ಬ್ರೇಕಿಂಗ್ ನ್ಯೂಸ್
12-09-23 11:23 am HK News Desk ದೇಶ - ವಿದೇಶ
ಉತ್ತರ ಪ್ರದೇಶ, ಸೆ.12: ರಾಜ್ಯದ ವಿವಿಧ ಪ್ರದೇಶಗಳಲ್ಲಿ ಸುರಿದ ಭಾರಿ ಮಳೆಯಿಂದ ಕಳೆದ 24 ಗಂಟೆಗಳ ಅವಧಿಯಲ್ಲಿ 19 ಜನರು ಸಾವನ್ನಪ್ಪಿದ್ದಾರೆ. ನಿರಂತರ ಮಳೆಯಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಕೆಲವೆಡೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದ ಕೆಲವೆಡೆ ಮೇಲ್ಛಾವಣಿ ಕುಸಿತ, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಪ್ರಕರಣಗಳು ವರದಿಯಾಗಿವೆ. ರಾಜಧಾನಿ ಲಕ್ನೋದ ಕೆಲವು ಪ್ರದೇಶಗಳು ಜಲಾವೃತಗೊಂಡಿವೆ. ಬಾರಾಬಂಕಿಯಲ್ಲಿ ರೈಲು ಹಳಿಗಳು ಜಲಾವೃತಗೊಂಡಿತು. ಹರ್ದೋಯಿಯಲ್ಲಿ ನಾಲ್ಕು ಮಂದಿ, ಬಾರಾಬಂಕಿಯಲ್ಲಿ ಮೂವರು, ಪ್ರತಾಪ್‌ಗಢ ಮತ್ತು ಕನೌಜ್‌ನಿಂದ ತಲಾ ಇಬ್ಬರು ಹಾಗೂ ಅಮೇಥಿ, ಡಿಯೋರಿಯಾ, ಜಲೌನ್, ಕಾನ್ಪುರ್, ಉನ್ನಾವ್, ಸಂಭಾಲ್, ರಾಂಪುರ ಮತ್ತು ಮುಜಾಫರ್‌ನಗರ ಜಿಲ್ಲೆಗಳಲ್ಲಿ ತಲಾ ಒಬ್ಬರು ಮಳೆ ಸಂಬಂಧಿ ಅವಘಡದಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ರಾಜ್ಯದ 22 ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ 40 ಮಿ.ಮೀ ಮಳೆ ಸುರಿದಿದೆ.
ಸರ್ಕಾರದ ವಿರುದ್ಧ ವಾಗ್ದಾಳಿ:
ಸ್ಮಾರ್ಟ್ ಸಿಟಿಗಳಿಗೆ ಮೀಸಲಾದ ಬಜೆಟ್‌ನಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಆರೋಪಿಸಿದರು. ಲಕ್ನೋದಲ್ಲಿನ ಜಲಮಂಡಳಿಯು ಬಿಜೆಪಿ ಸರ್ಕಾರದ ಖಾಲಿ ಭರವಸೆಗಳನ್ನು ಬಹಿರಂಗಪಡಿಸಿದೆ ಎಂದು ವಾಗ್ದಾಳಿ ನಡೆಸಿದರು. ಸ್ಮಾರ್ಟ್ ಸಿಟಿ ಹೆಸರಿನಲ್ಲಿ ಬಿಜೆಪಿ ರಾಜ್ಯದ ಜನತೆಗೆ ದ್ರೋಹ ಬಗೆದಿದೆ. ಬಜೆಟ್‌ನಲ್ಲಿ ಭ್ರಷ್ಟಾಚಾರ ಮತ್ತು ಲೂಟಿ ಈ ಪರಿಸ್ಥಿತಿ ಕಾರಣ ಎಂದು ಅವರು ದೂರಿದರು.
ಭಾರಿ ಮಳೆ ಮುನ್ಸೂಚನೆ:
ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಪೂರ್ವ ವಲಯದಲ್ಲಿ ಸೆ.14 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಸೆ.17 ರವರೆಗೆ ಲಘು ಮಳೆ ಮುಂದುವರೆಯುತ್ತದೆ ಎಂದು ಪರಿಹಾರ ಆಯುಕ್ತರ ಕಚೇರಿಯ ಅಧಿಕಾರಿ ತಿಳಿಸಿದ್ದಾರೆ. ರಾಜ್ಯದ ಪಶ್ಚಿಮ ಭಾಗದಲ್ಲೂ ಸೆ.17 ರವರೆಗೆ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಪರಿಹಾರ ಕಾರ್ಯ ಕೈಗೊಳ್ಳುವಂತೆ ಸಿಎಂ ಸೂಚನೆ:ಮೂಲಗಳ ಪ್ರಕಾರ, ರಾಜ್ಯದ 173 ಹಳ್ಳಿಗಳ 55,982 ಜನರು ಮಳೆ ಸಂಬಂಧಿ ಅವಘಡದಲ್ಲಿ ಸಿಲುಕಿದ್ದಾರೆ. ಸದ್ಯ ರಾಜ್ಯದಲ್ಲಿ ಯಾವುದೇ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿಲ್ಲ. ಆದರೆ ಬಿಜ್ನೋರ್‌ನಲ್ಲಿ ಗಂಗಾ ಮತ್ತು ಮಿರ್ಜಾಪುರದ ಸೋನ್ ನದಿ (ಬನ್‌ಸಾಗರ್ ಅಣೆಕಟ್ಟು) ನೀರಿನ ಮಟ್ಟ ಏರುತ್ತಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂತ್ರಸ್ತ ಜಿಲ್ಲೆಗಳ ಅಧಿಕಾರಿಗಳಿಗೆ ತ್ವರಿತಗತಿಯಲ್ಲಿ ಪರಿಹಾರ ಕಾರ್ಯ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ. ಬೆಳೆಗಳಿಗೆ ಆಗಿರುವ ಹಾನಿಯನ್ನು ಅಂದಾಜಿಸಿ ಸರ್ಕಾರಕ್ಕೆ ವರದಿ ನೀಡಬೇಕು. ಇದರಿಂದ ಸಂತ್ರಸ್ತ ರೈತರಿಗೆ ನಿಯಮಾನುಸಾರ ಪರಿಹಾರದ ಮೊತ್ತವನ್ನು ನೀಡಬಹುದು ಎಂದು ಅಧಿಕಾರಿ ಸಿಎಂ ಅವರನ್ನು ಉಲ್ಲೇಖಿಸಿ ಮಾಹಿತಿ ನೀಡಿದ್ದಾರೆ.
Nineteen people have died in rain-related incidents in the past 24 hours in Uttar Pradesh. The incessant rainfall has also led to the closure of schools for a day in some places. Over 40 mm of rain was recorded in 22 districts of the state over the last 24 hours. These include Moradabad, Sambhal, Kannauj, Rampur, Hathras, Barabanki, Kasganj, Bijnor, Amroha, Bahraich, Lucknow, Badaun, Mainpuri, Hardoi, Firozabad, Bareilly, Shahjahanpur, Kanpur, Sitapur, Farrukhabad, Lakhimpur Kheri, and Fatehpur.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 11:07 pm
Mangalore Correspondent
Jail Attack, Suhas Shetty, Mangalore, Chotte...
19-05-25 10:14 pm
Konaje Suicide, Mangalore, Hair loss: ಕೂದಲು ಉ...
19-05-25 09:41 pm
Mangalore Job Scam, Police, Lawrence Dsouza,...
19-05-25 05:22 pm
Akanksha Suicide, Dharmasthala, Mangalore: ಏರ...
19-05-25 12:31 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm