ಬ್ರೇಕಿಂಗ್ ನ್ಯೂಸ್
06-09-23 01:07 pm HK News Desk ದೇಶ - ವಿದೇಶ
ಉತ್ತರ ಪ್ರದೇಶ, ಸೆ.6: ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ ಆರೋಪದ ಮೇಲೆ ಡಿಎಂಕೆ ನಾಯಕ, ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರ ಪ್ರದೇಶದ ರಾಮಪುರ್ನಲ್ಲಿ ಎಫ್ಐಆರ್ ದಾಖಲಾಗಿದೆ.
ಸನಾತನ ಧರ್ಮ ನಿರ್ಮೂಲನೆ ಕುರಿತು ನೀಡಿದ ಹೇಳಿಕೆಗಾಗಿ ಉದಯನಿಧಿ ಸ್ಟಾಲಿನ್ ವಿರುದ್ಧ ಎಫ್ಐಆರ್ ದಾಖಲಾಗಿದ್ದರೆ, ಉದಯನಿಧಿ ಹೇಳಿಕೆ ಬೆಂಬಲಿಸಿದ್ದಕ್ಕೆ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಸ್ ದಾಖಲಾಗಿದೆ.
ಇಬ್ಬರ ವಿರುದ್ಧವೂ ಐಪಿಸಿ ಸೆಕ್ಷನ್ 295ಎ ಹಾಗೂ 153ಎ ಅನ್ವಯ ರಾಮಪುರ್ನ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಕೀಲರಾದ ಹರ್ಷ್ ಗುಪ್ತಾ ಮತ್ತು ರಾಮ್ ಸಿಂಗ್ ಲೋಧಿ ಅವರು ಈ ದೂರು ದಾಖಲಿಸಿದ್ದರು ಹಾಗೂ ಈ ರಾಜಕಾರಣಿಗಳ ಹೇಳಿಕೆ ತಮ್ಮ ಭಾವನೆಗಳಿಗೆ ಘಾಸಿಯುಂಟು ಮಾಡಿದೆ ಎಂದು ಆರೋಪಿಸಿದ್ದರು.
ಪ್ರಿಯಾಂಕ್ ಖರ್ಗೆ ಹೇಳಿದ್ದೇನು ?
ಬೆಂಗಳೂರಿನಲ್ಲಿ ನಡೆದ ಟೆಕ್ ಸಮ್ಮಿಟ್ 2023 ಹಿನ್ನೆಲೆಯಲ್ಲಿ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಪ್ರಿಯಾಂಕ್ ಖರ್ಗೆ, ಉದಯನಿಧಿ ಸ್ಟಾಲಿನ್ ಯಾವ ಸಂದರ್ಭದಲ್ಲಿ ಆ ಹೇಳಿಕೆ ಕೊಟ್ಟಿದ್ದಾರೋ ಗೊತ್ತಿಲ್ಲ. ಯಾವ ಧರ್ಮದಲ್ಲಿ ಸಾಮಾಜಿಕ ಸಮಾನತೆ, ಆರ್ಥಿಕ ಸಮಾನತೆ ಇಲ್ಲವೋ, ಯಾವ ಧರ್ಮದಲ್ಲಿ ಮನುಷ್ಯರ ನಡುವೆ ಭೇದ-ಭಾವ ಇರುತ್ತದೆಯೋ ಅದು ಧರ್ಮವೇ ಅಲ್ಲ ಎಂದಿದ್ದರು.
ನಾವೆಲ್ಲರೂ ಸಂವಿಧಾನದ ಅಡಿಯಲ್ಲಿ ಇದ್ದೇವೆ. ಸಂವಿಧಾನವೇ ನಮ್ಮ ಧರ್ಮ, ಬುದ್ಧ, ಬಸವ ಹಾಕಿಕೊಟ್ಟಿರುವುದನ್ನ ಅನುಸರಿಸುತ್ತೇವೆ. ನನ್ನ ವೈಯಕ್ತಿಕ ಅಭಿಪ್ರಾಯ ಹೇಳುವುದಾದರೆ ಸಂವಿಧಾನವೇ ನಮ್ಮ ಧರ್ಮ ಆಗಬೇಕು ಎಂದು ಹೇಳಿದ್ದರು.
A First Information Report (FIR) was registered against Tamil Nadu Minister and DMK leader, Udhayanidhi Stalin, and Congress Minister in Karnataka, Priyank Kharge, in Uttar Pradesh's Rampur for allegedly "hurting religious sentiments" in connection with their remarks on 'Sanatana Dharma', Rampur Police
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 11:07 pm
Mangalore Correspondent
Jail Attack, Suhas Shetty, Mangalore, Chotte...
19-05-25 10:14 pm
Konaje Suicide, Mangalore, Hair loss: ಕೂದಲು ಉ...
19-05-25 09:41 pm
Mangalore Job Scam, Police, Lawrence Dsouza,...
19-05-25 05:22 pm
Akanksha Suicide, Dharmasthala, Mangalore: ಏರ...
19-05-25 12:31 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm