ಬ್ರೇಕಿಂಗ್ ನ್ಯೂಸ್
07-10-23 05:26 pm HK News Desk ದೇಶ - ವಿದೇಶ
ಇಸ್ರೇಲ್, ಅ.7: ಹಮಾಸ್ ಉಗ್ರಗಾಮಿಗಳು ಇಸ್ರೇಲ್ ಅನ್ನು ಟಾರ್ಗೆಟ್ ಮಾಡಿದ್ದಾರೆ. ಏಕಾಏಕಿ ಇಸ್ರೇಲ್ ಮೇಲೆ ಮುಗಿಬಿದ್ದಿರುವ ಹಮಾಸ್ ಉಗ್ರರು, ಬರೋಬ್ಬರಿ 500ಕ್ಕೂ ಹೆಚ್ಚು ರಾಕೆಟ್‌ಗಳಿಂದ ದಾಳಿ ಮಾಡಿದ್ದಾರೆ. ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ನಡುವಿನ ಸಂಘರ್ಷದ ಮುಂದುವರೆದ ಭಾಗ ಇದಾಗಿದ್ದು, ಇಸ್ರೇಲ್‌ನಲ್ಲಿ ಪ್ರಕ್ಷುಬ್ಧ ಸ್ಥಿತಿ ಉಂಟಾಗಿದೆ. ಗಾಜಾದಿಂದ ಹಮಾಸ್ ಉಗ್ರಗಾಮಿ ಗುಂಪು ಇಸ್ರೇಲ್ ಮೇಲೆ ವೈಮಾನಿಕ ದಾಳಿ ನಡೆಸಿದೆ. ಮತ್ತೊಂದೆಡೆ ನೂರಾರು ಸಂಖ್ಯೆಯಲ್ಲಿ ಉಗ್ರರು ಇಸ್ರೇಲ್ ಒಳಗೆ ನುಸುಳಿ, ಅಲ್ಲಿನ ನಾಗರಿಕರ ಮೇಲೆ ಗುಂಡು ಹಾರಿಸಿದ್ದಾರೆ. ಇಸ್ರೇಲ್‌ನಲ್ಲಿ ಅಪಾರ ಸಂಖ್ಯೆಯ ಸಾವು ನೋವು ಉಂಟಾಗಿದ್ದು, ಇನ್ನೂ ಖಚಿತ ಮಾಹಿತಿ ಲಭ್ಯವಾಗಿಲ್ಲ. ಇನ್ನು ಇಸ್ರೇಲ್ ಕೂಡ ಯುದ್ಧ ಘೋಷಿಸಿದೆ.
ಗಾಜಾ ಪಟ್ಟಿಯಿಂದ 500ಕ್ಕೂ ಹೆಚ್ಚು ರಾಕೆಡ್ ಉಡಾವಣೆ;
ಗಾಜಾ ಪಟ್ಟಿಯಿಂದ ಇಸ್ರೇಲ್ ಟಾರ್ಗೆಟ್ ಮಾಡಿದ ಹಮಾಸ್ ಉಗ್ರರು, ನಿರಂತರವಾಗಿ ರಾಕೆಟ್ ದಾಳಿ ನಡೆಸಿದರು. ಬರೋಬ್ಬರಿ 500ಕ್ಕೂ ಹೆಚ್ಚು ರಾಕೆಟ್‌ಗಳು ಇಸ್ರೇಲ್ ಮೇಲೆ ಉಡಾವಣೆಯಾದವು. ಗಾಜಾ ಪಟ್ಟಿಯಿಂದ ಹಾರಿದ ರಾಕೆಟ್ ದಕ್ಷಿಣ ಇಸ್ರೇಲ್‌ನ ಅಶ್ಕೆಲೋನ್‌ನಲ್ಲಿರುವ ಮನೆಗಳಿಗೆ ನುಗ್ಗಿತು. ಹಮಾಸ್ ಉಗ್ರರು ಇಸ್ರೇಲ್ ವಿರುದ್ಧ ಹೊಸ ಕಾರ್ಯಾಚರಣೆಯನ್ನು ಘೋಷಿಸುತ್ತಿದ್ದಂತೆ ರಾಕೆಟ್‌ಗಳನ್ನು ಹಾರಿಸಲಾಯಿತು.
ನಾಗರಿಕರ ಮೇಲೆ ದಾಳಿ;
ನೂರಾರು ಹಮಾಸ್ ಉಗ್ರರು ಎಸ್ ಯುವಿ, ಮೋಟಾರ್ ಸೈಕಲ್ ಮತ್ತು ಪ್ಯಾರಾಗ್ಲೈಡರ್ ಗಳಲ್ಲಿ ಇಸ್ರೇಲ್ ಗೆ ನುಸುಳಿ ನಾಗರಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಮುಂಜಾನೆ 30 ನಿಮಿಷಕ್ಕೂ ಹೆಚ್ಚು ಕಾಲ ನಡೆಯಿತು. ಸದ್ಯ ಅಪಾರ ಪ್ರಮಾಣದ ಸಾವು ನೋವು ಸಂಭವಿಸಿರುವ ಸಾಧ್ಯತೆ ಇದ್ದು, ಈ ಬಗ್ಗೆ ನಿಖರ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
ಹಮಾಸ್ ಉಗ್ರರ ವಿರುದ್ಧ ಯುದ್ಧ ಘೋಷಿಸಿದ ಇಸ್ರೇಲ್ ;
ಇಸ್ರೇಲ್‌ನ ಮೇಲೆ ಹಮಾಸ್‌ನ ಹಠಾತ್ ದಾಳಿಗೆ ಪ್ರತೀಕಾರವಾಗಿ ಇಸ್ರೇಲ್ ರಕ್ಷಣಾ ಪಡೆಗಳು ಶನಿವಾರ 'ಐರನ್ ಸ್ವೋರ್ಡ್ಸ್' ಕಾರ್ಯಾಚರಣೆಯನ್ನು ಪ್ರಾರಂಭಿಸಿದವು.
ಯುಕೆ ಪ್ರಧಾನಿ ರಿಷಿ ಸುನಾಕ್ ಎಕ್ಸ್ ಪೋಸ್ಟ್ ನಲ್ಲಿ, ಇಸ್ರೇಲಿ ನಾಗರಿಕರ ಮೇಲೆ ಹಮಾಸ್ ಭಯೋತ್ಪಾದಕರ ದಾಳಿಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ. ಇಸ್ರೇಲ್ ತನ್ನನ್ನು ತಾನು ರಕ್ಷಿಸಿಕೊಳ್ಳುವ ಸಂಪೂರ್ಣ ಹಕ್ಕನ್ನು ಹೊಂದಿದೆ.ನಾವು ಇಸ್ರೇಲಿ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಇಸ್ರೇಲ್‌ನಲ್ಲಿರುವ ಬ್ರಿಟಿಷ್ ಪ್ರಜೆಗಳು ಪ್ರಯಾಣ ಸಲಹೆಯನ್ನು ಅನುಸರಿಸಬೇಕು ಎಂದು ಹೇಳಿದ್ದಾರೆ.
ಪ್ಯಾಲೆಸ್ತೀನ್ ಪ್ರೇರಿತ ಹಮಾಸ್ ಬಂಡುಕೋರರ ವಿರುದ್ಧ ಇಸ್ರೇಲ್ ಸಮಾರಾ ಸಾರಿದ್ದು ಹಿಂದೆಂದೂ ಕಾಣದ ರೀತಿಯಲ್ಲಿ ಪ್ರತಿಕ್ರಿಯೆ ನೀಡುವುದಾಗಿ ಶನಿವಾರ ಶಪಥಗೈದಿದೆ.
ಇಸ್ರೇಲ್-ಗಾಜಾ ಸಂಘರ್ಷ ಬೆನ್ನಲ್ಲೇ ಅಲ್ಲಿರುವ ತನ್ನ ನಾಗರಿಕರಿಗೆ ಸಲಹೆ-ಸೂಚನೆ ಹೊರಡಿಸಿದ ಭಾರತ ;
ಭಾರತವು ಇಂದು ಇಸ್ರೇಲ್‌ನಲ್ಲಿರುವ ತನ್ನ ಪ್ರಜೆಗಳಿಗೆ ಜಾಗರೂಕರಾಗಿರಲು ಮತ್ತು ಸುರಕ್ಷತಾ ಪ್ರೋಟೋಕಾಲ್‌ಗಳಿಗೆ ಗಮನ ಹರಿಸುವಂತೆ ಕೇಳಿಕೊಂಡಿದೆ.
ಈ ಕುರಿತು ರಾಯಭಾರ ಕಚೇರಿಯು ಇಸ್ರೇಲ್ ನಲ್ಲಿರುವ ಭಾರತೀಯರಿಗೆ, ಇಸ್ರೇಲ್‌ನಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್‌ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ವಿನಂತಿಸಲಾಗಿದೆ ಮತ್ತು ಸ್ಥಳೀಯ ಅಧಿಕಾರಿಗಳು ಸಲಹೆ ನೀಡಿದಂತೆ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಗಮನಿಸುವಂತೆ ಕೇಳಿಕೊಂಡಿದೆ.
ಅನಗತ್ಯವಾಗಿ ಹೊರಗೆ ಓಡಾಡದಂತೆ ಮತ್ತು ಸುರಕ್ಷತಾ ಕ್ರಮಗಳ ಮೇಲೆ ಹೆಚ್ಚಿನ ನಿಗಾ ಇರಿಸಿ. ಇಸ್ರೇಲಿ ಹೋಮ್ ಫ್ರಂಟ್ ಕಮಾಂಡ್ ವೆಬ್‌ಸೈಟ್ (https://www.oref.org.il/en) ಅಥವಾ ಅವರ ಸನ್ನದ್ಧತೆಯ ಕರಪತ್ರವನ್ನು ನೋಡಿ. ತುರ್ತು ಸಂದರ್ಭದಲ್ಲಿ, +97235226748 ನಲ್ಲಿ ಸಂಪರ್ಕಿಸಿ ಅಥವಾ cons1.telaviva@mea.gov.in ನಲ್ಲಿ ಸಂದೇಶವನ್ನು ಕಳುಹಿಸಿ. ಯಾವುದೇ ಹೆಚ್ಚಿನ ಮಾರ್ಗದರ್ಶನಕ್ಕಾಗಿ ರಾಯಭಾರ ಕಚೇರಿಯ ಸಿಬ್ಬಂದಿ ನಿಮ್ಮ ಸಹಾಯಕ್ಕೆ ಬರುತ್ತಾರೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.
Palestinian militants in the Gaza Strip carried out an unprecedented infiltration on October 7 into southern Israel and fired thousands of rockets into the country as the ruling Hamas militant group announced the beginning of a new operation. “We are at war,” Israeli Prime Minister Benjamin Netanyahu said in a televised address, declaring a mass army mobilization.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 11:07 pm
Mangalore Correspondent
Jail Attack, Suhas Shetty, Mangalore, Chotte...
19-05-25 10:14 pm
Konaje Suicide, Mangalore, Hair loss: ಕೂದಲು ಉ...
19-05-25 09:41 pm
Mangalore Job Scam, Police, Lawrence Dsouza,...
19-05-25 05:22 pm
Akanksha Suicide, Dharmasthala, Mangalore: ಏರ...
19-05-25 12:31 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm