ಬ್ರೇಕಿಂಗ್ ನ್ಯೂಸ್
11-11-20 05:21 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 11: ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಸುಪ್ರೀಂಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.
2018ರಲ್ಲಿ ನಡೆದಿದ್ದ ಒಳಾಂಗಣ ವಿನ್ಯಾಸಕಾರ ಅನ್ವಯ್ ನಾಯ್ಕ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಅರ್ನಬ್ ಅವರನ್ನು ಎಂಟು ದಿನಗಳ ಹಿಂದೆ ಬಂಧಿಸಲಾಗಿತ್ತು. ಅವರಿಗೆ ಜಾಮೀನು ನೀಡಲು ನಿರಾಕರಿಸಿದ್ದ ಬಾಂಬೆ ಹೈಕೋರ್ಟ್, ಪ್ರಕರಣದ ತನಿಖೆ ನಡೆಯುತ್ತಿರುವ ಸೆಷನ್ಸ್ ಕೋರ್ಟ್‌ನಲ್ಲಿಯೇ ಜಾಮೀನಿಗೆ ಅರ್ಜಿ ಸಲ್ಲಿಸುವಂತೆ ಹೇಳಿತ್ತು. ಆದರೆ ಅರ್ನಬ್ ಅವರ ವಕೀಲ ಹರೀಶ್ ಸಾಳ್ವೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಬುಧವಾರ ಅರ್ನಬ್ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಅರ್ನಬ್ ಅವರಿಗೆ ಜಾಮೀನು ಮಂಜೂರು ಮಾಡಿದೆ. ಇದೇ ಸಂದರ್ಭದಲ್ಲಿ ಸುಪ್ರೀಂಕೋರ್ಟ್, ಮಹಾರಾಷ್ಟ್ರ ಸರ್ಕಾರ ಮತ್ತು ಪೊಲೀಸರ ನಡೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿತು.


50,000 ರೂ ವೈಯಕ್ತಿಕ ಬಾಂಡ್ ಆಧಾರದಲ್ಲಿ ಅರ್ನಬ್ ಅವರಿಗೆ ಜಾಮೀನು ನೀಡಲಾಗಿದೆ. ಅವರೊಂದಿಗೆ ಇತರೆ ಇಬ್ಬರು ಆರೋಪಿಗಳಿಗೂ ಜಾಮೀನು ಮಂಜೂರು ಮಾಡಲಾಗಿದೆ. ಅರ್ನಬ್ ಮತ್ತು ಇತರರು ಪ್ರಕರಣದ ತನಿಖೆಗೆ ಸಹಕರಿಸಬೇಕು ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.
ನವೆಂಬರ್ 4ರಂದು ಅರ್ನಬ್ ಹಾಗೂ ಇನ್ನಿಬ್ಬರು ಆರೋಪಿಗಳಾದ ಫೆರೋಜ್ ಶೇಕ್ ಮತ್ತು ನಿತೀಶ್ ಸರ್ದಾ ಅವರನ್ನು ಬಂಧಿಸಲಾಗಿತ್ತು. ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡದೆ ಇರುವುದು ಸರಿಯಲ್ಲ ಎಂದ ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಇಂದಿರಾ ಬ್ಯಾನರ್ಜಿ ಅವರನ್ನು ಒಳಗೊಂಡ ನ್ಯಾಯಪೀಠ ಅಭಿಪ್ರಾಯಪಟ್ಟಿತು. ತನ್ನ ಆದೇಶವನ್ನು ತಕ್ಷಣದಿಂದಲೇ ಜಾರಿಗೆ ತರುವಂತೆ ಪೊಲೀಸ್ ಆಯುಕ್ತರಿಗೆ ನ್ಯಾಯಪೀಠ ಸೂಚನೆ ನೀಡಿತು.
Republic TV's Arnab Goswami has been granted bail by the Supreme Court in a 2018 abetment to suicide case. He and two others were arrested last week in connection with the suicide of architect Anvay Naik and his mother.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm