ್ದಾರೆ. ʼʼRepublic of Bharath- ನಮ್ಮ ನಾಗರಿಕತೆ ಅಮೃತ ಕಾಲದ ಕಡೆಗೆ ಧೈರ್ಯದಿಂದ ಮುನ್ನಡೆಯುತ್ತಿರುವುದಕ್ಕೆ ಸಂತೋಷ ಮತ್ತು ಹೆಮ್ಮೆಯಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ʼಇಂಡಿಯಾʼವನ್ನು ಬದಲಿಸಿ ʼಭಾರತʼ ಎಂದು ಮಾಡಬೇಕು ಎಂಬುದು ಬಿಜೆಪಿಯ ಬಹುಕಾಲದ ಬೇಡಿಕೆ. ಈ ಹಿಂದೆ ಹಿಮಂತ ಬಿಸ್ವ ಶರ್ಮಾ, ಆರೆಸ್ಸೆಸ್ ಮುಖಂಡ ಮೋಹನ ಭಾಗವತ್ ಕೂಡ ಇದೇ ರೀತಿಯ ಪ್ರಸ್ತಾಪವನ್ನು ಮುಂದಿಟ್ಟಿದ್ದರು. ಸೆ.18ರಿಂದ 22ರ ವರೆಗೆ ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿದ್ದು ಅದರಲ್ಲಿ ಕೆಲವು ಮಸೂದೆಗಳನ್ನು ಜಾರಿಗೊಳಿಸುವ ಇರಾದೆಯನ್ನು ಕೇಂದ್ರ ಸರ್ಕಾರ ಹೊಂದಿದೆ.
The Narendra Modi-led Central government, which has been emphasising liberating the people of the country from the “slavery mentality” and any elements related to such a psyche during the ongoing “Amrit Kaal”, is reportedly planning to remove the word “India” from the Constitution, sources in the know of things claimed, adding that a preparation pertaining to the proposal is underway.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 11:07 pm
Mangalore Correspondent
Jail Attack, Suhas Shetty, Mangalore, Chotte...
19-05-25 10:14 pm
Konaje Suicide, Mangalore, Hair loss: ಕೂದಲು ಉ...
19-05-25 09:41 pm
Mangalore Job Scam, Police, Lawrence Dsouza,...
19-05-25 05:22 pm
Akanksha Suicide, Dharmasthala, Mangalore: ಏರ...
19-05-25 12:31 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm