ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಹೊತ್ತಿ ಉರಿದ ಟ್ರಕ್‌, ನಾಲ್ವರು ಸಜೀವ ದಹನ !

17-10-23 11:36 am       HK News Desk   ದೇಶ - ವಿದೇಶ

ಪುಣೆಯ ನಾಲ್ವೆ ಸೇತುವೆ ಮೇಲೆ ಎರಡು ಟ್ರಕ್‌ಗಳ ನಡುವೆ ಅಪಘಾತ ಸಂಭವಿಸಿದೆ. ಬೆಂಕಿ ಹೊತ್ತಿಕೊಂಡ ಪರಿಣಾಮ ನಾಲ್ವರು ಮೃತಪಟ್ಟಿದ್ದು. ಇಬ್ಬರು ಗಾಯಗೊಂಡಿದ್ದಾರೆ.

ಮಹಾರಾಷ್ಟ್ರ, ಅ 17: ಪುಣೆಯ ನಾಲ್ವೆ ಸೇತುವೆ ಮೇಲೆ ಎರಡು ಟ್ರಕ್‌ಗಳ ನಡುವೆ ಅಪಘಾತ ಸಂಭವಿಸಿದೆ. ಬೆಂಕಿ ಹೊತ್ತಿಕೊಂಡ ಪರಿಣಾಮ ನಾಲ್ವರು ಮೃತಪಟ್ಟಿದ್ದು. ಇಬ್ಬರು ಗಾಯಗೊಂಡಿದ್ದಾರೆ.

ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೈನರ್- ಟ್ರಕ್‌ನ ನಡುವೆ ಸೋಮವಾರ ತಡರಾತ್ರಿ ಈ ಅಪಘಾತ ಸಂಭವಿಸಿದ್ದು, ಕಂಟೈನರ್ ಟ್ರಕ್‌ನ ಬ್ರೇಕ್‌ ವೈಫಲ್ಯದಿಂದ ಈ ಅವಘಡ ನಡೆದಿದೆ ಎಂದು ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ.

Pune accident: Four dead, two injured as truck catches fire on Navle bridge  on the Pune-Bengaluru highway | Mint

Fatal collision in Pune: Four dead, two injured as truck catches fire

ಅಗ್ನಿ ಶಾಮಕದಳ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸಿದರು. ಟ್ರಕ್‌ನಲ್ಲಿದ್ದ ಮೃತದೇಹಗಗಳನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ. 

ಟ್ರಕ್‌ನಲ್ಲಿದ್ದ ಆರು ಮಂದಿಯ ಪೈಕಿ ನಾಲ್ವರು ಮೃತಪಟ್ಟಿದ್ದು, ಇನ್ನಿಬ್ಬರು ಬೆಂಕಿಯಿಂದ ತಪ್ಪಿಸಿಕೊಳ್ಳುವ ಸಂದರ್ಭದಲ್ಲಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

Four people, including two minors, were killed after a truck caught fire following a collision in Maharashtra's Pune on Monday night, the police said.