ಬ್ರೇಕಿಂಗ್ ನ್ಯೂಸ್
03-10-23 06:57 pm HK News Desk ದೇಶ - ವಿದೇಶ
ಕೊಚ್ಚಿ, ಅ.3: ಕೇರಳದ ಸಿರೋ- ಮಲಬಾರ್ ಚರ್ಚ್ ಸಂಸ್ಥೆಯ ಇಡುಕ್ಕಿ ಡಯಾಸಿಸ್ಗೆ ಸೇರಿದ ಕ್ಯಾಥೋಲಿಕ್ ಪಾದ್ರಿಯೊಬ್ಬರು ಬಿಜೆಪಿ ಸೇರಿದ್ದು, ಅದಾಗಿ ಕೆಲವೇ ಗಂಟೆಗಳಲ್ಲಿ ಅವರನ್ನು ಚರ್ಚ್ನ ಪ್ರತಿನಿಧಿ (ವಿಕಾರ್) ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ.
ಕ್ಯಾಥೋಲಿಕ್ ಚರ್ಚ್ನ ಪಾದ್ರಿ ಫಾದರ್ ಕುರಿಯಾಕೋಸ್ ಮಟ್ಟಂ ಅವರು ಸೋಮವಾರ ಇಡುಕ್ಕಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್ ಅಜಿ ಅವರಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದಿದ್ದರು. ಇದಾಗಿ ಕೆಲವೇ ಗಂಟೆಗಳಲ್ಲಿ ಇಡುಕ್ಕಿ ವಲಯ ಚರ್ಚ್ ಡಯಾಸಿಸ್ ಅವರ ವಿರುದ್ಧ ಕ್ರಮ ಕೈಗೊಂಡಿದೆ.
ಮಂಕುವಾ ಸೇಂಟ್ ಥಾಮಸ್ ಚರ್ಚ್ನ ಪ್ಯಾರಿಶ್ ಹುದ್ದೆಯಿಂದ ಫಾದರ್ ಮಟ್ಟಂ ಅವರನ್ನು ತಾತ್ಕಾಲಿಕವಾಗಿ ಬಿಡುಗಡೆ ಮಾಡಲಾಗಿದೆ ಎಂದು ಚರ್ಚ್ ತಿಳಿಸಿದೆ. ಚರ್ಚ್ ಪಾದ್ರಿ ಯಾವುದೇ ರಾಜಕೀಯ ಪಕ್ಷ ಸೇರಿಕೊಳ್ಳುವಂತಿಲ್ಲ ಅಥವಾ ಸಕ್ರಿಯವಾಗಿ ಭಾಗವಹಿಸುವಂತೆ ಇಲ್ಲ ಎಂದು ಕೆನಾನ್ ಕಾನೂನು ಹೇಳುತ್ತದೆ. ಅದರಂತೆ, ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಚರ್ಚ್ ವಕ್ತಾರರೊಬ್ಬರು ತಿಳಿಸಿದ್ದಾರೆ. 74 ವರ್ಷದ ಪಾದ್ರಿ ಮಟ್ಟಂ ಅವರು ಕೆಲವೇ ತಿಂಗಳಲ್ಲಿ ಪಾದ್ರಿ ಹುದ್ದೆಯಿಂದ ನಿವೃತ್ತರಾಗಲಿದ್ದಾರೆ.
ಮಣಿಪುರ ಹಿಂಸಾಚಾರ ವಿಚಾರವಾಗಿ ಬಿಜೆಪಿ ಸರ್ಕಾರದ ವಿರುದ್ಧ ಕ್ಯಾಥೋಲಿಕ್ ಚರ್ಚ್ ವಾಗ್ದಾಳಿ ನಡೆಸುತ್ತಿರುವ ನಡುವೆಯೇ ಪಾದ್ರಿ ಕೇಸರಿ ಪಾಳೆಯ ಸೇರ್ಪಡೆಯಾಗಿದ್ದು ಪ್ರಮುಖರನ್ನು ಇರಿಸು ಮುರಿಸು ಮಾಡಿತ್ತು. ಪಾದ್ರಿ ಜೊತೆಗಿನ ಚಿತ್ರಗಳನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿರುವ ಬಿಜೆಪಿ ನಾಯಕ ಅಜಿ, ದೇಶದಲ್ಲಿನ ಪ್ರಸಕ್ತ ಪರಿಸ್ಥಿತಿಯನ್ನು ಗಮನಿಸಿದ ನಂತರ ಫಾದರ್ ಮಟ್ಟಂ ಅವರು ಬಿಜೆಪಿ ಸೇರಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
A Catholic priest under the Idukki diocese of the Syro-Malabar church was relieved of his duties as vicar on Monday, hours after he joined the BJP. Fr Kuriakose Mattam received the primary membership of the BJP from the party's Idukki district president K S Aji on Monday. Within hours, the Idukki diocese initiated action against him.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm