ಬ್ರೇಕಿಂಗ್ ನ್ಯೂಸ್
12-10-23 09:25 pm HK News Desk ದೇಶ - ವಿದೇಶ
ನವದೆಹಲಿ, ಅ.12: ವಿಶ್ವಮಟ್ಟದಲ್ಲಿ ಗಮನಾರ್ಹವಾಗಿ ಬೆಳೆಯುತ್ತಿರುವ ಭಾರತವು ಯುವಜನರಿಗೆ ಹೊಸ ಹೊಸ ಅವಕಾಶಗಳನ್ನು ಸೃಷ್ಟಿಸುತ್ತಿದೆ. ಹೀಗಾಗಿ ದೇಶದಲ್ಲಿ ನಿರುದ್ಯೋಗ ದರವು ಕಳೆದ 6 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಟ್ಟದಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ತಿಳಿಸಿದರು.
ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಭಾರತದ ಆರ್ಥಿಕತೆಯು ವೇಗವಾಗಿ ಪ್ರಗತಿ ಕಾಣುತ್ತಿರುವುದರಿಂದ ಹಲವು ಕ್ಷೇತ್ರಗಳಲ್ಲಿ ಯುವಜನರಿಗೆ ಅವಕಾಶಗಳು ಹೆಚ್ಚಿವೆ. ದೇಶದಲ್ಲಿ ಉದ್ಯೋಗ ಸೃಷ್ಟಿಯೂ ಹೆಚ್ಚಾಗಿದೆ. ಇತ್ತೀಚಿನ ಸಮೀಕ್ಷೆಯ ಪ್ರಕಾರ, ನಿರುದ್ಯೋಗ ದರವೂ ಕೆಳಮಟ್ಟಕ್ಕೆ ಇಳಿದಿದೆ ಎಂದು ವಿವರಿಸಿದರು.
ಗ್ರಾಮೀಣ ಮತ್ತು ನಗರ ಪ್ರದೇಶಗಳೆರಡರಲ್ಲೂ ನಿರುದ್ಯೋಗವು ವೇಗವಾಗಿ ಕಡಿಮೆಯಾಗುತ್ತಿದೆ. ಸರ್ಕಾರದ ಅಭಿವೃದ್ಧಿ ಯೋಜನೆಗಳು ಜನರಿಗೆ ಸಮಾನವಾಗಿ ತಲುಪುತ್ತಿವೆ. ಇದರ ಪರಿಣಾಮವಾಗಿ ಉದ್ಯೋಗಾವಕಾಶಗಳು ಹೆಚ್ಚಾಗಿವೆ ಎಂದು ಪ್ರಧಾನಿ ಹೇಳಿದರು.
ದೇಶದ ಉದ್ಯೋಗಿಗಳಲ್ಲಿ ಮಹಿಳೆಯರ ದರವೂ ಗಮನಾರ್ಹವಾಗಿ ಹೆಚ್ಚಳ ಕಾಣುತ್ತಿದೆ. ಮಹಿಳಾ ಸಬಲೀಕರಣಕ್ಕೆ ಸಂಬಂಧಿಸಿದಂತೆ ಕಳೆದ ಕೆಲ ವರ್ಷಗಳಲ್ಲಿ ಪ್ರಾರಂಭಿಸಲಾದ ಯೋಜನೆಗಳು ಮತ್ತು ಅಭಿಯಾನಗಳು ಪ್ರಭಾವ ಬೀರಿವೆ. ಹಿಂದಿನ ಸರ್ಕಾರಗಳಲ್ಲಿ ಕೌಶಲಾಭಿವೃದ್ಧಿ ಕುರಿತ ನಿರ್ಲಕ್ಷ್ಯದಿಂದಾಗಿ ಉದ್ಯೋಗಾವಕಾಶಗಳು ಇರಲಿಲ್ಲ. ನಮ್ಮ ಸರ್ಕಾರ ಕೌಶಲ್ಯದ ಮಹತ್ವವನ್ನು ಅರಿತು ಅದಕ್ಕಾಗಿ ಪ್ರತ್ಯೇಕ ಸಚಿವಾಲಯವನ್ನು ರಚಿಸಿ, ಪ್ರತ್ಯೇಕ ಬಜೆಟ್ ನೀಡುತ್ತಿದೆ ಎಂದು ಹೇಳಿದರು
ಕೈಗಾರಿಕೆ, ಸಂಶೋಧನೆ ಮತ್ತು ಕೌಶಲ್ಯಾಭಿವೃದ್ಧಿ ಸಂಸ್ಥೆಗಳು ಕಾಲಘಟ್ಟದಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಕಳೆದ 9 ವರ್ಷಗಳಲ್ಲಿ ದೇಶದಲ್ಲಿ ಸುಮಾರು 5 ಸಾವಿರ ಹೊಸ ಐಟಿಐಗಳನ್ನು (ಕೈಗಾರಿಕಾ ತರಬೇತಿ ಸಂಸ್ಥೆಗಳು) ಸ್ಥಾಪಿಸಲಾಗಿದೆ. 4 ಲಕ್ಷಕ್ಕೂ ಹೆಚ್ಚು ಹೊಸ ಐಟಿಐ ಸೀಟುಗಳನ್ನು ಸೃಷ್ಟಿಸಲಾಗಿದೆ. ಇದರಿಂದ ಯುವಕರು ಉದ್ಯೋಗಸ್ಥರಾಗುತ್ತಿದ್ದಾರೆ ಎಂಬುದನ್ನು ಪ್ರಧಾನಿ ಮಾಹಿತಿ ನೀಡಿದರು.
ಸರ್ಕಾರ ಯುವಕರ ಕೌಶಲ್ಯದಲ್ಲಿ ಹಿಂದೆಂದಿಗಿಂತಲೂ ಹೆಚ್ಚು ನಂಬಿಕೆ ಹೊಂದಿದೆ. ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ್ ಯೋಜನೆಯು ಯುವಕರ ಸತ್ವವನ್ನು ಬಲಪಡಿಸಿದೆ. ಈ ಯೋಜನೆಯಡಿ, ಇದುವರೆಗೆ 1.5 ಕೋಟಿ ಯುವಕರಿಗೆ ತರಬೇತಿ ನೀಡಲಾಗಿದೆ. ಕೈಗಾರಿಕಾ ಕ್ಲಸ್ಟರ್ಗಳ ಬಳಿ ಹೊಸ ಕೌಶಲ್ಯ ಕೇಂದ್ರಗಳನ್ನು ಸಹ ಸ್ಥಾಪಿಸಲಾಗುತ್ತಿದೆ. ಉದ್ಯಮವು ಕೌಶಲ್ಯ ಅಭಿವೃದ್ಧಿ ಸಂಸ್ಥೆಗಳೊಂದಿಗೆ ಜೊತೆಗೂಡಿ ಕಾರ್ಯ ನಿರ್ವಹಿಸಲಿವೆ. ಇದು ಉದ್ಯೋಗಾವಕಾಶ ಸೃಷ್ಟಿಯ ಜೊತೆಗೆ, ಯುವಕರ ಕೌಶಲ್ಯವೂ ಅಭಿವೃದ್ಧಿಯಾಗುತ್ತದೆ ಎಂದು ಪ್ರಧಾನಿ ತಿಳಿಸಿದರು.
Prime Minister Narendra Modi on Thursday said India’s expanding economy is creating new possibilities for the youth and the unemployment rate in the country is at its lowest level in the last six years.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm