ಬ್ರೇಕಿಂಗ್ ನ್ಯೂಸ್
30-10-23 08:15 pm HK News Desk ದೇಶ - ವಿದೇಶ
ತಿರುವನಂತಪುರಂ, ಅ 30: ಮಲಯಾಳಂ ಕಿರುತೆರೆ ಲೋಕದ ಜನಪ್ರಿಯ ನಟಿ ರೆಂಜುಷಾ ಮೆನನ್ ಅವರು ಸಾವನ್ನಪ್ಪಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ಅವರ ಮೃತದೇಹವು ತಿರುವನಂತಪುರಂನ ಅಪಾರ್ಟ್ಮೆಂಟ್ನ ಅವರದೇ ಫ್ಲಾಟ್ನಲ್ಲಿ ಪತ್ತೆಯಾಗಿದೆ.
ಹಣಕಾಸಿನ ಸಮಸ್ಯೆಯಿಂದ ನಟಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಸಾವಿನ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಚ್ಚಿ ಮೂಲದ ರಂಜುಷಾ ತಮ್ಮ ಪತಿಯೊಂದಿಗೆ ಬಾಡಿಗೆ ಫ್ಲಾಟ್ನಲ್ಲಿ ವಾಸಿಸುತ್ತಿದ್ದರು. ರಂಜುಷಾ ಮೆನನ್ 20ಕ್ಕೂ ಹೆಚ್ಚು ಧಾರಾವಾಹಿಗಳಲ್ಲಿ ನಟಿಸಿದ್ದರು. ಸ್ತ್ರೀ, ಮಗಳುಡೆ ಅಮ್ಮ, ನಿಜಲಟ್ಟಂ, ಬಾಲಮಣಿ ಇವರ ಅಭಿನಯದ ಪ್ರಸಿದ್ಧ ಸೀರಿಯಲ್ಗಳು. ರಂಜುಷಾ ಕೆಲವು ಚಿತ್ರಗಳಲ್ಲೂ ಅಭಿನಯಿಸಿದ್ದರು. ಮೇರಿಕುಂಡೋರು ಕುಂಜಾದ್, ಸಿಟಿ ಆಫ್ ಗಾಡ್, ಲಿಸಮ್ಮಂದೆ ಹೌಸ್, ಬಾಂಬೆ ಮಾರ್ಚ್ 12, ತಲಪ್ಪಾವು, ವಾಧ್ಯಾರ್ ಮುಂತಾದ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದರು.
ನಟನೆಯ ಜೊತೆಗೆ ರಂಜುಷಾ ನೃತ್ಯದಲ್ಲೂ ಸಕ್ರಿಯರಾಗಿದ್ದರು. ಅವರು ಭರತನಾಟ್ಯವನ್ನು ಕಲಿತಿದ್ದರು. ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡಿದ್ದ ಅವರು ಬಳಿಕ ಭರತ ನಾಟ್ಯದಲ್ಲಿಯೂ ಪದವಿಯನ್ನು ಪೂರ್ಣಗೊಳಿಸಿದ್ದರು. ರೆಂಜುಷಾ ಅವರು ಉತ್ತಮ ವಿದ್ಯಾಭ್ಯಾಸ ಪಡೆದುಕೊಂಡಿದ್ದಾರೆ. ರೆಂಜುಷಾ ತಂದೆ ರವೀಂದ್ರನಾಥ್ ಅವರು ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿದ್ದರು. 'ತಮ್ಮ ತಂದೆ- ತಾಯಿ ನನಗೆ ಬಣ್ಣದ ಲೋಕಕ್ಕೆ ಬರಲು, ನೃತ್ಯಾಭ್ಯಾಸ ಮಾಡಲು ಸಾಕಷ್ಟು ಸಪೋರ್ಟ್ ಮಾಡಿದ್ದರು' ಎಂದು ರೆಂಜುಷಾ ಹಿಂದೊಮ್ಮೆ ಹೇಳಿಕೊಂಡಿದ್ದರು. ಸದ್ಯ ರೆಂಜುಷಾ ಅವರ ಅಗಲಿಕೆಯು ಅವರ ಸ್ನೇಹಿತರು ಮತ್ತು ಆಪ್ತರಿಗೆ ಆಘಾತ ನೀಡಿದ್ದಾರೆ.
Malayalam actress Renjusha Menon was found dead at her flat in Thiruvananthapuram on Monday morning. The 30-year-old actor was found hanging in the flat she shared with her husband Manoj, who is also an actor. Some reports say that she was going through financial troubles at the time of her death.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm