ಬ್ರೇಕಿಂಗ್ ನ್ಯೂಸ್
07-09-23 07:14 pm HK News Desk ದೇಶ - ವಿದೇಶ
ಚೆನ್ನೈ, ಸೆ 07: ಸನಾತನ ಧರ್ಮದ ಕುರಿತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆ ಕುರಿತು ನಡೆಯುತ್ತಿರುವ ವಿವಾದಗಳ ನಡುವೆ, ಇದೀಗ ಡಿಎಂಕೆ ಸಂಸದ ಎ ರಾಜಾ ಸನಾತನ ಧರ್ಮವನ್ನು ಎಚ್ಐವಿ ಮತ್ತು ಕುಷ್ಠರೋಗದಂತಹ ಸಾಮಾಜಿಕ ರೋಗಗಳಿಗೆ ಹೋಲಿಸಿ ನೀಡಿರುವ ಹೇಳಿಕೆ ಭಾರೀ ವಿರೋಧಕ್ಕೆ ಗುರಿಯಾಗಿದೆ.
ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ಎ.ರಾಜಾ, ಸನಾತನ ಧರ್ಮವನ್ನು ಮಲೇರಿಯಾ, ಡೆಂಗ್ಯೂ ಅಂತ ಹೇಳಿ ನಿರ್ಮೂಲನೆ ಮಾಡಬೇಕು ಎಂದು ಉದಯನಿಧಿ ಸ್ಟಾಲಿನ್ ಮೃದುವಾಗಿ ಹೇಳಿದ್ದರು. ಆದರೆ ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಸನಾತನ ಧರ್ಮವನ್ನು ಎಚ್ಐವಿ ಮತ್ತು ಕುಷ್ಠರೋಗದಂತಹ ಸಾಮಾಜಿಕ ಅವಸ್ಥೆಗಳಿಂದ ತುಂಬಿದ ಕಾಯಿಲೆಯಾಗಿ ನೋಡಬೇಕಾಗಿದೆ ಎಂದು ಹೇಳಿದ್ದಾರೆ.
ಅಷ್ಟೆ ಅಲ್ಲದೆ ಯಾರನ್ನಾದರೂ ಕರೆತನ್ನಿ, ನಾನು ಸನಾತನ ಧರ್ಮದ ಬಗ್ಗೆ ಚರ್ಚೆಗೆ ಸಿದ್ಧ ಎಂದು ಎ ರಾಜ ಸವಾಲ್ ಹಾಕಿದ್ದಾರೆ. ಇನ್ನು 10 ಲಕ್ಷ ಅಥವಾ 1 ಕೋಟಿಯಾದರೂ ಪರವಾಗಿಲ್ಲ, ಯಾವುದೇ ಆಯುಧ ಹಿಡಿದು ಬಂದರೂ ನಾನು ಪೆರಿಯಾರ್ ಮತ್ತು ಅಂಬೇಡ್ಕರ್ ಪುಸ್ತಕಗಳೊಂದಿಗೆ ದೈರ್ಯವಾಗಿ ಚರ್ಚೆಗೆ ಬರುತ್ತೇನೆ ಎಂದು ತಿಳಿಸಿದ್ದಾರೆ.
ಈ ತಿಂಗಳ ಆರಂಭದಲ್ಲಿ, ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮವು ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದ್ದು, ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದರು. ಉದಯನಿಧಿ ಹೇಳಿಕೆಗೆ ರಾಷ್ಟ್ರವ್ಯಾಪಿ ವಿರೋಧ ವ್ಯಕ್ತವಾಗಿತ್ತು. ಇದೀಗ ಅವರದ್ದೆ ಪಕ್ಷದ ನಾಯಕನ ಹೇಳಿಕೆ ಸಂಚಲನ ಸೃಷ್ಟಿಸುತ್ತಿದೆ.
ಇದಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ, ಸನಾತನ ಧರ್ಮವನ್ನು ಅನುಸರಿಸುವ ಶೇ 80 ಭಾರತದ ಜನಸಂಖ್ಯೆಯನ್ನು ಗುರಿಯಾಗಿಸಿಕೊಂಡು ದ್ವೇಷ ಭಾಷಣ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
'ಉದಯನಿಧಿ ಸ್ಟಾಲಿನ್ ನಂತರ, ಈಗ ಡಿಎಂಕೆಯ ಎ ರಾಜಾ ಅವರು ಸನಾತನ ಧರ್ಮವನ್ನು ಅವಹೇಳನ ಮಾಡಿದ್ದಾರೆ. ಇದು ಸನಾತನ ಧರ್ಮವನ್ನು ಅನುಸರಿಸುವ ಶೇ 80 ಭಾರತದ ಜನಸಂಖ್ಯೆಯನ್ನು ಗುರಿಯಾಗಿಸಿಕೊಂಡು ಮಾಡಿದ ದ್ವೇಷದ ಭಾಷಣವಲ್ಲದೆ ಬೇರೇನೂ ಅಲ್ಲ' ಎಂದು ತಿಳಿಸಿದ್ದಾರೆ.
ಇದು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ನಿಜವಾದ ಲಕ್ಷಣವಾಗಿದೆ. ಹಿಂದೂಗಳನ್ನು ಕೀಳಾಗಿ ಕಾಣುವುದೊಂದೇ ಚುನಾವಣೆಗಳನ್ನು ಗೆಲ್ಲುವ ಏಕೈಕ ಮಾರ್ಗವೆಂದು ಅವರು ಭಾವಿಸಿದಂತಿದೆ. ಇದನ್ನು ಮುಂಬೈ ಸಭೆಯಲ್ಲಿ ನಿರ್ಧರಿಸಲಾಗಿದೆಯೇ ಎಂದು ಮಾಳವೀಯ ಪ್ರಶ್ನಿಸಿದ್ದಾರೆ.
ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಕಳೆದ ವಾರ ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ಕಾಯಿಲೆಗಳೊಂದಿಗೆ ಹೋಲಿಸಿ ವಿವಾದವನ್ನು ಹುಟ್ಟು ಹಾಕಿದ್ದಾರೆ.
ಉದಯನಿಧಿ ಸ್ಟಾಲಿನ್ ಅವರನ್ನು ಬೆಂಬಲಿಸಿರುವ ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್, ಪ್ರಧಾನಿ ಮೋದಿ ನಕಲಿ ಸುದ್ದಿಗಳನ್ನು ನಂಬುವರೇ ಎಂದು ಪ್ರಶ್ನಿಸಿದ್ದಾರೆ.
Adding more fuel to the Sanatana Dharma row, DMK’s A Raja on Thursday called it to be a social disgrace. He commented, ‘Sanatana Dharma is a social disgrace like HIV and leprosy’ and further added, ‘there was no social stigma attached to malaria and dengue.’
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 11:07 pm
Mangalore Correspondent
Jail Attack, Suhas Shetty, Mangalore, Chotte...
19-05-25 10:14 pm
Konaje Suicide, Mangalore, Hair loss: ಕೂದಲು ಉ...
19-05-25 09:41 pm
Mangalore Job Scam, Police, Lawrence Dsouza,...
19-05-25 05:22 pm
Akanksha Suicide, Dharmasthala, Mangalore: ಏರ...
19-05-25 12:31 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm