ಬ್ರೇಕಿಂಗ್ ನ್ಯೂಸ್
28-10-23 12:53 pm HK News Desk ದೇಶ - ವಿದೇಶ
ನವದೆಹಲಿ, ಅ 28: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಲಾಗಿದೆ.
ಮುಖೇಶ್ ಅಂಬಾನಿ ಅವರ ಕಂಪನಿಯ ಇಮೇಲ್ ಐಡಿಗೆ ಅಪರಿಚಿತ ವ್ಯಕ್ತಿಯೊಬ್ಬ ಕಳುಹಿಸಿರುವ ಇ-ಮೇಲ್ನಲ್ಲಿ ಕೋಟ್ಯಾಧಿಪತಿ 20 ಕೋಟಿ ನೀಡಬೇಕು ಇಲ್ಲವಾದಲ್ಲಿ ಆತನನ್ನು ಕೊಲೆ ಮಾಡಲಾಗುವುದು ಎಂದು ಹೇಳಲಾಗಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಇ-ಮೇಲ್ ಮೂಲಕ ಕೊಲೆ ಬೆದರಿಕೆ ಹಾಕಿದ್ದು ಅದರಲ್ಲಿ 20 ಕೋಟಿ ರೂಪಾಯಿ ನೀಡುವಂತೆ ಕೇಳಲಾಗಿದೆ, ಒಂದು ವೇಳೆ ಹಣ ಕೊಡದೇ ಇದ್ದರೆ, ನಾವು ಭಾರತದಲ್ಲಿ ಅತ್ಯುತ್ತಮ ಶೂಟರ್ಗಳನ್ನು ಹೊಂದಿದ್ದೇವೆ ಅವರ ಮೂಲಕ ಕೊಲ್ಲುತ್ತೇವೆ.
ಮುಕೇಶ್ ಅಂಬಾನಿ ಅವರ ಭದ್ರತಾ ಉಸ್ತುವಾರಿ ನೀಡಿದ ದೂರಿನ ಆಧಾರದ ಮೇಲೆ ಮುಂಬೈನ ಗಾಮ್ದೇವಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಸೆಕ್ಷನ್ 387 ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪೊಲೀಸರು ಈ ಮೇಲ್ ಕಳುಹಿಸಿದ ವ್ಯಕ್ತಿಯ ಪತ್ತೆಗೆ ಬಲೆ ಬೀಸಿದ್ದಾರೆ.
ಕೊಲೆ ಬೆದರಿಕೆ ಇದೆ ಮೊದಲಲ್ಲ:
ಮುಖೇಶ್ ಅಂಬಾನಿಗೆ ಕೊಲೆ ಬೆದರಿಕೆ ಬರುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ, ಬಿಹಾರದ ದರ್ಭಾಂಗದ ವ್ಯಕ್ತಿಯೊಬ್ಬ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಕೊಲೆ ಬೆದರಿಕೆ ಕರೆಗಳನ್ನು ಮಾಡಿದ್ದ, ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.
ಮುಕೇಶ್ ಅಂಬಾನಿ ಈ ಬಾರಿಯ ಫೋರ್ಬ್ಸ್ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಸ್ಥಾನದಲ್ಲಿದ್ದಾರೆ. ಮಾತ್ರವಲ್ಲ ಹುರೇನ್ ಇಂಡಿಯಾ ನಡೆಸಿದ ಸಮೀಕ್ಷೆಯಲ್ಲೂ ಅಗ್ರಸ್ಥಾನದಲ್ಲಿದ್ದಾರೆ. ಅಂಬಾನಿ, ಜಗತ್ತಿನ 9ನೇ ಶ್ರೀಮಂತರಾಗಿದ್ದು, 83.4 ಬಿಲಿಯನ್ ಡಾಲರ್ ಆಸ್ತಿ ಮೌಲ್ಯ ಹೊಂದಿದ್ದಾರೆ.
Reliance Industries Chairman Mukesh Ambani received death threats via email threatening to kill him if he failed to pay ₹20 crores.
25-07-25 04:07 pm
Bangalore Correspondent
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
ಕಾಲ್ತುಳಿತ ಪ್ರಕರಣ ; ಆರ್ ಸಿಬಿ, ಡಿಎನ್ಎ, ಕೆಎಸ್ ಸಿ...
24-07-25 08:01 pm
25-07-25 04:40 pm
HK News Desk
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
ಕುಡುಬಿ ಸಮುದಾಯ ಎಸ್ಸಿ ಪಟ್ಟಿಗೆ ಸೇರಿಸಲು ರಾಜ್ಯದಿಂದ...
22-07-25 07:21 pm
26-07-25 11:37 am
Mangalore Correspondent
Congress, Mangalore: ಸಿದ್ದರಾಮಯ್ಯ ಆಡಳಿತದಲ್ಲೇ ದ...
26-07-25 10:44 am
Dharmasthala Case, SIT Meeting, Anucheth, Jit...
25-07-25 08:25 pm
DIG Anucheth Mangalore, SIT Dharmasthala: ಎಸ್...
25-07-25 06:05 pm
Udupi: ಸೊಸೈಟಿಗೆ ಅಡಿಟ್ ಮಾಡಿಕೊಡಲು ಲಂಚ ಬೇಡಿಕೆ ;...
25-07-25 02:25 pm
24-07-25 10:38 pm
Bangalore Correspondent
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am