ಬ್ರೇಕಿಂಗ್ ನ್ಯೂಸ್
06-09-23 05:56 pm HK News Desk ದೇಶ - ವಿದೇಶ
ನವದೆಹಲಿ, ಸೆ.6: ಮೊನ್ನೆಯಷ್ಟೇ ಗ್ಯಾಸ್ ಸಿಲಿಂಡರ್ ದರವನ್ನು ಇಳಿಸಿದ್ದ ಕೇಂದ್ರ ಸರಕಾರ ದೀಪಾವಳಿ ಹೊತ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನೂ 3ರಿಂದ 5 ರೂ. ವರೆಗೆ ಇಳಿಸಲು ಮುಂದಾಗಿದೆ.
ನವೆಂಬರ್- ಡಿಸೆಂಬರ್ ವೇಳೆಗೆ ನಾಲ್ಕು ರಾಜ್ಯಗಳ ಚುನಾವಣೆ ಇರುವ ಹಿನ್ನೆಲೆಯಲ್ಲಿ ಪೆಟ್ರೋಲ್ ಹೊರೆಯನ್ನು ಇಳಿಸಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ ಎನ್ನುವ ಮಾಹಿತಿಯನ್ನು ಜೆಎಂ ಫೈನಾನ್ಶಿಯಲ್ ಇನ್ಸ್ ಟಿಟ್ಯೂಶನಲ್ ಸೆಕ್ಯುರಿಟೀಸ್ ಸಂಸ್ಥೆ ತನ್ನ ವರದಿಯಲ್ಲಿ ಹೇಳಿದೆ.
ಆಗಸ್ಟ್ 30ರಿಂದಲೇ ಜಾರಿಗೆ ಬರುವಂತೆ ಗ್ಯಾಸ್ ಸಿಲಿಂಡರ್ ದರಗಳನ್ನು ಇಳಿಸಲಾಗಿತ್ತು. 14 ಕೇಜಿ ಭಾರದ ಅಡುಗೆ ಅನಿಲದ ಸಿಲಿಂಡರ್ ದರ 200 ರೂ.ನಷ್ಟು ಇಳಿಕೆ ಮಾಡಲಾಗಿತ್ತು. ಆಮೂಲಕ ಜನಸಾಮಾನ್ಯರ ಹೊರೆಯನ್ನು ಇಳಿಸುವ ಕೆಲಸಕ್ಕೆ ಸರಕಾರ ಮುಂದಾಗಿತ್ತು. ಇದೀಗ ಬಡ ಮತ್ತು ಮಧ್ಯಮ ವರ್ಗಕ್ಕೆ ತೀವ್ರ ಭಾರ ಎನಿಸಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸ್ವಲ್ಪ ತಗ್ಗಿಸಲು ಸರಕಾರ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.
ಸದ್ಯಕ್ಕೆ 101 ರೂಪಾಯಿ ಆಸುಪಾಸಿನಲ್ಲಿ ಪೆಟ್ರೋಲ್ ದರ ಇದ್ದರೆ, ಡೀಸೆಲ್ ದರವು 84 ರೂ. ಆಸುಪಾಸಿನಲ್ಲಿದೆ. ದೇಶದ ವಿವಿಧೆಡೆಗಳಲ್ಲಿ ಆಯಾ ರಾಜ್ಯಗಳ ತೆರಿಗೆ ಅನುಸರಿಸಿ ತೈಲ ಬೆಲೆಗಳು ಏರಿಳಿತ ಇವೆ.
Following the recent cut in domestic LPG prices, the Central government may cut petrol, diesel price by Rs 3-5 a litre around Diwali given that key state elections start from November-December, JM Financial Institutional Securities said in a report. Last week, the government cut the price of the domestic 14.2kg LPG cylinder by Rs 200/LPG cylinder for all 330 million consumers w.e.f. August 30.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm