ಬ್ರೇಕಿಂಗ್ ನ್ಯೂಸ್
28-10-23 07:45 pm HK News Desk ದೇಶ - ವಿದೇಶ
ಸೂರತ್, ಅ 28: ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಶವವಾಗಿ ಪತ್ತೆಯಾಗಿರುವ ಘಟನೆ ಗುಜರಾತ್ ನ ಸೂರತ್ನಲ್ಲಿ ಶನಿವಾರ ನಡೆದಿದೆ.
ಸೂರತ್ನ ಪಾಲನ್ಪುರ ಜಕತ್ನಾಕ್ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಹೇಳಿದ್ದಾರೆ.
![]()
6 ಮಂದಿ ವಿಷ ಸೇವಿಸಿ ಪ್ರಾಣ ಕಳೆದುಕೊಂಡಿದ್ದು, ಒಬ್ಬರು ನೇಣುಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾರೆಂದು ಪೊಲೀಸರು ಹೇಳಿದ್ದಾರೆ.
ಮನೀಶ್ ಸೋಲಂಕಿ, ಅವರ ಪತ್ನಿ ರೀಟಾ, ಅವರ ತಂದೆ ಕಾನು, ಅವರ ತಾಯಿ ಶೋಭಾ ಮತ್ತು ಮೂವರು ಮಕ್ಕಳಾದ ದಿಶಾ, ಕಾವ್ಯ ಮತ್ತು ಕುಶಾಲ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಕುಟುಂಬವು ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿತ್ತು ಎಂದು ಬರೆದಿರುವ ಪತ್ರವನ್ನು ಪೊಲೀಸರು ಘಟಾನ ಸ್ಥಳದಿಂದ ವಶಕ್ಕೆ ಪಡೆದುಕೊಂಡಿದ್ದಾರೆ.
ಆರ್ಥಿಕ ಸಮಸ್ಯೆಯಿಂದಲೇ ಈ ಹೆಜ್ಜೆಯನ್ನಿಟ್ಟಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆ ಹಿಂದಿನ ನಿಖರ ಕಾರಣ ತನಿಖೆ ಬಳಿಕವಷ್ಟೇ ತಿಳಿದು ಬರಬೇಕಿದೆ.
ಫರ್ನಿಚರ್ ವ್ಯವಹಾರವನ್ನು ಮಾಡುತ್ತಿದ್ದ ಮನೀಶ್ ಸೋಲಂಕಿ ಅವರಿಗೆ ಶನಿವಾರ ಮುಂಜಾನೆ ಕೆಲಸಗಾರರು ಕರೆ ಮಾಡಿದ್ದಾರೆ. ಆದರೆ ಕರೆ ಸ್ವೀಕರಿಸದಿದ್ದಾಗ ಮನೆಯ ಬಳಿಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಮಧ್ಯರಾತ್ರಿಯೇ ಕುಟುಂಬದ ಎಲ್ಲರಿಗೂ ವಿಷ ನೀಡಿ ಮನೀಶ್ ನೇಣು ಹಾಕಿಕೊಂಡಿದ್ದಾರೆ ಎನ್ನಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ವರದಿ ಬಂದ ಬಳಿಕ ಅವರ ಸಾವಿನ ಸಮಯ ಹಾಗೂ ಕಾರಣಗಳು ಸ್ಪಷ್ಟವಾಗಲಿದೆ.
Seven members of a family, including three children, were found dead at their residence in Surat city of Gujarat on Saturday, with the police suspecting it to be a case of mass suicide. The bodies of the seven deceased were found in an apartment in Adajan locality, police said, adding that a note was also recovered from their house which says that the family was taking the extreme step out of financial distress.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm